1:32 AM Wednesday25 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಮಂಗಳೂರು: ಓನೆಕ್ಸ್ ಪಬ್‌ ಮೇಲೆ ಸಿಸಿಬಿ ಪೊಲೀಸರ ದಾಳಿ; ಧ್ವನಿವರ್ಧಕ ವಶ

24/10/2021, 10:11

ಮಂಗಳೂರು(reporterkarnataka.com): ನಗರದ ಎಂ.ಜಿ. ರಸ್ತೆಯಲ್ಲಿರುವ ಓನೆಕ್ಸ್ ಪಬ್‌ ಮೇಲೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಸಾರ್ವಜನಿಕರಿಂದ ಬಂದ ದೂರು ಹಾಗೂ ನಿಗದಿತ ಸಮಯಕ್ಕಿಂತ ಹೆಚ್ಚು ಹೊತ್ತು ತೆರೆದ ಹಿನ್ನೆಲೆಯಲ್ಲಿ ದಾಳಿ ನಡೆದಿದೆ.

ಮಂಗಳೂರು ಸಿಸಿಬಿ ಇನ್ ಸ್ಪೆಕ್ಟರ್ ಮಹೇಶ್ ಪ್ರಸಾದ್ ಮತ್ತು ಬರ್ಕೆ ಪೊಲೀಸ್ ಠಾಣೆಯ ಇನ್ ಸ್ಪೆಕ್ಟರ್ ಜ್ಯೋತಿರ್ಲಿಂಗ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. 

ಪಬ್‌ನ್ನು ನಿಗದಿತ ಸಮಯಕ್ಕಿಂತ ಹೆಚ್ಚು ಹೊತ್ತು ತೆರೆಯಲಾಗುತ್ತಿತ್ತು. ಜೋರಾಗಿ ಮ್ಯೂಸಿಕ್ ಬಳಸಿ ಅಕ್ಕಪಕ್ಕದ ರಸ್ತೆವರೆಗೂ ಕಿರಿಕಿರಿ ಉಂಟು ಮಾಡಲಾಗುತ್ತಿತ್ತು. ಪಬ್‌ನಿಂದ ಹೊರಬರುವವರು ಅಶ್ಲೀಲವಾಗಿ ವರ್ತಿಸುವುದರಿಂದ ಅಕ್ಕಪಕ್ಕದ ನಿವಾಸಿಗಳಿಗೆ, ಸುತ್ತಾಮುತ್ತಾ ಓಡಾಡುವ ವಿದ್ಯಾರ್ಥಿಗಳಿಗೆ ಮತ್ತು ಸಮೀಪದಲ್ಲೇ ಇರುವ ದೇವಸ್ಥಾನಗಳಿಗೆ ಭಕ್ತರು ಹೋಗಿ ಬರುವುದಕ್ಕೆ ತೊಂದರೆಯಾಗುತ್ತಿದೆ ಎಂಬಿತ್ಯಾದಿ ದೂರಿನ ಆಧಾರದ ಮೇಲೆ ದಾಳಿ ನಡೆಸಲಾಗಿತ್ತು.

ಸಿಸಿಬಿ ದಾಳಿ ವೇಳೆ ಧ್ವನಿವರ್ಧಕಗಳನ್ನು ವಶಪಡಿಸಿಕೊಂಡಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು