11:40 PM Friday1 - May 2026
ಬ್ರೇಕಿಂಗ್ ನ್ಯೂಸ್
ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ…

ಇತ್ತೀಚಿನ ಸುದ್ದಿ

ವಿಮಾನಕ್ಕೆ ಬಳಸುವ ಇಂಧನಕ್ಕಿಂತಲೂ ಬೈಕ್, ಕಾರ್‌ಗೆ ಬಳಸುವ ಪೆಟ್ರೋಲ್ ದುಬಾರಿ

18/10/2021, 21:46

ನವದೆಹಲಿ(reporterkarnataka.com)
ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಭಾನುವಾರ ತಲಾ 35 ಪೈಸೆಯಷ್ಟು ಏರಿಕೆ ಮಾಡಿದ್ದು, ತನ್ಮೂಲಕ ವಿಮಾನಗಳ ಇಂಧನವಾದ ಏವಿಯೇಷನ್ ಟರ್ಬೈನ್ ಇಂಧನ (ಎಟಿಎಫ್) ಕ್ಕಿಂತಲೂ ಕಾರು ಮತ್ತು ದ್ವಿಚಕ್ರ ವಾಹನ ಸವಾರರು ಪೆಟ್ರೋಲ್‌ಗೆ ಶೇ.33ರಷ್ಟು ಹೆಚ್ಚು ದರ ತೆರುವಂತಾಗಿದೆ.

ವಿಮಾನದ ಇಂಧನ ಎಟಿಎಫ್‌ಗೆ ಒಂದು ಲೀಟರ್‌ಗೆ 79 ರು. ಇದ್ದರೆ, ದೇಶಾದ್ಯಂತ ಪೆಟ್ರೋಲ್ ದರ 110 ರು. ಆಸುಪಾಸಿನಲ್ಲಿದೆ. ಅಂದರೆ ಪೆಟ್ರೋಲ್ ದರವು ವೈಮಾನಿಕ ಇಂಧನಕ್ಕಿಂತ ಶೇ.33 ರಷ್ಟು ಹೆಚ್ಚು ದುಬಾರಿಯಾದಂತಾಗಿದೆ.

ಕಳೆದ 4 ದಿನಗಳಿಂದ ಇಂಧನ ದರ ಏರಿಕೆ ಪರ್ವ ಮುಂದುವ ರಿದಿದ್ದು, ಈ 4 ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ತಲಾ 1.40 ರು. ಏರಿಕೆಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು