9:09 PM Friday3 - May 2024
ಬ್ರೇಕಿಂಗ್ ನ್ಯೂಸ್
ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:…

ಇತ್ತೀಚಿನ ಸುದ್ದಿ

ಪಠ್ಯ ಕಡಿತ ಇಲ್ಲ, ಹಾಗಾದರೆ ಭಾನುವಾರ ಶಾಲೆಯ ಬಗ್ಗೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದೇನು? ಮುಂದಕ್ಕೆ ಓದಿ

19/10/2021, 08:51

ಬೆಂಗಳೂರು(reporterkarnataka.com): ಪಠ್ಯ ಪೂರ್ಣಗೊಳಿಸಲು ಭಾನುವಾರವೂ ಶಾಲೆ ನಡೆಸಲಾಗುವುದು ಎಂದು ಹೇಳಲಾಗಿತ್ತು. ಆದರೆ, ಪಠ್ಯ ಕಡಿತಗೊಳಿಸುವುದಿಲ್ಲ ಮತ್ತು ಭಾನುವಾರ ಶಾಲೆ ಇರುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾಹಿತಿ ನೀಡಿದ್ದಾರೆ.

ಭಾನುವಾರ ಪೋಷಕರಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ರಜೆಯನ್ನು ಪಠ್ಯ ಕಡಿತ ಮಾಡುವುದು ಬೇಡವೆಂದು ಶಿಕ್ಷಕರು ಸಲಹೆ ನೀಡಿದ್ದಾರೆ. ಹೀಗಾಗಿ ಸದ್ಯಕ್ಕೆ ಪಠ್ಯ ಕಡಿತ ಮಾಡದಿರಲು ತೀರ್ಮಾನಿಸಲಾಗಿದೆ. ಪೂರ್ಣ ಪಠ್ಯ ಬೋಧನೆ ಮಾಡಲಾಗುವುದು. ಆದರೆ, ಸಮಯವಿರುವುದರಿಂದ ಪಠ್ಯ ಪೂರ್ಣಗೊಳಿಸಲು ಭಾನುವಾರವೂ ರಜೆ ರದ್ದುಗೊಳಿಸಿ ತರಗತಿ ನಡೆಸುವ ಆಲೋಚನೆ ಇಲ್ಲ. ಶನಿವಾರ ಅರ್ಧದಿನ ಮತ್ತು ಭಾನುವಾರ ಶಾಲೆಗಳಿಗೆ ರಜೆ ಇರುತ್ತದೆ. ಇರುವ ಅವಧಿಯಲ್ಲಿ ಪಠ್ಯ ಪೂರ್ಣಗೊಳಿವುದಾಗಿಶಿಕ್ಷಕರು ಹೇಳಿದ್ದಾರೆ. ಮುಂದಿನ ವರ್ಷಗಳಲ್ಲಿ ಸಮಸ್ಯೆಯಾಗುತ್ತದೆ ಎಂಬ ಕಾರಣಕ್ಕೆ ಪಠ್ಯ ಕಡಿತಗೊಳಿಸದೇ ಪೂರ್ಣಪಠ್ಯ ಬೋಧನೆ ಮಾಡಲಾಗುವುದು ಎಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು