4:37 PM Tuesday7 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ: 7 ದಿನ ಕಳೆದರೂ ಆರೋಪಿ ರಾಜೇಶ್ ಭಟ್ ಬಂಧನಕ್ಕೆ ಪೊಲೀಸರು ವಿಫಲ; ನಿರೀಕ್ಷಣಾ ಜಾಮೀನಿಗೆ ಅರ್ಜಿ

26/10/2021, 08:20

ಮಂಗಳೂರು( reporterkarnataka.com): ವಕೀಲ ರಾಜೇಶ್ ಭಟ್ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಇಂಟರ್ನಶಿಪ್ ವಿದ್ಯಾರ್ಥಿನಿ 

ಪಾಂಡೇಶ್ವರ ಮಹಿಳಾ ಠಾಣೆಗೆ ದೂರು ನೀಡಿ ಒಂದು ವಾರ ಕಳೆದರೂ ಆರೋಪಿಯನ್ನು ಬಂಧಿಸುವಲ್ಲಿ ಮಂಗಳೂರು ಪೊಲೀಸರು ವಿಫಲರಾಗಿದ್ದಾರೆ. ಈ ನಡುವೆ ಆರೋಪಿ ರಾಜೇಶ್ ಭಟ್ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.

ರಾಜೇಶ್ ಭಟ್ ಅಕ್ಟೋಬರ್ 21ರಂದು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ಸೋಮವಾರ(ಅ.25) ಮೊದಲ ವಿಚಾರಣೆ ನಡೆದಿತ್ತು. 

ಉತ್ತರ ಪ್ರದೇಶ ಮೂಲದ ಕಾನೂನು ವಿದ್ಯಾರ್ಥಿನಿಯ ಖಾಸಗಿ ಅಂಗ ಸ್ವರ್ಶಿಸಿದ ಹಾಗೂ ಅಶ್ಲೀಲ ಮೆಸೇಜ್ ಕಳುಹಿಸಿದ ಆರೋಪಕ್ಕೆ ರಾಜೇಶ್ ಭಟ್ ಗುರಿಯಾಗಿದ್ದಾರೆ. ಇಂಟರ್ನಶಿಪ್ ವಿದ್ಯಾರ್ಥಿನಿಯನ್ನು ರಾತ್ರಿ 8 ಗಂಟೆ ತನಕ ಕಚೇರಿಯಲ್ಲಿ ಇರುವಂತೆ ರಾಜೇಶ್ ಭಟ್ ಸೂಚಿಸಿದ್ದರಂತೆ. ಅಷ್ಟು ಹೊತ್ತಿನವರೆಗೆ ಯಾಕೆ ನಿಲ್ಲಬೇಕೆಂದು ವಿದ್ಯಾರ್ಥಿನಿ ಪ್ರಶ್ನಿಸಿದರೆ, 8 ಗಂಟೆ ತನಕ ಎಲ್ಲರೂ ಕಚೇರಿಯಲ್ಲಿರುತ್ತಾರೆ ಎಂದು ಉತ್ತರಿಸಿದ್ದಂತೆ. ಅಂದು ರಾತ್ರಿ ರಾಜೇಶ್ ಭಟ್ ವಿದ್ಯಾರ್ಥಿನಿಯನ್ನು ತನ್ನ ಛೇಂಬರೊಳಗೆ ಕರೆಸಿ ಅಸಭ್ಯವಾಗಿ ವರ್ತಿಸಿ, ವಿದ್ಯಾರ್ಥಿನಿಯ ಖಾಸಗಿ ಅಂಗಗಳನ್ನು ಸ್ಪರ್ಶಿಸಿರುವುದಾಗಿ ವಿದ್ಯಾರ್ಥಿನಿ ಆರೋಪಿಸಿದ್ದಾಳೆ. ಇದಾದ ಬಳಿಕ ರಾಜೇಶ್ ಭಟ್ ಮೆಸೇಜ್ ಹಾಗೂ ಕರೆ ಮಾಡಿ ಮುಂದೆಂದೂ ಇಂತಹ ತಪ್ಪು ಮಾಡುವುದಿಲ್ಲ. ನೀನು ಮತ್ತೆ ಕಚೇರಿಗೆ ಬಾ ಎಂದು ಕಣ್ಣೀರಿಟ್ಟಿದ್ದಾರೆ ಎಂದು ತಿಳಿದು ಬಂದಿದೆ. ರಾಜೇಶ್ ಭಟ್ ಈ ಹಿಂದೆಯೂ ಕೆಲವು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು