3:06 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಕೂಡ್ಲಿಗಿ ಬಡೇಲಡಕು ಕಟ್ಟಡ ಕಾರ್ಮಿಕರ ಎಐಟಿಯುಸಿ ಗ್ರಾಮ ಘಟಕ ಉದ್ಘಾಟನೆ

26/10/2021, 13:15

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಬಡೇಲಡಕು ಗ್ರಾಮದಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘ ಎಐಟಿಯುಸಿ ಗ್ರಾಮ ಘಟಕವನ್ನು ಕೂಡ್ಲಿಗಿ ತಾಲೂಕು ಅಧ್ಯಕ್ಷ ಯು. ಪೆನ್ನಪ್ಪ ಹಾಗೂ ಗ್ರಾಮದ ಹಿರಿಯರಾದ ನರಸಿಂಹಪ್ಪ ಉದ್ಘಾಟಿಸಿದರು.

ಕಾರ್ಮಿಕ ಮುಖಂಡ ಎಚ್. ವೀರಣ್ಣ ಮಾತನಾಡಿ ಮಂಡಳಿಯಲ್ಲಿ ಸಾವಿರಾರು ಕೋಟಿ ಅನುದಾನ ಇದ್ದು,ಆದ್ದರಿಂದ ರಾಜ್ಯದ ಕಾರ್ಮಿಕರಿಗೆ ಅನೇಕ ಸೌಲಭ್ಯಗಳು ನೀಡಲಿದ್ದು, ನಿಜವಾದ ಕಾರ್ಮಿಕರು ಸೌಲಭ್ಯಗಳನ್ನು ಪಡೆದುಕೊಳ್ಳಬೇಕಿದೆ.  ನಿಗದಿತ ಸಮಯದಲ್ಲಿ ಕಾರ್ಮಿಕರು ತಮ್ಮ ಕಾರ್ಡ್ ಗಳನ್ನು ನವೀಕರಣ ಮಾಡಿಸಿಕೊಂಡು ತಮ್ಮ ಕುಟುಂಬಕ್ಕೆ ಮಕ್ಕಳ ವಿದ್ಯಾಭ್ಯಾಸಕ್ಕೆ ಇನ್ನೂ ಅನೇಕ ಸೌಲಭ್ಯಗಳನ್ನು ಪಡೆದುಕೊಳ್ಳಬೇಕೆಂದರು. ಈಗಾಗಲೇ ಮಂಡಳಿ ಕಳಪೆ ಕಾರ್ಡ್ ಗಳನ್ನು ತಡೆಯಲು ಹೊಸ ನೀತಿಯನ್ನು ಜಾರಿಗೊಳಿಸಿದ್ದು, ಇದೇ ಸಂದರ್ಭದಲ್ಲಿ ತಾಲೂಕು ಸಂಚಾಲಕರಾದ ಡಿ.ಅಂತೇಶ್, ಗ್ರಾಮದ ಸಮಸ್ಥ ಕಟ್ಟಡ ಕಾರ್ಮಿಕರು ಹಾಗೂ ಗ್ರಾಮದ ಹಿರಿಯರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಘಟಕದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು,ಅಧ್ಯಕ್ಷರಾಗಿ ಸಿಎಂ ಮಲ್ಲೇಶ್ ಉಪಾಧ್ಯಕ್ಷರಾಗಿ ಕೆ. ಪ್ರಧಾನ ಕಾರ್ಯದರ್ಶಿ ಎರಿಸ್ವಾಮಿ, ಖಜಾಂಚಿ ಎಂ.ದುರ್ಗೇಶ, ಪ್ರಭುದೇವ್ ಸೇರಿದಂತೆ ಸದಸ್ಯರನ್ನೊಳಗೊಂಡ ಗ್ರಾಮ ಘಟಕ ಅಸ್ಥಿತ್ವಕ್ಕೆ ತರಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು