3:22 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಸರಕಾರದ ಯೋಜನೆಗಳು ಹಾಗೂ ನೂತನ ತಂತ್ರಜ್ಞಾನದ ಬಗ್ಗೆ ರೈತರಿಗೆ ಅರಿವು ಮೂಡಿಸಿ: ಕೋಲಾರದಲ್ಲಿ ಸಚಿವೆ ಕರಂದ್ಲಾಜೆ 

23/10/2021, 10:23

ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ
info.reporterkarnataka@gmail.com

ಕೇಂದ್ರ ಮತ್ತು ರಾಜ್ಯ ಸರ್ಕಾರದ ಎಲ್ಲಾ ಯೋಜನೆಗಳು ಹಾಗೂ ನೂತನ ತಂತ್ರಜ್ಞಾದ ಬಗ್ಗೆ ರೈತರಿಗೆ ಅರಿವು ಮೂಡಿಸಿ , ಗ್ರಾಮ ಪಂಚಾಯತಿ , ಗ್ರಾಮ ಸಭೆ ಹಾಗೂ ರೈತ ಸಂಪರ್ಕ ಕೇಂದ್ರಗಳಲ್ಲಿ ರೈತರಿಗೆ ದೊರೆಯುವ ಸೌಲಭ್ಯಗಳ ಕುರಿತು ಮಾಹಿತಿ ನೀಡಬೇಕು ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು .

ಜಿಲ್ಲಾಧಿಕಾರಿಗಳ ನ್ಯಾಯಾಂಗ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕೃಷಿ ಇಲಾಖೆ ಹಾಗೂ ಕೃಷಿಗೆ ಸಂಬಂಧಿಸಿದ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ನಕಲಿ ಬಿತ್ತನೆ ಬೀಜ, ಕೀಟನಾಶಕಗಳು ಹಾಗೂ ರಸಗೊಬ್ಬರಗಳನ್ನು ಮಾರಾಟ ಮಾಡುವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದರು . ಜಿಲ್ಲೆಯಲ್ಲಿ ಎಣ್ಣೆ ಕಾಳುಗಳ ಉತ್ಪಾದನೆ ಹೆಚ್ಚು ಮಾಡಿ , ಪಾರಂಪರಿಕ ಸಾವಯವ ಪದ್ಧತಿಯಲ್ಲಿ ಬೆಳೆಗಳನ್ನು ಬೆಳೆಯಲು ಹೆಚ್ಚಿನ ಒತ್ತು ನೀಡಿ . ಸಾವಯವದ ಮೂಲಕ ಬೆಳೆದ ಬೆಳಗಳಿಗೆ ವಿಶ್ವ ಮಟ್ಟದಲ್ಲಿ ಹೆಚ್ಚಿನ ಬೇಡಿಕೆಯಿದೆ . ಬೇವಿನಸೊಪ್ಪಿನ ಬೆಳೆಯ ಬಗ್ಗೆ ರೈತರಿಗೆ ಅರಿವು ಮೂಡಿಸಿ ಎಂದು ಅವರು ತಿಳಿಸಿದರು. 

ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ರೂಪದೇವಿ ಅವರು ಜಿಲ್ಲೆಯಲ್ಲಿ ಬಿತ್ತನೆ ಪ್ರದೇಶ 2,09 566 ಹೆಕ್ಟರ್ ಪ್ರದೇಶ , ಕೃಷಿ ಬೆಳೆಗಳ ವಿಸ್ತೀರ್ಣ 97,900 ಹೆಕ್ಟೇರ್‌ , ತೋಟಗಾರಿಕೆ ಬೆಳೆಗಳ ವಿಸ್ತೀರ್ಣ 1 ಲಕ್ಷ ಹೆಕ್ಟರ್ ಹಾಗೂ ರೇಷ್ಮೆ ಬೆಳೆ ವಿಸ್ತಿರ್ಣ 19,329 ಹೆಕ್ಟೇರ್ ಪ್ರದೇಶವಿದೆ . ಜಿಲ್ಲೆಯಲ್ಲಿ ಒಟ್ಟು 8,19,509 ಜಾನುವಾರುಗಳಿವೆ . ಕಳೆದ 2 ವರ್ಷಗಳಿಂದ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದೆ . FRUITS ಯೋಜನೆಯಲ್ಲಿ ಜಿಲ್ಲೆಯ 1,94,343 ರೈತರು ನೊಂದಾಯಿಸಿಕೊಂಡಿದ್ದಾರೆ ಎಂದು ತಿಳಿಸಿದರು ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು FRUITS ನಲ್ಲಿ ಶೇಕಡಾ 100 ರಷ್ಟು ರೈತರನ್ನು ನೋಂದಾಯಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು . ಕೋಲಾರ ಲೋಕ ಸಭಾ ಕ್ಷೇತ್ರದ ಸಂಸದರಾದ ಎಸ್.ಮುನಿಸ್ವಾಮಿ ಅವರು ಕೃಷಿ ಯಂತ್ರೋಪಕರಣಗಳ ಸಹಾಯಧನ ಯೋಜನೆಯಲ್ಲಿ ಹೆಚ್ಚಿನ ಫಲಾನುಭವಿಗಳಿಗೆ ನೀಡಿ , ಹೋಬಳಿಯ ಮಟ್ಟದಲ್ಲಿ ಕೋಲ್ಡ್‌ ಸ್ಟೋರೇಜ್ ಗಳನ್ನು ಸ್ಥಾಪಿಸಬೇಕು . ದೇಶದಲ್ಲಿ ಯಾವ ರಾಜ್ಯದಲ್ಲಿ ಯಾವ ರೀತಿಯ ಬೆಳೆಯನ್ನು ಬೆಳೆಯುತ್ತಿದ್ದಾರೆ ಯಾವ ಬೆಳೆಗೆ ಬೇಡಿಕೆ ಹೆಚ್ಚಿದೆ ಎಂಬುವುದರ ಮಾಹಿತಿಯನ್ನು ರೈತರಿಗೆ ನೀಡಬೇಕು ಎಂದು ತಿಳಿಸಿದರು . ಜಿಲ್ಲಾಧಿಕಾರಿಗಳಾದ ಡಾ || ಆರ್.ಸೆಲ್ವಮಣಿ ಅವರು ಜಿಲ್ಲೆಯಲ್ಲಿ ಕೆ.ಸಿ.ವ್ಯಾಲಿ ನೀರಿನಿಂದ ತುಂಬಾ ಕೆರೆಗಳು ತುಂಬಿವೆ . ಜಿಲ್ಲೆಯಲ್ಲಿ ಇದುವರೆಗೂ 200 ಎಕರೆ ಬೆಳೆ ಹೆಚ್ಚಿನ ಮಳೆಯಿಂದ ನಾಶವಾಗಿದೆ . ಎ.ಪಿ.ಎಂ.ಸಿ. ಮಾರುಕಟ್ಟೆಗೆ ಜಾಗವನ್ನು ಗುರುತಿಸಲಾಗಿದೆ ಎಂದು ತಿಳಿಸಿದರು . ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಉಕೇಶ್ ಕುಮಾರ್‌ , ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ ಓಂ ಶಕ್ತಿ ಚಲಪತಿ ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು