5:33 AM Monday23 - December 2024
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಬಂಧನಕ್ಕೊಳಗಾಗಿ ಬಿಡುಗಡೆಗೊಂಡ ಸಿ.ಟಿ. ರವಿಗೆ ಭಾರೀ ಸ್ವಾಗತ; ಮೆರವಣಿಗೆ ಸಿ. ಟಿ. ರವಿ ಸದಸ್ಯತ್ವ ಅನರ್ಹಗೊಳಿಸಿ: ಮಲೆನಾಡು ಪ್ರದೇಶಾಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ… ಎಲ್ಲರನ್ನೂ ಒಳಗೊಳ್ಳುವ ಸಮಾಜ ನಿರ್ಮಿಸೋಣ: ಆರ್ಚ್ ಬಿಷಪ್ಸ್ ಹೌಸ್ ಕ್ರಿಸ್ಮಸ್ ಆಚರಣೆಯಲ್ಲಿ ಮುಖ್ಯಮಂತ್ರಿ… ವಕ್ಫ್ ಹೋರಾಟಕ್ಕೆ ಮಣಿದು ಸಮಿತಿ ರಚನೆಗೆ ಸರಕಾರ ನಿರ್ಧಾರ: ಪ್ರತಿಪಕ್ಷ ನಾಯಕ ಆರ್‌.… ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ: ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ರಾತ್ರಿಯಡೀ ಪೊಲೀಸ್ ವಾಹನದಲ್ಲಿ ಸಿ.ಟಿ. ರವಿ ಸುತ್ತಾಟ!: ಕಾರಣ ಏನು ಗೊತ್ತೇ? ಸಿ.ಟಿ.ರವಿ ಬಂಧನ: ಚಿಕ್ಕಮಗಳೂರು, ಕೊಟ್ಟಿಗೆಹಾರದಲ್ಲಿ ಬಿಜೆಪಿ ಭಾರೀ ಪ್ರತಿಭಟನೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಪಿಒಸಿ ದರ್ಜೆ: ವಿಮಾನಯಾನ ಸಚಿವ ಜತೆ ಸಂಸದ ಕ್ಯಾಪ್ಟನ್… ಮಂಗಳೂರು: ಹೊಸ ವರ್ಷದ ಆಚರಣೆಗೆ ತರಿಸಿದ್ದ 9 ಲಕ್ಷ ರೂ. ಮೌಲ್ಯದ ಡ್ರಗ್ಸ್… ಎನ್.ಆರ್.ಪುರ: ತಂದೆ- ಮಗನ ಮೇಲೆ ಕಾಡಾನೆ ದಾಳಿ; ತಂದೆ ಸಾವು; ಮಗ ತಪ್ಪಿಸಿಕೊಂಡು…

ಇತ್ತೀಚಿನ ಸುದ್ದಿ

ವಿದೇಶಿ ಪ್ರಯಾಣಿಕರ ಮೇಲೆ ವಿಧಿಸಲಾಗಿದ್ದ ಕ್ವಾರಂಟೈನ್ ನಿಯಮ ಸಡಿಲಿಕೆ: ಹೋಂ ಕ್ವಾರಂಟೈನ್ ಕೂಡ ಬೇಕಾಗಿಲ್ಲ!

25/10/2021, 17:12

ಹೊಸದಿಲ್ಲಿ(reporterkarnataka.com): ಭಾರತಕ್ಕೆ ಬರುವ ವಿದೇಶಿ ಪ್ರಯಾಣಿಕರ ಮೇಲೆ ವಿಧಿಸಲಾಗಿದ್ದ ಕ್ವಾರಂಟೈನ್ ನಿಯಮಗಳು ಇಂದಿನಿಂದ ಸಡಿಲಿಕೆಯಾಗಲಿದೆ.

ಈ ಮೂಲಕ ವಿದೇಶಿ ಪ್ರಯಾಣಿಕರು ವಿಮಾನ ನಿಲ್ದಾಣಗಳಿಂದ ನೇರವಾಗಿ ಮನೆಗೆ ತೆರಳಬಹುದಾಗಿದೆ. 

