8:12 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಕಸ್ಟಮ್ಸ್ ಸುಂಕ ಮತ್ತು ನಿರ್ದಿಷ್ಟ ಖಾದ್ಯ ತೈಲಗಳ ಮೇಲಿನ ಕೃಷಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸೆಸ್  ಕಡಿತ: ಸಿಬಿಐಸಿ ಆದೇಶ

14/10/2021, 08:39

ಹೊಸದಿಲ್ಲಿ(reporterkarnataka.com) : ಕೇಂದ್ರೀಯ ಪರೋಕ್ಷ ತೆರಿಗೆಗಳು ಮತ್ತು ಕಸ್ಟಮ್ಸ್ ಮಂಡಳಿ (ಸಿಬಿಐಸಿ) ಎರಡು ಪ್ರತ್ಯೇಕ ಆದೇಶಗಳಲ್ಲಿ ಮೂಲ ಕಸ್ಟಮ್ಸ್ ಸುಂಕ ಮತ್ತು ನಿರ್ದಿಷ್ಟ ಖಾದ್ಯ ತೈಲಗಳ ಮೇಲಿನ ಕೃಷಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸೆಸ್ ಅನ್ನು ಕಡಿತಗೊಳಿಸಿದೆ.

ಕಚ್ಚಾ ತಾಳೆ ಎಣ್ಣೆ, ಕಚ್ಚಾ ಸೋಯಾ-ಬೀನ್ ಎಣ್ಣೆ ಮತ್ತು ಕಚ್ಚಾ ಸೂರ್ಯಕಾಂತಿ ಬೀಜದ ಎಣ್ಣೆಯ ಮೇಲಿನ ಮೂಲ ಕಸ್ಟಮ್ಸ್ ಸುಂಕವನ್ನು ಶೇ 2.5ರಿಂದ ಶೂನ್ಯಕ್ಕೆ ಇಳಿಸಲಾಗಿದೆ. ಕಚ್ಚಾ ತಾಳೆ ಎಣ್ಣೆಯು ಕೃಷಿ ಸೆಸ್ ಅನ್ನು ಶೇ 20ರಿಂದ ಶೇ 7.5ಕ್ಕೆ ಭಾರೀ ಪ್ರಮಾಣದಲ್ಲಿ ಇಳಿಕೆ ಮಾಡಿರುವುದರ ಅನುಕೂಲ ಗ್ರಾಹಕರಿಗೆ ಆಗಲಿದೆ.

ಕಚ್ಚಾ ಸೋಯಾ-ಬೀನ್ ಎಣ್ಣೆ ಮತ್ತು ಕಚ್ಚಾ ಸೂರ್ಯಕಾಂತಿ ಎಣ್ಣೆ ಎರಡರ ಮೇಲಿನ ಕೃಷಿ ಸೆಸ್ ಅನ್ನು ಶೇ 20ರಿಂದ ಶೇ 5ಕ್ಕೆ ಇಳಿಸಲಾಗಿದೆ. ಈ ಎಲ್ಲ ಬದಲಾವಣೆಗಳು ಗುರುವಾರದಿಂದ (ಅಕ್ಟೋಬರ್ 14, 2021ರಿಂದ 2021ರ ಮಾರ್ಚ್ ರ ಅಂತ್ಯದವರೆಗೆ) ಜಾರಿಯಲ್ಲಿರುತ್ತವೆ ಎಂದು ಆದೇಶಗಳಲ್ಲಿ ತೋರಿಸಲಾಗಿದೆ.

ಖಾದ್ಯ ದರ್ಜೆಯ ಸೋಯಾಬೀನ್ ಎಣ್ಣೆ, ಖಾದ್ಯ ದರ್ಜೆಯ ಸೂರ್ಯಕಾಂತಿ ಎಣ್ಣೆ, ಸಂಸ್ಕರಿಸಿದ ಬ್ಲೀಚ್ ಡಿಯೋಡರೈಸ್ಡ್ (ಆರ್ ಬಿಡಿ) ಪಾಮ್ ಆಯಿಲ್, ಆರ್ ಬಿಡಿ ಪಾಮೋಲಿನ್, ಆರ್ ಬಿಡಿ ಪಾಮ್ ಸ್ಟೀರಿನ್ ಮತ್ತು ಕಚ್ಚಾ ತಾಳೆ ಎಣ್ಣೆಯನ್ನು ಹೊರತುಪಡಿಸಿ ಯಾವುದೇ ಪಾಮ್ ಎಣ್ಣೆಯನ್ನು ಶೇ 32.5ರಿಂದ ಶೇ 17.5ಕ್ಕೆ ಕಡಿಮೆ ಮಾಡಲಾಗಿದೆ. ಅಕ್ಟೋಬರ್ 8ರಿಂದ ಜಾರಿಗೆ ಬರುವಂತೆ ನ್ಯಾಷನಲ್ ಕಮಾಡಿಟಿ ಮತ್ತು ಡೆರಿವೇಟಿವ್ಸ್ ಎಕ್ಸ್‌ಚೇಂಜ್ ಲಿಮಿಟೆಡ್ (NCDEX)ನಲ್ಲಿ ಸಾಸಿವೆ ಎಣ್ಣೆ ಮತ್ತು ಎಣ್ಣೆಬೀಜಗಳ ಮೇಲೆ ಸ್ಪೆಕ್ಯುಲೆಟಿವ್ (ಸಟ್ಟಾ) ವ್ಯಾಪಾರವನ್ನು ಸರ್ಕಾರ ಸ್ಥಗಿತಗೊಳಿಸಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಖಾದ್ಯ ತೈಲದ ಹೆಚ್ಚಿನ ಬೆಲೆಗಳು ದೇಶೀಯ ಬೆಲೆಯ ಮೇಲೆ ಗಣನೀಯ ಪರಿಣಾಮ ಬೀರುತ್ತವೆ. ಗ್ರಾಹಕ ಬೆಲೆ ಸೂಚ್ಯಂಕ ಆಧಾರಿತ ತೈಲಗಳು ಮತ್ತು ಫ್ಯಾಟ್ ಹಣದುಬ್ಬರವು ಸೆಪ್ಟೆಂಬರ್‌ನಲ್ಲಿ ವರ್ಷದಿಂದ ವರ್ಷಕ್ಕೆ ಶೇ 34.19 ಹೆಚ್ಚಾಗಿದೆ ಎಂದು ಅಂಕಿಅಂಶಗಳ ಸಚಿವಾಲಯದಿಂದ ಲಭ್ಯವಿರುವ ಮಾಹಿತಿಯ ಪ್ರಕಾರ ತಿಳಿದುಬಂದಿದೆ. ಗ್ರಾಹಕರ ಆಹಾರ ಬೆಲೆ ಸೂಚ್ಯಂಕವನ್ನು ಆಧರಿಸಿದ ಒಟ್ಟಾರೆ ಆಹಾರ ಹಣದುಬ್ಬರವು ಸೆಪ್ಟೆಂಬರ್‌ನಲ್ಲಿ ಶೇ 0.68ರಷ್ಟಿತ್ತು, ಇದು ಹಿಂದಿನ ವರ್ಷದ ಅವಧಿಯಲ್ಲಿ ಶೇ 10.68ರಷ್ಟಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು