10:14 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಅಗಸಗಟ್ಟೆ ತಿಂದಪ್ಪರಿಗೆ ‘ಕರುನಾಡ ಹರಿಕಾರಶ್ರೀ’ ಪ್ರಶಸ್ತಿ ಪ್ರದಾನ

15/10/2021, 19:05

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಯುವ ಪುರಾಣ ಪ್ರವಚನಕಾರ ಹಾಗೂ ರಂಗಕಲಾವಿದ ಅಗಸಗಟ್ಟೆ ತಿಂದಪ್ಪ ಅವರಿಗೆ ಮಂಡ್ಯ ಜಿಲ್ಲೆಯ ಕರುನಾಡ ಸೇವಾ ಟ್ರಸ್ಟ್  ಕರುನಾಡ ಹರಿಕಾರಶ್ರೀ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿದೆ. 

ಮಂಡ್ಯ ಜಿಲ್ಲೆಯ ಕರುನಾಡ ಸೇವಾ ಟ್ರಸ್ಟ್ ವತಿಯಿಂದ ಜರುಗಿದ ಕಾರ್ಯಕ್ರಮದಲ್ಲಿ, ವಿವಿಧ ಕ್ಷೇತ್ರಗಳಲ್ಲಿ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವ ರಾಜ್ಯದ ವಿವಿಧ ಜಿಲ್ಲೆಗಳ ಗಣ್ಯಮಾನ್ಯರನ್ನು ಗುರುತಿಸಿ ಸನ್ಮಾನಿಸಿದೆ. ಟ್ರಸ್ಟ್‌ ವತಿಯಿಂದ ಗಣ್ಯಮಾನ್ಯರನ್ನು  ಕಾರ್ಯಕ್ರಮಕ್ಕೆ ಬರಮಾಡಿಕೊಂಡು,ಅವರನ್ನ ಸತ್ಕರಿಸಿ ಗೌರವ ಪೂರ್ವಕವಾಗಿ ಅಭಿನಂದಿಸಿದೆ. ತಿಂದಪ್ಪರ ಕಲಾ ಸೇವೆಯನ್ನು ಪರಿಗಣಿಸಿ ಅವರಿಗೆ ರಾಜ್ಯಮಟ್ಟದ “ಕರುನಾಡ  ಹರಿಕಾರಶ್ರೀ” ಪ್ರಶಸ್ತಿ ಗೌರವಿಸಿದೆ. ಅಕ್ಟೋಬರ್ 9ರಂದು ಮಂಡ್ಯದಲ್ಲಿ ಟ್ರಸ್ಟ್‌ ವತಿಯಿಂದ ಆಯೋಜಿಸಿದ್ದ, ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅವರಿಗೆ ಪ್ರಶಸ್ತಿ ನೀಡಲಾಯಿತು.

ಅಭಿನಂದನೆ: ಕೂಡ್ಲಿಗಿ ಪಟ್ಟಣ ಸೇರಿದಂತೆ ತಾಲೂಕಿನ ಹಿರಿಯ ರಂಗಕಲಾವಿದರು. ವಿವಿಧ ಸಮುದಾಯಗಳ ಮುಖಂಡರು, ವಿವಿಧ ಪಕ್ಷಗಳ ಪ್ರಮುಖರು, ವಿವಿದ  ಕಲಾವಿದರ ಸಂಘಟನೆಗಳ ಪ್ರಮುಖರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ನಾಗರೀಕರು ಹಾಗೂ ಜನಪ್ರತಿನಿಧಿಗಳು ಪ್ರಶಸ್ತಿ ಪಡೆದ ಯುವ ರಂಗಕಲಾವಿದ ಅಗಸಗಟ್ಟೆ ತಿಂದಪ್ಪರವರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

 

ಇತ್ತೀಚಿನ ಸುದ್ದಿ

ಜಾಹೀರಾತು