5:47 PM Sunday18 - October 2026
ಬ್ರೇಕಿಂಗ್ ನ್ಯೂಸ್
ಗೊತ್ತು ಗುರಿ ಇಲ್ಲದ ಟೂರಿಸಂ ನೀತಿ | ನಿರ್ವಹಣೆ ಇಲ್ಲದೆ ಭೂತ ಬಂಗಲೆಯಂತಾದ… ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20…

ಇತ್ತೀಚಿನ ಸುದ್ದಿ

ಕೆಂಪು ಕುಚಲಕ್ಕಿ ಬೇಡಿಕೆ: ದ.ಕ., ಉಡುಪಿ ಜಿಲ್ಲೆಗೆ ವಾರ್ಷಿಕ ಬೇಕು 12 ಲಕ್ಷ ಕ್ವಿಂಟಾಲ್ ; ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಕೆಗೆ ನಿರ್ಧಾರ

28/05/2021, 07:39

ಬೆಂಗಳೂರು(reporterkarnataka news) : ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಸಾರ್ವಜನಿಕ ಪಡಿತರ ವ್ಯವಸ್ಥೆಯಲ್ಲಿ ಕುಚಲಕ್ಕಿ ವಿತರಿಸಲು ಕೇಂದ್ರ ಸರಕಾರದಿಂದ ಅನುಮತಿ ಪಡೆಯಲು ಪ್ರಸ್ತಾಪನೆ ಸಲ್ಲಿಸುವ ಕುರಿತು ನಿರ್ಣಯ ಕೈಗೊಳ್ಳಲಾಯಿತು.

ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಸಚಿವ ಉಮೇಶ್ ಕತ್ತಿ ಅವರ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಯಿತು.

ಉಭಯ ಜಿಲ್ಲೆಗಳಲ್ಲಿ ಪಡಿತರ ಅಕ್ಕಿ ಪಡೆಯುವ ಜನಸಾಮಾನ್ಯರಿಗೆ ಪಡಿತರದ ಮೂಲಕ ಸ್ಥಳೀಯ ಕೆಂಪು ಕುಚ್ಚಲಕ್ಕಿ ವಿತರಿಸಬೇಕೆಂದು ಪ್ರಸ್ತಾವನೆ ಬಂದಿದೆ. 

ಅವಳಿ ಜಿಲ್ಲೆಗಳ ಒಟ್ಟು ಕೆಂಪು ಕುಚ್ಚಲಕ್ಕಿಯ ಬೇಡಿಕೆ, ಸುಮಾರು ವಾರ್ಷಿಕ 12 ಲಕ್ಷ ಕ್ವಿಂಟಾಲ್ ಆಗಿದ್ದು, ಕೆಂಪು ಕುಚ್ಚಲಕ್ಕಿ ಪೂರೈಸಲು ರಾಜ್ಯದ ಬತ್ತದ ತಳಿಗಳಾದ ಎಂ ಒ 4, ಜಯ, ಅಭಿಲಾಷ, ಭದ್ರ ಕಜೆ, ಜ್ಯೋತಿ ಮುಂತಾದ ತಳಿಗಳನ್ನು ಖರೀದಿಸಲು ಕೇಂದ್ರ ಸರ್ಕಾರದ ಅನುಮತಿಗಾಗಿ ಸಭೆ ನಡೆಯಿತು. ಸುದೀರ್ಘ ಚರ್ಚೆಯ ಬಳಿಕ ಕೇಂದ್ರದ ಅನುಮತಿ ಪಡೆಯಲು ಅಗತ್ಯ ಪ್ರಸ್ತಾವನೆ ಸಲ್ಲಿಸುವ ಕುರಿತು ನಿರ್ಣಯ ಕೈಗೊಳ್ಳಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು