12:49 AM Tuesday3 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಕಾಳಾವರ: ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ  ವತಿಯಿಂದ ಕೃಷಿ ಯಂತ್ರೋಪಕರಣಗಳ ಬಾಡಿಗೆ ಸೇವಾ ಕೇಂದ್ರ ಉದ್ಘಾಟನೆ 

21/10/2021, 08:54

ಕುಂದಾಪುರ(reporterkarnataka.com):  ರೈತರು ಕೃಷಿಯನ್ನು ಬಿಟ್ಟು ಹೊರಬರದಿರಲು ಸರಕಾರ ಉತ್ತಮ ಯೋಜನೆಗಳನ್ನು ರೂಪಿಸಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಹೇಳಿದರು.

ಬುಧವಾರ ಕಾಳಾವರದಲ್ಲಿ ಧರ್ಮಸ್ಥಳ ಗ್ರಾಮಭಿವೃದ್ದಿ ಯೋಜನೆ ಬಿ.ಸಿ. ಟ್ರಸ್ಟ್ ವತಿಯಿಂದ ಕೃಷಿ ಯಂತ್ರೋಪಕರಣಗಳ ಬಾಡಿಗೆ ಸೇವಾ ಕೇಂದ್ರದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಜಗತ್ತಿಗೆ ಕರೊನಾ ಬಂದು ಎಲ್ಲರು ಮನೆಯಲ್ಲಿದ್ದಾಗ ರೈತ ಕೃಷಿ ನಡೆಸಿದ್ದಾನೆ. ಆತ ಎಲ್ಲರ ಹಾಗೇ ಕೊರೊನಾ ಎಂದು ಮನೆಯಲ್ಲಿ ಕುಳಿತಿದ್ದರೇ ಹಸಿವಿನಿಂದ ಎಷ್ಟೋ ಜನರು ಸಾಯುತ್ತಿದ್ದರು ಎಂದರು. 

ಕೃಷಿಯಲ್ಲಿ ಬರುವ ಲಾಭಕ್ಕಿಂತ ವೈಯಕ್ತಿಕ ಖರ್ಚು ಹೆಚ್ಚಾಗಿ ಜನರು ಕೃಷಿಯ ಒಲವನ್ನು ಕಳೆದುಕೊಂಡಿದ್ದಾರೆ. ಯಂತ್ರೋಪಕರಣಗಳನ್ನು ಕೃಷಿ ಚಟುವಟಿಕೆಯಲ್ಲಿ ಬಳಸಿಕೊಳ್ಳಲು ಯೋಜನೆ ರೂಪಿಸಲಾಗಿದೆ. ರೈತರು ಹಾಗೂ ಸಣ್ಣ ರೈತರಿಗೆ ಯಂತ್ರೋಪಕರಣಗಳು ಬಾಡಿಗೆಗೆ ದೊರಕುವಂತೆ ಬೇರೆ ಬೇರೆ ಭಾಗಗಳಲ್ಲಿ ಬಾಡಿಗೆ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ನುಡಿದರು.


ಗ್ರಾಹಕ ಸೇವಾ ಕೇಂದ್ರ ಉದ್ಘಾಟಿಸಿ ಮಾತನಾಡಿದ ಮಾಜಿ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ, ಕೃಷಿ ಯಂತ್ರಗಳ ಬಾಡಿಗೆ ಕೇಂದ್ರದಿಂದ ಈ ಭಾಗದ ರೈತರಿಗೆ ಹೆಚ್ಚು ಅನೂಕೂಲವಾಗುತ್ತದೆ. ಸಣ್ಣ ಮತ್ತಯ ಅತೀ ಸಣ್ಣ ರೈತರಿಗೆ ಸಹಾಯವಾಗುವ ನಿಟ್ಟಿನಲ್ಲಿ ಈ ಯೋಜನೆ ಉತ್ತಮವಾಗಿ ಕಾರ್ಯ ನಿರ್ವಹಿಸಲಿದೆ ಎಂದರು.

ಈ ಸಂದರ್ಭದಲ್ಲಿ ಜನಜಾಗೃತಿ ಸಮಿತಿ ಸ್ಥಾಪಕಾಧ್ಯಕ್ಷ ಬಿ. ಅಪ್ಪಣ್ಣ ಹೆಗ್ಡೆ, ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಎಲ್.ಹೆಚ್. ಮಂಜುನಾಥ್, ಕಾಳಾವರ ಗ್ರಾ.ಪಂ ಅಧ್ಯಕ್ಷೆ ಆಶಾಲತಾ ಶೆಟ್ಟಿ, ಸಹಾಯಕ ಕೃಷಿ ನಿರ್ದೇಶಕರಾದ ರೂಪಾ ಜೆ ಮಾಡ, ಯೋಜನಾಧಿಕಾರಿ ವಸಂತ ಸಾಲ್ಯಾನ್, ಅಬ್ರಹಾಂ ಎಂ.ಕೆ., ಸ್ಥಳದಾನಿ ಸುಜಿತ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

ಕುಂದಾಪುರ ವಲಯದ ಧ.ಗ್ರಾ. ಯೋಜನೆಯ ಕೃಷಿ ಅಧಿಕಾರಿ‌ ಚೇತನ್ ಕಾರ್ಯಕ್ರಮ ನಿರೂಪಿಸಿದರು.  ಡಾ. ಎಲ್.ಹೆಚ್. ಮಂಜುನಾಥ್ ಸ್ವಾಗತಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು