1:51 PM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

Good News : ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿ ಕುರಿತು ಸಿಹಿ ಸುದ್ದಿ ನೀಡಿದ ಸಚಿವ ನಾಗೇಶ್.!

23/10/2021, 11:55

ಬೆಂಗಳೂರು(Reporterkarnataka.com)
ಶಿಕ್ಷಕರ ಕೊರತೆ ನೀಗಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಮುಂದಡಿ ಇಟ್ಟಿದೆ. 6 ರಿಂದ 8ನೇ ತರಗತಿ ಮಕ್ಕಳ ಬೋಧನೆಗೆ ಶಿಕ್ಷಕರ ಕೊರತೆಯನ್ನು ನೀಗಿಸಲು ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಮುಂಬಡ್ತಿ ನೀಡಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಶಿಕ್ಷಕರ ಸಮಸ್ಯೆ ಇರುವುದು ನಿಜ. ಆದರೆ ಮಕ್ಕಳ ಶೈಕ್ಷಣಿಕ ಚಟುವಟಿಕೆಗೆ ಯಾವುದೇ ಸಮಸ್ಯೆ ಆಗದ ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ. ರಾಜ್ಯದಲ್ಲಿ 25ರಿಂದ ಕಿರಿಯ ಪ್ರಾಥಮಿಕ ಶಾಲೆಗಳು ಆರಂಭಗೊಳ್ಳಲಿವೆ. ಮಕ್ಕಳ ಸುರಕ್ಷತೆಗೆ ಹೆಚ್ಚಿನ ಆಧ್ಯತೆ ನೀಡಲಾಗುವುದು ಎಂದಿದ್ದಾರೆ.

ರಾಜ್ಯದಾದ್ಯಂತ ಸೋಮವಾರದಿಂದಲೇ ಬಿಸಿಯೂಟದ ಯೋಜನೆಯನ್ನು ಆರಂಭ ಮಾಡಲಾಗುತ್ತಿದೆ. 1ರಿಂದ 10ನೇ ತರಗತಿ ವರೆಗಿನ ಎಲ್ಲಾ ವಿದ್ಯಾರ್ಥಿಗಳಿಗೆ ಕೂಡ ಬಿಸಿಯೂಟದ ಯೋಜನೆಯನ್ನು ನೀಡಲಾಗುತ್ತದೆ. ಕಿರಿಯ ಪ್ರಾಥಮಿಕ ಶಾಲಾರಂಭದ ಕುರಿತು ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ ಎಂದಿದ್ದಾರೆ.

ರಾಜ್ಯದಲ್ಲಿ ಪೂರ್ಣ ಪ್ರಮಾಣದಲ್ಲಿ ಶಾಲೆಗಳು ಆರಂಭಗೊಳ್ಳುತ್ತಿದ್ದರೂ ಕೂಡ ಹಾಜರಾತಿಯನ್ನು ಕಡ್ಡಾಯಗೊಳಿಸಿಲ್ಲ. ಮಕ್ಕಳು ಶಾಲೆಗೆ ಹಾಜರಾಗಬೇಕಾದ್ರೆ ಕಡ್ಡಾಯವಾಗಿ ಪೋಷಕರು ಅನುಮತಿ ಪತ್ರವನ್ನು ನೀಡಬೇಕು. ಅಲ್ಲದೇ ಶಿಕ್ಷಕರಿಗೆ ಕಡ್ಡಾಯ ವ್ಯಾಕ್ಸಿನ್, ಶಾಲೆಗಳಲ್ಲಿ ಸಾಮಾಜಿಕ ಅಂತರ,‌ ಮಾಸ್ಕ್ ಬಳಕೆ‌‌‌‌ ಸೇರಿದಂತೆ ರಾಜ್ಯದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ವಿಸ್ತ್ರತವಾದ ಮಾರ್ಗಸೂಚಿಯನ್ನು ಪ್ರಕಟಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು