9:21 AM Monday6 - May 2024
ಬ್ರೇಕಿಂಗ್ ನ್ಯೂಸ್
ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ…

ಇತ್ತೀಚಿನ ಸುದ್ದಿ

ಶಾಲೆಗಳಲ್ಲಿ ಮತ್ತೆ ಮಕ್ಕಳ ಕಲರವ: 1ರಿಂದ 5ನೇ ತರಗತಿ ವರೆಗೆ ಕ್ಲಾಸ್ ಆರಂಭ; ಆನ್ ಲೈನ್ ಗೂ ಅವಕಾಶ

25/10/2021, 08:18

ಬೆಂಗಳೂರು(reporterkarnataka.com): ಪ್ರಾಥಮಿಕ ಶಾಲೆ ಆರಂಭಕ್ಕೆ ದಿನಾಂಕ ನಿಗದಿಯಾಗಿದ್ದು, ಇಂದಿನಿಂದ ರಾಜ್ಯಾದ್ಯಂತ 1ನೇ ತರಗತಿಯಿಂದ 5ರ ವರೆಗೆ ಕ್ಲಾಸ್ ಆರಂಭವಾಗಲಿದೆ. ಸುಮಾರು ಒಂದೂವರೆ ವರ್ಷದ ಬಳಿಕ ಶಾಲೆಗಳು ತೆರೆದುಕೊಂಡಿವೆ.

ದಸರಾ ರಜೆ ಮುಗಿದ ನಂತರ 1ರಿಂದ 5ನೇ ತರಗತಿ ವರೆಗೆ ಶಾಲೆ ಆರಂಭಿಸಲಾಗುವುದು ಎಂದು ರಾಜ್ಯ ಸರಕಾರ ಈ ಹಿಂದೆಯೇ ಹೇಳಿತ್ತು. ಅಕ್ಟೋಬರ್ 20ಕ್ಕೆ ದಸರಾ ರಜೆ ಮುಕ್ತಾಯವಾಗಲಿದೆ. ಅಕ್ಟೋಬರ್  25ರಂದು ಭೌತಿಕ ತರಗತಿಗಳನ್ನು ಆರಂಭಿಸಲು ಸರ್ಕಾರ ಮುಹೂರ್ತ ಫಿಕ್ಸ್ ಮಾಡಿತ್ತು. ಅದರಂತೆ ಇಂದಿನಿಂದ ತರಗತಿ ಆರಂಭವಾಗಲಿದೆ.

ಅಕ್ಟೋಬರ್ 10 ರಿಂದ ಮಧ್ಯಂತರ ಅಥವಾ ದಸರಾ ರಜೆ ಆರಂಭವಾಗಿದ್ದು, ಅಕ್ಟೋಬರ್ 20ಕ್ಕೆ ಮುಕ್ತಾಯವಾಗಲಿದೆ. ರಾಜ್ಯದಲ್ಲಿ ಕೊರೊನಾ ಸೋಂಕು ಕಡಿಮೆಯಾಗುತ್ತಿದೆ. ಹೀಗಾಗಿ ಶಿಕ್ಷಣ ತಜ್ಞರು, ಶಾಲೆಗಳ ಆಡಳಿತ ಮಂಡಳಿ, ಶಿಕ್ಷಕರು, ಪೋಷಕರು, ಆರೋಗ್ಯ, ಶಿಕ್ಷಣ, ವೈದ್ಯಕೀಯ ಇಲಾಖೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ 1ರಿಂದ 5ನೇ ತರಗತಿಗಳನ್ನು ಆರಂಭಿಸುವ ಕುರಿತು ಕೊರೊನಾ ತಾಂತ್ರಿಕ ಸಮಿತಿ ಸಲಹೆ ಮಾಡಿದೆ.

ಆದರೆ ಶಾಲೆಗೆ ಮಕ್ಕಳನ್ನು ಕಳುಹಿಸಲು ಹೆತ್ತವರ ಒಪ್ಪಿಗೆ ಕಡ್ಡಾಯವಾಗಿದೆ. ಹಾಗೆ ಹಾಜರಾತಿ ಕಡ್ಡಾಯವಲ್ಲ. ಆನ್ ಲೈನ್ ತರಗತಿಗೂ ಅವಕಾಶ ಕಲ್ಪಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು