2:35 AM Monday21 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಜಿಲ್ಲಾ ಮತ್ತು ತಾಲೂಕು ಆರೋಗ್ಯಾಧಿಕಾರಿಗಳಿಗೆ ಸಚಿವ ಅಂಗಾರ ನೂತನ ವಾಹನಗಳ ಹಸ್ತಾಂತರ

24/10/2021, 09:43

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ನಿರ್ಮಿತಿ ಕೇಂದ್ರವು ಸರಕಾರದ ವಿವಿಧ ಇಲಾಖೆಗಳ ಕಾಮಗಾರಿಗಳನ್ನು ವಹಿಸುತ್ತಿದೆ, ಅದರಂತೆ ಇತ್ತೀಚೆಗೆ ಕೇಂದ್ರ ಸರಕಾರದ ಆಯುಷ್ಮಾನ್ ಭಾರತ ಕಾರ್ಯಕ್ರಮದಡಿ ಬ್ರಾಂಡಿಂಗ್ ಕಾಮಗಾರಿಯನ್ನು ಕೈಗೊಳ್ಳಲಾಗಿತ್ತು. ಜಿಲ್ಲೆಯ 64 ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಬ್ರಾಂಡಿಂಗ್ ಕಾಮಗಾರಿಯನ್ನು ನಿರ್ವಹಿಸಿ ಅದರಲ್ಲಿ ಸುಮಾರು 20 ಲಕ್ಷ  ರೂ.ಗಳ ಮೊತ್ತ ಉಳಿಕೆಯಾಗಿತ್ತು.ಅದರೊಂದಿಗೆ ನಿರ್ಮಿತಿ ಕೇಂದ್ರದ ಆಡಳಿತ ವೆಚ್ಚದಲ್ಲಿ ಹಣವನ್ನು ಒಗ್ಗೂಡಿಸಿ ಜಿಲ್ಲಾ ಆರೋಗ್ಯ ಇಲಾಖೆ ಸಂಭಾವ್ಯ ಕೋವಿಡ್-19ನ ಮೂರನೇ ಹಂತವನ್ನು ಸಮರ್ಥವಾಗಿ ಎದುರಿಸಲು ಗ್ರಾಮೀಣ ಸ್ಥಳಗಳಲ್ಲಿ ಸೇವೆ ಸಲ್ಲಿಸಲು ಸಾಧ್ಯವಾಗುವಂತೆ ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಗೆ ಹೆಚ್ಚಿನ ಸೌಲಭ್ಯ ಕಲ್ಪಿಸಿಕೊಡಲು ನಿರ್ಮಿತಿ ಕೇಂದ್ರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಆರೋಗ್ಯ ಇಲಾಖೆಗೆ ವಾಹನಗಳನ್ನು ಕೊಡುಗೆಯಾಗಿ ನೀಡುವ ನಿರ್ಧಾರ ಕೈಗೊಂಡಿದ್ದರು.

ಅದರಂತೆ ತಾಲೂಕು ಆರೋಗ್ಯ ಅಧಿಕಾರಿಗಳಿಗೆ ತಲಾ ಒಂದು ಬೊಲೆರೋ ಹಾಗೂ ಜಿಲ್ಲಾ ಆರೋಗ್ಯ ಅಧಿಕಾರಿಗೆ ಸ್ಕಾರ್ಪಿಯೋ ವಾಹನವನ್ನು ಕೊಡಲು ನಿರ್ಧರಿಸಲಾಯಿತು. 

ನಗರದ ಜಿಲ್ಲಾಧಿಕಾರಿಯವರ ಕಚೇರಿ ಆವರಣದಲ್ಲಿ ಅ.21ರ ಗುರುವಾರ ಮೀನುಗಾರಿಕೆ, ಬಂದರು‌ ಹಾಗೂ ಒಳನಾಡು ಜಲ ಸಾರಿಗೆ ಸಚಿವರಾದ ಎಸ್. ಅಂಗಾರ ಅವರು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕಿಶೋರ್ ಕುಮಾರ್ ಎಂ ಅವರಿಗೆ ಸ್ಕಾರ್ಪಿಯೋ ವಾಹನ, ಮಂಗಳೂರು ತಾಲೂಕು ಆರೋಗ್ಯಾಧಿಕಾರಿ ಡಾ. ಸುಜಯ್ ಕುಮಾರ್, ಬಂಟ್ವಾಳ ತಾಲೂಕು ಆರೋಗ್ಯಾಧಿಕಾರಿಯಾದ ಡಾ. ದೀಪಾ ಪ್ರಭು, ಪುತ್ತೂರು ತಾಲೂಕು ಆರೋಗ್ಯಾಧಿಕಾರಿಯಾದ ಡಾ. ದೀಪಕ್ ರೈ, ಬೆಳ್ತಂಗಡಿ ತಾಲೂಕು ಆರೋಗ್ಯಾಧಿಕಾರಿ ಡಾ. ಕಲಾಮಧು, ಸುಳ್ಯ ತಾಲೂಕು ಆರೋಗ್ಯಾಧಿಕಾರಿ ಡಾ. ನಂದಕುಮಾರ್ ಅವರಿಗೆ ಬೊಲೆರೋ ವಾಹನದ ಕೀ ಯನ್ನು ಹಸ್ತಾಂತರಿಸಿದರು.

ನಂತರ ಮಾತನಾಡಿದ ಸಚಿವರು, ಗ್ರಾಮೀಣ ಪ್ರದೇಶಗಳಲ್ಲಿ ಸೇವೆ ಸಲ್ಲಿಸುವುದು ಒಂದು ಸವಾಲಾಗಿದ್ದು, ಅದನ್ನು ಯಶಸ್ವಿಯಾಗಿ ನಿರ್ವಹಿಸಲು ಈ ಮೂಲಕ ಆರೋಗ್ಯ ಇಲಾಖೆಗೆ ಶಕ್ತಿಯನ್ನು ತುಂಬಲಾಗಿದೆ. ಅಧಿಕಾರಿಗಳು ಹೆಚ್ಚಿನ ಶ್ರದ್ಧೆಯಿಂದ ಕೆಲಸ ಮಾಡಲು ಸಾಧ್ಯವಾಗುತ್ತದೆ. ನಿರ್ಮಿತಿ ಕೇಂದ್ರದ ಉಳಿತಾಯದ ಹಣದಿಂದ ಮತ್ತೆ ಅದೇ ಇಲಾಖೆಗೆ ಕೊಡುಗೆಯಾಗಿ ನೀಡುವ ಕ್ರಮ ಬಹಳ ಉತ್ತಮ ಮತ್ತು ಶ್ಲಾಘನೀಯವಾಗಿದ್ದು ಇದಕ್ಕೆ ನಿರ್ಮಿತಿ ಕೇಂದ್ರಕ್ಕೆ ಮತ್ತು ಜಿಲ್ಲಾಡಳಿತಕ್ಕೆ ಧನ್ಯವಾದಗಳನ್ನು ಸಮರ್ಪಿಸುವೆ, ಇಂಥ ವ್ಯವಸ್ಥೆ ರಾಜ್ಯದೆಲ್ಲೆಡೆ ಮುಂದುವರೆಯಲಿ ಎಂದು ಆಶಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್‌, ನಿರ್ಮಿತಿ ಕೇಂದ್ರದ ಕಾರ್ಯನಿರ್ವಾಹಕ ನಿರ್ದೇಶಕ  ರಾಜೇಂದ್ರ ಕಲ್ಬಾವಿ ಮತ್ತು ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು