8:50 PM Saturday5 - July 2025
ಬ್ರೇಕಿಂಗ್ ನ್ಯೂಸ್
ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು

ಇತ್ತೀಚಿನ ಸುದ್ದಿ

ಕೂಡ್ಲಗಿ ಸರಕಾರಿ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

22/10/2021, 09:17

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ
info.reporterkarnataka@gmail.com

ಕೂಡ್ಲಿಗಿ ಪಟ್ಟಣದ ಸರ್ಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ  ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಕಾನೂನು ಅರಿವು ಕಾರ್ಯಕ್ರಮ ಜರುಗಿತು. 

ಹಿರಿಯ ಶ್ರೇಣಿ ನ್ಯಾಯಾಧೀಶರಾದ ಕೆ.ನಾಗೇಶರವರು ಕಾರ್ಯಕ್ರಮ ಉಧ್ಘಾಟಿಸಿ ಮಾತನಾಡಿದರು, ಪೆನಾಲ್ ವಕೀಲರಾದ ಸಿ.ವಿರುಪಾಕ್ಷಪ್ಪ “ಪೋಕ್ಸೋ ಕಾಯ್ದೆ ಹಾಗೂ ಬಾಲ್ಯವಿವಾಹ” ಕುರಿತು ಉಪನ್ಯಾಸ ಮಾಡಿದರು. 

ಅಧ್ಯಕ್ಷತೆ ವಹಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಉಮಾದೇವಿ ಮಾತನಾಡಿದರು. ಸರ್ಕಾರಿ ಅಭಿಯೋಜಕ ಹೊಸಬಡ್ರು ಅಣ್ಣೇಶ, ಸರ್ಕಾರಿ ಸಹಾಯಕ ಅಭಿಯೋಜಕರಾದ ಹೋ.ಮ.ಪಂಡಿತರಾಧ್ಯ, ವಕೀಲರ ಸಂಘದ ಕಾರ್ಯದರ್ಶಿ ಬಿ.ಸಿದ್ದಲಿಂಗಪ್ಪ, ಪ್ರಭಾರ ಮುಖ್ಯ ಶಿಕ್ಷಕ ಕೊಟ್ರೇಶ ವೇದಿಕೆಯಲ್ಲಿದ್ದರು. ವಕೀಲರ ಸಂಘದ ಅಧ್ಯಕ್ಷ ಜಿ.ಹೊನ್ನೂರಪ್ಪ ಮಾತನಾಡಿದರು. ನ್ಯಾಯ‍ಾಂಗ ಇಲಾಖೆಯ ಸುರೇಶ್ ವೈ ಏಣಗಿ ಪ್ರಾರ್ಥಿಸಿದರು, ಟಿ.ಪರಸಪ್ಪ ಸ್ವಾಗತಿಸಿದರು. ಜಿ.ಎಂ.ಮಲ್ಲಿಕಾರ್ಜುನ ಸ್ವಾಮಿ ನಿರೂಪಿಸಿದರು. ವಕೀಲರಾದ ಟಿ.ಮಲ್ಲಿಕಾರ್ಜುನ ವಂದಿಸಿದರು. 

ಸರಕಾರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ಸಿಬ್ಬಂದಿ ವರ್ಗ ಹಾಗೂ ನ್ಯಾಯಾಂಗ ಇಲಾಖೆಯ ಸಿಬ್ಬಂದಿಯವರು, ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು