2:56 PM Wednesday28 - October 2026
ಬ್ರೇಕಿಂಗ್ ನ್ಯೂಸ್
Chikkamagaluru | ಕಡೂರು ಬಳಿ ಬಸ್ಸಿಗೆ ಹಿಂಭಾಗದಿಂದ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ… ಮೈಸೂರು ಅರಮನೆ ವಿಚಾರವಾಗಿ ಸಚಿವ ಯತೀಂದ್ರ ಹೇಳಿಕೆಗೆ ವಿರೋಧ: ಪ್ರಮೋದಾದೇವಿ ಒಡೆಯರ್ ಬೆಂಬಲಕ್ಕೆ… Chikkamagaluru | ಆಟೋ‌- ಬೈಕ್ ನಡುವೆ ಮುಖಾಮುಖಿ ‌ಡಿಕ್ಕಿ: ಬೈಕ್ ಸವಾರರ ಸ್ಥಳದಲ್ಲೇ… ಆಯುಧ ಪೂಜೆ–ವಿಜಯ ದಶಮಿ: ನಾಡಿನ ಒಳಿತಿಗಾಗಿ ರಾಜ್ಯಪಾಲ ಡಾ. ಸುಧಾ ಯಾದವ್ ಪ್ರಾರ್ಥನೆ ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣ | ವಿಜಯದಶಮಿಯೊಳಗೆ ಆರೋಪಿಗಳ ಬಂಧಿಸದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ:… ಗೊತ್ತು ಗುರಿ ಇಲ್ಲದ ಟೂರಿಸಂ ನೀತಿ | ನಿರ್ವಹಣೆ ಇಲ್ಲದೆ ಭೂತ ಬಂಗಲೆಯಂತಾದ… ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48…

ಇತ್ತೀಚಿನ ಸುದ್ದಿ

5 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಅಪರಾಧಿಗೆ 10 ವರ್ಷ ಸಜೆ; ಉಡುಪಿ ಪೋಕ್ಸೋ ಕೋರ್ಟ್ ನಿಂದ ತೀರ್ಪು 

26/10/2021, 21:14

ಉಡುಪಿ(reporterkarnataka.com): ನೆರೆಮನೆಗೆ ಆಟವಾಡಲು ಹೋಗಿದ್ದ 5 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಎರ್ಮಾಳ್ ಕಲ್ಪನಾ ಅವರು ಆರೋಪಿಗೆ 10 ವರ್ಷ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

ವೆಂಕಟೇಶ(30) ಎಂಬಾತ ಶಿಕ್ಷೆಗೊಳಗಾದ ಅಪರಾಧಿ.ಉಡುಪಿಯ ಪೋಕ್ಸೋ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ. ರಾಘವೇಂದ್ರ ಅವರು ಪ್ರಾಸಿಕ್ಯೂಶನ್ ಪರ ವಾದ ಮಂಡಿಸಿದ್ದರು.

ಘಟನೆ ವಿವರ: ಕಾರ್ಕಳ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ 2018ರಲ್ಲಿ ಈ ಘಟನೆ ನಡೆದಿತ್ತು. ಪ್ರಸ್ತುತ ಅಪರಾಧಿಯಾದ ವೆಂಕಟೇಶ್ ಮನೆಗೆ ಆಟ ಆಡಲೆಂದು ಬಂದ ಐದು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ. ಮಗು ಮನೆಯಲ್ಲಿ ಅಸ್ವಸ್ಥಳಾಗಿದ್ದರಿಂದ ತಾಯಿ ಕಷಾಯ ಮಾಡಿ ಕೊಟ್ಟಿದ್ದರು. ಆದರೆ ಬಾಲಕಿ ವಿಪರೀತವಾಗಿ ಅನಾರೋಗ್ಯಕ್ಕೀಡಾದಾಗ ಕಾರ್ಕಳ ಆಸ್ಪತ್ರೆಗೆ ಕರೆದೊಯ್ದು ಅಲ್ಲಿಂದ ಮಣಿಪಾಲ‌ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮಗು ತನ್ನ‌ ಮೇಲೆ ನಡೆದ ದೌರ್ಜನ್ಯದ ಕುರಿತು ಮಾಹಿತಿ ನೀಡಿದ್ದು ಈ ಬಗ್ಗೆ ದೂರುದಾರರು ನೀಡಿದ  ದೂರಿನಂತೆ ಕಾರ್ಕಳ ಠಾಣೆಯ ಅಂದಿನ ಉಪನಿರೀಕ್ಷಕ ನಂಜಾ ನಾಯ್ಕ್ ಪ್ರಕರಣ ದಾಖಲಿಸಿಕೊಂಡಿದ್ದರು. ಅಂದಿನ ಕಾರ್ಕಳ ಸಿಪಿಐ ಜಾಯ್ ಅಂತೋನಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ಶಿಕ್ಷೆ ಪ್ರಮಾಣ: ನ್ಯಾಯಾಲಯದಲ್ಲಿ ಒಟ್ಟು19 ಮಂದಿ ಸಾಕ್ಷಿಗಳ ಪೈಕಿ 12 ಮಂದಿ ವಿಚಾರಣೆ ನಡೆದಿದ್ದು ವೈದ್ಯಕೀಯ ದಾಖಲೆಗಳು, ನೊಂದ ಬಾಲಕಿ ಹಾಗೂ ಇತರ ಸಾಕ್ಷಿಗಳು ಹೇಳಿದ ಸಾಕ್ಷ್ಯಾಧಾರಗಳು ಅಭಿಯೋಜನೆ ಪರವಾಗಿದ್ದು ಅಪರಾಧಿ ವೆಂಕಟೇಶನಿಗೆ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಕ್ಕೆ ಪೋಕ್ಸೋ ಕಾಯ್ದೆಯಡಿ  10 ವರ್ಷ ಕಠಿಣ ಸಜೆ, 20 ಸಾವಿರ ದಂಡ (ದಂಡದ ಮೊತ್ತದಲ್ಲಿ 15  ಸಂತ್ರಸ್ತೆಗೆ, 5 ಸಾವಿರ ಸರಕಾರಕ್ಕೆ), ಮತ್ತು ಸಂತ್ರಸ್ತೆಗೆ 75 ಸಾವಿರ ಪರಿಹಾರ ನೀಡಲು ಸರಕಾರಕ್ಕೆ ನ್ಯಾಯಾಲಯ ಆದೇಶಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು