12:15 AM Saturday4 - May 2024
ಬ್ರೇಕಿಂಗ್ ನ್ಯೂಸ್
ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ…

ಇತ್ತೀಚಿನ ಸುದ್ದಿ

ಕೋವಿಡ್ ಕೇರ್ ಸೆಂಟರ್ ಗೆ ಮಸ್ಕಿ ನೂತನ ಶಾಸಕ ತುರುವಿಹಾಳ ಭೇಟಿ: ಊಟ, ನೀರಿನ ವ್ಯವಸ್ಥೆ ಸರಿಯಿಲ್ಲ ಎಂದ ಸೋಂಕಿತರು

28/05/2021, 08:22

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಮಸ್ಕಿ ಮುದುಗಲ್ ರಸ್ತೆ ಪಕ್ಕದಲ್ಲಿರುವ ಸರಕಾರಿ ಮುರಾರ್ಜಿ ವಸತಿ ಶಾಲೆಯಲ್ಲಿ ನಿರ್ಮಿಸಿದ ಕೋವಿಡ್ ಕೇರ್ ಸೆಂಟರ್ ಗೆ ನೂತನ ಶಾಸಕ ಬಸನಗೌಡ ತುರುವಿಹಾಳ ಭೇಟಿ ನೀಡಿ ಅವರ ಯೋಗಕ್ಷೇಮ ವಿಚಾರಿಸಿದರು. 

ಸೋಂಕಿತರಿಗೆ ಧೈರ್ಯ ತುಂಬಿದ ಅವರು ಗ್ರಾಮೀಣ ಪ್ರದೇಶದಲ್ಲಿ ಜನರು ಮುಖ್ಯವಾಗಿ ಸಾಮಾಜಿಕ ಅಂತರ ಕಾಪಾಡ ಬೇಕು.ಮುಖಕ್ಕೆ ಮಾಸ್ಕ್ ಧರಿಸಿ ಸ್ಯಾನಿಟೈಸರ್ ನಿಂದ ತೊಳೆಯುತ್ತಾ ಜೀವ ಕಾಪಾಡಿಕೊಳ್ಳಬೇಕು ಎಂದರು.

ಕೋವಿಡ್ ಸೋಂಕಿತರು ಯಾವುದೇ ಕಾರಣಕ್ಕೆ ಧೈರ್ಯ ಕಳೆದುಕೊಳ್ಳಬಾರದು. ಭಯಪಡ ಬಾರದು. ಆಗ ಏನೂ ಆಗುವುದಿಲ್ಲ. ಹಾಗೆ ಕೋವಿಡ್ ಮುಕ್ತ ಮಾಡೋಣ ಎಂದು ಹೇಳಿದರು.

ಈ ವೇಳೆ ಸೋಂಕಿತರು, ನಮಗೆ ಇಲ್ಲಿ ಊಟದ ವ್ಯವಸ್ಥೆ ಸರಿಯಿಲ್ಲ. ನೀರಿನ ವ್ಯವಸ್ಥೆ ಸರಿಯಿಲ್ಲ.ಸ್ವಚ್ಛತೆ ಕೊರತೆ ಇದೆ. ಅಧಿಕಾರಿಗಳು ಸ್ಪಂದಿಸಿದ ಇದ್ದಲ್ಲಿ ಶಾಸಕರಾದ ನಿಮಗೆ ನಾವು ಕರೆ ಮಾಡುತ್ತೇವೆ ಎಂದು ಹೇಳಿದರು. ಆ ವೇಳೆ ಪುರಸಭೆ ಮುಖ್ಯಧಿಕಾರಿ ಹನುಮಂತಮ್ಮ ನಾಯಕ್ ಮಾತನಾಡಿ, ಕುಡಿಯುವ ನೀರು ಸ್ವಚ್ಛತೆ ಕಾಪಾಡಿಕೊಳ್ಳುತ್ತೇವೆ ಎಂದು ಭರವಸೆ ನೀಡಿದರು.

ಶಾಸಕ ಬಸವನಗೌಡ ತುರುವಿಹಾಳ ಮಾತನಾಡಿ ಕೊರೊನಾ ಸೋಂಕು ಕಳೆದ ಹಲವು ದಿನಗಳಿಂದ ಹೆಚ್ಚಾಗಿ ಪರಿಣಮಿಸಿದೆ. ಸೋಂಕಿತರು ಭಯಪಡಬೇಡಿ ಎಂದು  ಧೈರ್ಯ ತುಂಬಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಪಾಟೀಲ್, ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನುಮಂತಪ್ಪ ಮುದ್ದಾಪುರ್, ತಹಶೀಲ್ದಾರ್ ಬಲರಾಮ್ ಕಟ್ಟಿಮನಿ, ಕಾರ್ಯನಿರ್ವಾಹಕ ಅಧಿಕಾರಿ ಬಾಬು ರಾತೋಡ್,ಶ್ರೀಶೈಲಪ್ಪ ಬ್ಯಾಳಿ, ಪುರಸಭೆ ಮುಖ್ಯ ಅಧಿಕಾರಿ ಹನುಮಂತಮ್ಮ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು