ಇತ್ತೀಚಿನ ಸುದ್ದಿ
ಉಪ್ಪಿನಂಗಡಿ: ನೇತ್ರಾವತಿ ನದಿಗೆ ಹಾರಿ ಗೇರುಕಟ್ಟೆ ನಿವಾಸಿ ವೃದ್ಧ ಆತ್ಮಹತ್ಯೆ
18/10/2021, 13:50

ಉಪ್ಪಿನಂಗಡಿ(reporterkarnataka.com): ನೇತ್ರಾವತಿ ನದಿಗೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆಯ ಮುತ್ತಪ್ಪ ಶೆಟ್ಟಿ (70) ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದು ಬಂದಿದೆ.
ಸ್ಥಳೀಯರು ಮುತ್ತಪ್ಪ ಶೆಟ್ಟಿ ಅವರನ್ನು ರಕ್ಷಿಸಲು ಪ್ರಯತ್ನಿಸಿದರೂ ಫಲಕಾರಿಯಾಗಿಲ್ಲ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ .ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.