ಹೋಂ ಕ್ವಾರಂಟೈನ್ ನಿಬಂಧನೆಗಳಿಗೂ ಒಳಗಾಗಬೇಕಿಲ್ಲ. ಆದರೆ ಕೋವಿಡ್-19 ಆರ್ ಟಿ-ಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿ ತೋರಿಸುವುದು ಕಡ್ಡಾಯವಾಗಿದೆ.

ವಿದೇಶಿ ಪ್ರಯಾಣಿಕರಿಗೆ ಅನ್ವಯವಾಗುವ ನಿಯಮಗಳು..

* ಕೋವಿಡ್ ಲಸಿಕೆಯ ಒಂದು ಡೋಸ್ ಪಡೆದವರು ಅಥವಾ ಲಸಿಕೆಯೇ ಪಡೆಯದ ವಿದೇಶಿ ಪ್ರಯಾಣಿಕರು ಕೋವಿಡ್ ಪರೀಕ್ಷೆಯ ಪ್ರಮಾಣ ಪತ್ರವನ್ನು ಹೊಂದಿರುವುದು ಕಡ್ಡಾಯವಾಗಿದೆ.

ಇಂಥವರು ಏಳು ದಿನ ಹೋಂ ಕ್ವಾರಂಟೈನ್ ನಲ್ಲಿದ್ದು, 8ನೇ ದಿನ ಕೋವಿಡ್ ತಪಾಸಣೆ ಮಾಡಿಕೊಳ್ಳಬೇಕು.

* ವಿಮಾನಯಾನ ಕಂಪನಿಗಳ ಸಿಬ್ಬಂದಿ, ಬಂದರು ಹಾಗೂ ಭೂ ಗಡಿಗಳಲ್ಲಿ ವಿದೇಶಗಳೊಂದಿಗೆ ಸಂಪರ್ಕ ಇರಿಸಿಕೊಳ್ಳುವವರಿಗೂ ಈ ನಿಯಮ ಅನ್ವಯವಾಗಲಿದೆ.

* ವಿಮಾನ ಪ್ರಯಾಣಕ್ಕೆ ಟಿಕೆಟ್ ಬುಕ್ ಮಾಡುವಾಗಲೇ ಏರ್ ಸುವಿಧಾ ಪೋರ್ಟಲ್ ಮೂಲಕ ಪ್ರಯಾಣಿಕರು ತಮ್ಮ ಆರ್ ಟಿ-ಪಿಸಿಆರ್ ವರದಿಯನ್ನು ಸಲ್ಲಿಸಬೇಕು.ಪ್ರಯಾಣ ಆರಂಭಿಸುವ 72 ಗಂಟೆಗಳ ಮೊದಲು ಈ ಪರೀಕ್ಷೆ ನಡೆದಿರಬೇಕು.

 *ಸಲ್ಲಿಸಿರುವ ಮಾಹಿತಿ ತಪ್ಪಾಗಿದ್ದರೆ ತಮ್ಮ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬಹುದು ಎಂಬ ಮುಚ್ಚಳಿಕೆಯನ್ನೂ ಪ್ರಯಾಣಿಕರು ಬರೆದುಕೊಡಬೇಕಾಗುತ್ತದೆ.

* ಕೋವಿಡ್ ಸೋಂಕಿತರ ಸಂಖ್ಯೆ ತಗ್ಗಿರುವ ದೇಶದಿಂದ ಬರುವವರು 14 ದಿನಗಳ ಕಾಲ ಆರೋಗ್ಯದ ಮೇಲೆ ಸ್ವಯಂ ನಿಗಾ ಇರಿಸಿಕೊಳ್ಳಬೇಕು. 

*ಕೋವಿಡ್ ಲಕ್ಷಣಗಳು ಕಾಣಿಸಿದರೆ ತಕ್ಷಣ ಸ್ವಯಂ ಕ್ವಾರಂಟೈನ್ ಗೆ ಒಳಪಟ್ಟು ಚಿಕಿತ್ಸೆ ಪಡೆದುಕೊಳ್ಳಬೇಕು.

ಇತ್ತೀಚಿನ ಸುದ್ದಿ

ಜಾಹೀರಾತು