7:19 AM Monday6 - May 2024
ಬ್ರೇಕಿಂಗ್ ನ್ಯೂಸ್
ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ…

ಇತ್ತೀಚಿನ ಸುದ್ದಿ

ಬೋಳಾರ ಸರಕಾರಿ ಪ್ರಾಥಮಿಕ ಶಾಲೆಗೆ ಸ್ಮಾರ್ಟ್ ಟಚ್ : 1.25 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ

13/10/2021, 14:03

ಮಂಗಳೂರು(reporterkarnataka.com) ಸ್ಮಾರ್ಟ್ ಸಿಟಿ ಯೋಜನೆಯಡಿ ಸರಕಾರಿ ಶಾಲೆಗಳನ್ನು ಸ್ಮಾರ್ಟ್ ಸ್ಕೂಲ್ ಆಗಿ ಪರಿವರ್ತಿಸಿ ಹೊಸ ರೂಪ ನೀಡುವ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ವಿನೂತನ ಪ್ರಯೋಗ ಮಾಡಲಾಗಿದೆ ಎಂದು ಶಾಸಕ ಡಿ. ವೇದವ್ಯಾಸ್ ಕಾಮತ್ ಹೇಳಿದರು.

ಮಂಗಳೂರು ಮಹಾನಗರ ಪಾಲಿಕೆಯ ಬೋಳಾರ ವಾರ್ಡಿನ ದಕ್ಷಿಣ ಜಿಲ್ಲಾ ಪಂಚಾಯಿತಿ ಕಿರಿಯ ಪ್ರಾಥಮಿಕ ಶಾಲೆಯನ್ನು ಆಧುನಿಕರಣಗೊಳಿಸಿ ಸ್ಮಾರ್ಟ್ ಸ್ಕೂಲ್ ಯೋಜನೆ ಉದ್ಘಾಟಿಸಿ ಮಾತನಾಡಿದ ಅವರು, ಕಾಲಕ್ಕೆ ತಕ್ಕಂತೆ ವ್ಯವಸ್ಥೆಗಳನ್ನು ಬದಲಾಯಿಸುವ ಅನಿವಾರ್ಯತೆಯಿದೆ. ಆ ನಿಟ್ಟಿನಲ್ಲಿ ಶಾಲೆಗಳನ್ನು ಆಧುನಿಕರಣಗೊಳಿಸಿ ಮಕ್ಕಳಿಗೆ ಶಿಕ್ಷಣ ನೀಡುವ ಸಲುವಾಗಿ ಸ್ಮಾರ್ಟ್ ಸಿಟಿ ಯೋಜನೆಯಿಂದ ಬೋಳಾರ ಶಾಲೆಯನ್ನು ಸಂಪೂರ್ಣವಾಗಿ ಆಧುನಿಕರಣಗೊಳಿಸಲಾಗಿದೆ ಎಂದರು.

1.25 ಕೋಟಿ ಅನುದಾನದಲ್ಲಿ ಪ್ರಮುಖವಾಗಿ ಹಂಚು, ಪಕ್ಕಾಸು, ಬದಲಾಯಿಸಲಾಗಿದೆ. ಇಡೀ ಶಾಲೆಗೆ ಟೈಲ್ಸ್ ಅಳವಡಿಸಲಾಗಿದೆ. ಹೊರಾಂಗಣದಲ್ಲಿ ಟೈಲ್ಸ್, ಗೋಡೆಗಳಿಗೆ ಪ್ಲಾಸ್ಟರಿಂಗ್, ಸಂಪೂರ್ಣ ಶಾಲೆಗೆ ಬಣ್ಣ ಬಳಿದು ಸುಂದರಗೊಳಿಸಲಾಗಿದೆ. ಬಾಗಿಲು ಕಿಟಿಕಿ, ಆರ್.ಸಿ.ಸಿ ಕಟ್ಟಡಗಳ ಮೇಲೆ ವಾಟರ್ ಪ್ರೂಫಿಂಗ್ ಮಾಡಲಾಗಿದೆ. ಶೌಚಾಲಯಗಳನ್ನು ಸಂಪೂರ್ಣವಾಗಿ ನವೀಕರಿಸಲಾಗಿದೆ. ಶಾಲಾ ವಾರ್ಷಿಕೋತ್ಸವ ಹಾಗೂ ಇತರೆ ಕಾರ್ಯಕ್ರಮಗಳಿಗಾಗಿ ವೇದಿಕೆ, ವಿದ್ಯುತ್‌ ತಂತಿ, ನೀರಿನ ಕೊಳವೆ, ಪ್ಯಾನ್ ಹಾಗೂ ಟ್ಯೂಬ್ ಲೈಟ್ ಗಳನ್ನು ಸಂಪೂರ್ಣವಾಗಿ ಬದಲಿಸಿದ್ದೇವೆ. ಶಾಲೆಯ ಆವರಣದಲ್ಲಿ ಹುಲ್ಲು ಹಾಸು, ಹೂವಿನ ಗಿಡಗಳನ್ನು ನೆಡಲಾಗಿದೆ. ವಾಲಿಬಾಲ್ ಕ್ರೀಡಾಂಗಣಗಳನ್ನು ನಿರ್ಮಾಣ ಮಾಡಲಾಗಿದೆ. ಹೊರಾಂಗಣದಲ್ಲಿ ವಿದ್ಯುತ್ ದೀಪಗಳನ್ನು ಅಳವಡಿಸಲಾಗಿದೆ ಹಾಗೂ ಮಳೆ ನೀರು ಚರಂಡಿಗಳನ್ನು ಕೂಡ ರಚಿಸಲಾಗಿದೆ ಎಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ, ಉಪ ಮೇಯರ್ ಸುಮಂಗಲ ರಾವ್, ರಾಜ್ಯ ಮೀನುಗಾರಿಕಾ ನಿಗಮದ ಅಧ್ಯಕ್ಷ ನಿತಿನ್ ಕುಮಾರ್, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರವಿಶಂಕರ್ ಮಿಜಾರ್, ಪಾಲಿಕೆ ಮುಖ್ಯ ಸಚೇತಕ ಸುಧೀರ್ ಶೆಟ್ಟಿ ಕಣ್ಣೂರು, ಪಾಲಿಕೆ ಸ್ಥಾಯಿ ಸಮಿತಿಯ ಅಧ್ಯಕ್ಷ ಸಂದೀಪ್ ಗರೋಡಿ, ಲೋಕೇಶ್ ಬೊಳ್ಳಾಜೆ, ಲೀಲಾವತಿ ಪ್ರಕಾಶ್, ಶೋಭಾ ರಾಜೇಶ್, ಸ್ಥಳೀಯ ಕಾರ್ಪೋರೇಟರ್ ರೇವತಿ‌ ಶ್ಯಾಮ್ ಸುಂದರ್, ಪಾಲಿಕೆ ಸದಸ್ಯರು, ಬಿಜೆಪಿ ಮುಖಂಡರು, ಅಧಿಕಾರಿಗಳು, ಸ್ಥಳೀಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು