10:26 PM Monday21 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಆನ್ಲೈನ್ ಮೂಲಕವೇ ಹೊಸ ವಾಹನಗಳ ನೋಂದಣಿ: ರಾಜ್ಯ ಸರಕಾರ ತಂದಿದೆ ಹೊಸ ರೂಲ್ಸ್

27/10/2021, 10:13

ಬೆಂಗಳೂರು(reporterkarnataka.com) : ಪ್ರಾದೇಶಿಕ ಸಾರಿಗೆ ಕಚೇರಿಯ ವಾಹನ ನಿರೀಕ್ಷಕರ ಪರಿವೀಕ್ಷಣೆಗೆ ಕೊಂಡೊಯ್ಯದೇ, ಮೊದಲ ಬಾರಿಗೆ ಖರೀದಿಸಿದಂತ ಹೊಸ ವಾಹನಗಳನ್ನು  ಆನ್ ಲೈನ್ ಮೂಲಕವೇ ನೊಂದಣಿಗೆ ಅವಕಾಶ ನೀಡಿ ರಾಜ್ಯ ಸರ್ಕಾರ  ಆದೇಶ ಹೊರಡಿಸಿದೆ.

ತಯಾರಿಕಾ ಹಂತದಲ್ಲಿಯೇ ರಸ್ತೆ ಬಳಕೆಗೆ ಯೋಗ್ಯವಾಗುವಂತೆ ಸಂಪೂರ್ಣ ನಿರ್ಮಿತವಾಗಿರುವ  ಹಾಗೂ ಅಧಿಕೃತ ಮಾರಾಟಗಾರರಿಂದ ಮಾರಾಟಗೊಂಡ ಪ್ರಥಮ ಬಾರಿಗೆ ನೋಂದಣಿ ಮಾಡಿಸಿಕೊಳ್ಳುವಂತ ವಾಹನಗಳನ್ನು ಮೋಟಾರು ವಾಹನ ನಿರೀಕ್ಷಕರ ಪರಿವೀಕ್ಷಣೆಗಾಗಿ ಪ್ರಾದೇಶಿಕ ಸಾರಿಗೆ ಕಛೇರಿಗೆ ಕೊಂಡೊಯ್ದನಂತ್ರ ನೋಂದಣಿ ಮಾಡುವ ಪದ್ದತಿ ಈವರೆಗೆ ಜಾರಿಯಲ್ಲಿದೆ.

ವಾಹನಗಳನ್ನು ಪ್ರಥಮ ಬಾರಿಗೆ ನೋಂದಣಿ ಮಾಡಲು ಪರಿವೀಕ್ಷಣೆಗಾಗಿ ನೋಂದಣಿ ಪ್ರಾಧಿಕಾರದ ಮುಂದೆ ಹಾಜರು ಪಡಿಸುವ ಅವಶ್ಯಕತೆಯನ್ನು ಕೇಂದ್ರ ಮೋಟಾರು ವಾಹನ ನಿಯಮಾವಳಿಗೆ ತಿದ್ದುಪಡಿತಂದು, ತೆಗೆದುಹಾಕಲಾಗಿದೆ. ಹೊಸ ತಿದ್ದುಪಡಿ ನಿಯಮದಂತೆ ಇನ್ಮುಂದೆ ಅಧಿಕೃತ ಮಾರಾಟಗಾರರಿಂದ ಖರೀದಿಸಿದ ಸಂಪೂರ್ಣವಾಗಿ ನಿರ್ಮಿತವಾಗಿರುವ ಮೋಟಾರು ವಾಹನಗಳನ್ನು ಪ್ರಾದೇಶಿಕ ಸಾರಿಗೆ ಕಚೇರಿಗೆ ಕೊಂಡೊಯ್ಯದೇ ನೋಂದಣಿ ಮಾಡಿಸಿಕೊಳ್ಳುವ ವ್ಯವಸ್ಥೆಯನ್ನು ಕೂಡಲೇ ಜಾರಿಗೆ ಬರುವಂತೆ ತರಲಾಗಿದೆ.

ಅಧಿಕೃತ ಮಾರಾಟಗಾರರಿಂದ ಮಾರಾಟಮಾಡಿದ ವಾಹನಗಳ ವಿವರಗಳನ್ನು ವಾಹನ-4 ಪೋರ್ಟಲ್ ನಲ್ಲಿ ಮಾರಾಟಗಾರರು  ನಮೂದಿಸಿ, ನೋಂದಣಿಗೆ ತಗಲುವ ತೆರಿಗೆ ಮತ್ತು ಶುಲ್ಕಗಳನ್ನು ಆನ್ ಲೈನ್ ಮೂಲಕ ಪಾವತಿಸಿ, ಅರ್ಜಿಯನ್ನು ಆನ್ ಲೈನ್ ಮುಖಾಂತರವೇ ಸಂಬಂಧಪಟ್ಟ ನೋಂದಣಿ ಪ್ರಾಧಿಕಾರಕ್ಕೆ ಸಲ್ಲಿಸುವುದು.

ಆನ್ ಲೈನ್ ನಲ್ಲಿ ಸ್ವೀಕರಿಸಿದಂತಹ ಅರ್ಜಿಗಳನ್ನು ಆನ್ ಲೈನ್ ನಲ್ಲಿಯೇ ಪರಿಶೀಲಿಸಿ, ನೋಂದಣಿ ಪ್ರಾಧಿಕಾರದಿಂದ ಅನುಮೋದನೆಗೊಳ್ಳುತ್ತದೆ ಹಾಗೂ ನೋಂದಣಿ ಕ್ರಮಾಂಕವನ್ನು ನೀಡಲಾಗುತ್ತದೆ. ಈ ಬಗ್ಗೆ ರಾಜ್ಯದ ಎಲ್ಲಾ ನೋಂದಣಿ ಪ್ರಾಧಿಕಾರಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು