8:55 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

‘ಕೂ’ ಗೆ ಕಾಲಿಟ್ಟ ‘ಭಜರಂಗಿ’; ಶಿವರಾಜಕುಮಾರ್ ನಟನೆಯ ಬಹು ನಿರೀಕ್ಷಿತ ‘ಭಜರಂಗಿ 2’ ಸಿನಿಮಾ ಟ್ರೈಲರ್ ಬಿಡುಗಡೆ

21/10/2021, 10:18

ಬೆಂಗಳೂರು(reporterkarnataka.com): ಹ್ಯಾಟ್ರಿಕ್ ಹೀರೋ ಡಾ.  ಶಿವರಾಜ್ ಕುಮಾರ್ ಅವರು  ಭಾರತದ ಅತಿದೊಡ್ಡ ಬಹುಭಾಷಾ ಮೈಕ್ರೋ ಬ್ಲಾಗಿಂಗ್ ಪ್ಲಾಟ್ಫಾರ್ಮ್ – ಕೂ ಸೇರಿದ್ದು,   @NimmaShivanna ಹ್ಯಾಂಡಲ್ ಬಳಸಿ ಭಜರಂಗಿ 2 ಟ್ರೈಲರ್ ಪೋಸ್ಟರ್ ಹಂಚಿಕೊಂಡಿದ್ದಾರೆ. 

ಶಿವರಾಜ್ ಕುಮಾರ್ ಅವರು ‘ಕೂ’ ಸೇರುವ ಮೂಲಕ ಭಾರತದಾದ್ಯಂತ ಇರುವ ಅವರ ಅಭಿಮಾನಿಗಳಿಗೆ ಅವರವರ ಭಾಷೆಯಲ್ಲೇ ತಲುಪಲಿದ್ದಾರೆ. ಇನ್ನಷ್ಟು ಜನರಿಗೆ ಹತ್ತಿರವಾಗಲಿದ್ದಾರೆ. ಅಭಿಮಾನಿಗಳು ಅವರ ಮುಂದಿನ ಸಿನೆಮಾಗಳ ಕುರಿತು ಕೂ ನಲ್ಲಿ ತಿಳಿಯಬಹುದು.  ಈಗಾಗಲೇ ಮುಖ್ಯಮಂತ್ರಿ ಸೇರಿ ವಿವಿಧ ಗಣ್ಯರು ಕೂ ಮೂಲಕ ಜನರನ್ನು ತಲುಪುತ್ತಿದ್ದಾರೆ. 

ನಿರ್ದೇಶಕ ಎ. ಹರ್ಷ ಮತ್ತು ನಟ ಶಿವರಾಜ್​ಕುಮಾರ್​ ಕಾಂಬಿನೇಷನ್​ನಲ್ಲಿ ಮೂಡಿಬಂದಿರುವ ‘ಭಜರಂಗಿ 2’ ಚಿತ್ರದ ಬಗ್ಗೆ ಅಭಿಮಾನಿಗಳು ಸಿಕ್ಕಾಪಟ್ಟೆ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈಗಾಗಲೇ ಈ ಸಿನಿಮಾದ ಟೀಸರ್​ ಮತ್ತು ಪೋಸ್ಟರ್​ಗಳು ಭಾರಿ ಹೈಪ್​ ಸೃಷ್ಟಿಸಿವೆ. ಈಗ ಶಿವರಾಜ್ ಕುಮಾರ್ ಅವರು ಕೂ ವೇದಿಕೆಯಲ್ಲಿ  ಟ್ರೈಲರ್ ಹಂಚಿಕೊಳ್ಳುವ ಮೂಲಕ ಅಭಿಮಾನಿಗಳ ಮನ ತಣಿಸಿದ್ದಾರೆ. 

ಸೂಪರ್​ ನ್ಯಾಚುರಲ್​ ಅಂಶಗಳನ್ನು ಹೊಂದಿರುವ ಈ ಸಿನಿಮಾ ಹೇಗೆ ಮೂಡಿಬಂದಿದೆ ಎಂಬುದರ ಝಲಕ್​ ಅನ್ನು ಈ ಟ್ರೇಲರ್​ನಲ್ಲಿ ತೋರಿಸಲಾಗಿದೆ. ನಾಯಕ ನಟ ಶಿವರಾಜ್​ಕುಮಾರ್​, ನಾಯಕಿ ಭಾವನಾ ಮೆನನ್​ ಮಾತ್ರವಲ್ಲದೇ ಎಲ್ಲ ಪಾತ್ರಗಳ ಪೋಸ್ಟರ್​ಗಳನ್ನು ತುಂಬ ಚೆನ್ನಾಗಿ ವಿನ್ಯಾಸಗೊಳಿಸಲಾಗಿದೆ. ಕೆಲವೇ ದಿನಗಳ ಹಿಂದೆ ಹಿರಿಯ ನಟಿ ಶ್ರುತಿ, ಖಳನಟ ಲೋಕಿ, ಖಳನಟ ಚೆಲುವರಾಜು ಅವರ ಪೋಸ್ಟರ್​ಗಳನ್ನು ಬಿಡುಗಡೆ ಮಾಡಲಾಗಿತ್ತು.

ಮಂಜು ಪಾವಗಡ, ಶಿವರಾಜ್​ ಕೆ. ಆರ್​ ಪೇಟೆ ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಜಯಣ್ಣ ಕಂಬೈನ್ಸ್​ ಬ್ಯಾನರ್​ನಲ್ಲಿ ‘ಭಜರಂಗಿ 2’ ನಿರ್ಮಾಣ ಆಗಿದೆ. ಈ ಚಿತ್ರಕ್ಕೆ ಅರ್ಜುನ್​ ಜನ್ಯ ಸಂಗೀತ ನಿರ್ದೇಶನ ಮಾಡಿದ್ದಾರೆ. ರಘು ನಿಡುವಳ್ಳಿ ಸಂಭಾಷಣೆ ಬರೆದಿದ್ದಾರೆ. ಸ್ವಾಮಿ ಜೆ. ಗೌಡ ಛಾಯಾಗ್ರಹಣ, ದೀಪು ಎಸ್​. ಕುಮಾರ್​ ಸಂಕಲನದ ಜವಾಬ್ದಾರಿ ನಿಭಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು