8:16 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮಕ್ಕಳನ್ನು  ಬೈಕ್ ನಲ್ಲಿ ಕರೆದುಕೊಂಡು ಹೋಗುತ್ತೀರಾ? ಬಂದಿದೆ ಹೊಸ ರೂಲ್ಸ್ !: ಏನಿದೆ ಅದರಲ್ಲಿ.. ? ಮುಂದಕ್ಕೆ ಓದಿ

26/10/2021, 21:20

ಸಾಂದರ್ಭಿಕ ಚಿತ್ರ
ಹೊಸದಿಲ್ಲಿ(reporterkarnataka.com): ಅಪ್ರಾಪ್ತ ವಯಸ್ಸಿನ ಮಕ್ಕಳ ಪ್ರಯಾಣ ಸುರಕ್ಷತೆಗಾಗಿ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯವು ಬೈಕ್ ಗಳ ವೇಗಕ್ಕೆ ಮಿತಿಯ ಮೇಲೆ ಕಡಿವಾಣ ಹಾಕುವ ಬಗ್ಗೆ ಪ್ರಸ್ತಾವನೆಯನ್ನು ಸಲ್ಲಿಸಿದೆ.

ನಾಲ್ಕು ವರ್ಷದವರೆಗಿನ ಮಕ್ಕಳನ್ನು ಮೋಟಾರ್  ಸೈಕಲ್ ನಲ್ಲಿ ಕರೆದುಕೊಂಡು ಹೋಗುವ ವೇಳೆ ಬೈಕ್ ಗಳ ವೇಗದ ಮಿತಿ ಪ್ರತಿ ಗಂಟೆಗೆ 40 ಕಿ.ಮೀ. ದಾಟುವಂತಿಲ್ಲ ಹಾಗೂ 9 ತಿಂಗಳಿನಿಂದ 4 ವರ್ಷ ಪ್ರಾಯದ ಮಕ್ಕಳು ಕ್ರ್ಯಾಶ್  ಹೆಲ್ಮೆಟ್  ಕಡ್ಡಾಯವಾಗಿ ಧರಿಸಬೇಕು ಎಂಬುದರ ಬಗ್ಗೆ ಪ್ರಸ್ತಾವನೆಯನ್ನು ಸಲ್ಲಿಸಿದೆ.

ಸಚಿವಾಲಯವು ಹೊರಡಿಸಿರುವ ಕರಡು ಅಧಿಸೂಚನೆಯ ಪ್ರಕಾರ, 4 ವರ್ಷದ ಒಳಗಿನ ಮಗುವನ್ನು ಮೋಟಾರ್  ಬೈಕಿನಲ್ಲಿ ಸಾಗಿಸುವ ವೇಳೆ ವೇಗದ ಮಿತಿ ಗಂಟೆಗೆ 40 ಕಿಲೋಮೀಟರ್  ಮೀರಬಾರದು. ಅಲ್ಲದೇ 9 ತಿಂಗಳಿನಿಂದ 4 ವರ್ಷದ ಮಕ್ಕಳಿಗೆ ಕಡ್ಡಾಯವಾಗಿ ಕ್ರ್ಯಾಶ್  ಹೆಲ್ಮೆಟ್  ಹಾಕಿಸಬೇಕು ಎಂದು ಸಚಿವಾಲಯ ಹೇಳಿದೆ.

ಮಕ್ಕಳು ಧರಿಸುವ ಈ ಸುರಕ್ಷತಾ ಸರಂಜಾಮು ಕೋಟ್  ರೀತಿಯಲ್ಲಿ ಇರಲಿದ್ದು ಇದನ್ನು ಮಗುವಿನ ಅಳತೆಗೆ ತಕ್ಕಂತೆ ಸರಿಹೊಂದಿಸಬಹುದಾಗಿದೆ. ಈ ಧಿರಿಸಿಗೆ ಅಳವಡಿಸಲಾದ ಪಟ್ಟಿಗಳನ್ನು ಚಾಲಕ ಧರಿಸಬೇಕು. ಈ ಮೂಲಕ ಮಗು ಬೈಕ್ ನಲ್ಲಿ ಸುರಕ್ಷಿತವಾಗಿ ಇರಲಿದೆ ಎಂದು ಸಚಿವಾಲಯ ವಿವರಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು