ಇತ್ತೀಚಿನ ಸುದ್ದಿ
ವಾಯುಭಾರ ಕುಸಿತ: ಮಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಭಾರಿ ಮಳೆ
17/10/2021, 11:28
ಬೆಂಗಳೂರು(reporterkarnataka.com): ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರಾಜ್ಯದ ಕರಾವಳಿ ಜಿಲ್ಲೆಗಳು ದಕ್ಷಿಣ ಒಳನಾಡಿನ ಹಾಗೂ ಉತ್ತರ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಶನಿವಾರ ಸಂಜೆಯಿಂದ ಮತ್ತೆ ಗುಡುಗು ಸಹಿತ ಭಾರಿ ಮಳೆಯಾಗುತ್ತಿದೆ.
ಭಾನುವಾರ ಮತ್ತು ಸೋಮವಾರ ಕೂಡ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾವೇರಿ, ಧಾರವಾಡ, ಬೆಳಗಾವಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಗದಗ ಸೇರಿ ಒಟ್ಟು 16 ಜಿಲ್ಲೆಗಳಿಗೆ ಇಂದು ಮತ್ತು ನಾಳೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ
ಅರಬ್ಬಿ ಸಮುದ್ರದ ಲಕ್ಷದ್ವೀಪ ಭಾಗದಲ್ಲಿ ಹಾಗೂ ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತವಾಗಿದ್ದು, ಕರ್ನಾಟಕದಲ್ಲಿ ಅಕ್ಟೋಬರ್ 17ರವರೆಗೂ ಮಳೆ ಮುಂದುವರಿಯಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
.