ಇತ್ತೀಚಿನ ಸುದ್ದಿ
ಸಾಲ ಕಂತು ಮರು ಪಾವತಿಗೆ ಒತ್ತಡ ಹೇರಿದರೆ ಕ್ರಮ: ಜಿಲ್ಲಾಧಿಕಾರಿ ಖಡಕ್ ಎಚ್ಚರಿಕೆ, ನೋಡೆಲ್ ಅಧಿಕಾರಿಗಳ ನೇಮಕ
28/05/2021, 12:06
ಮಂಗಳೂರು(reporterkarnataka news) : ಕೊರೊನಾ ಲಾಕ್ ಡೌನ್ ಜಾರಿಯಾಗಿರುವ ಹಿನ್ನೆಲೆಯಲ್ಲಿ ಹಲವಾರು ಮಂದಿ ಉದ್ಯೋಗವಿಲ್ಲದೆ ಮನೆಯಲ್ಲೇ ಉಳಿದುಕೊಂಡಿದ್ದಾರೆ. ಹೀಗಿರುವಾಗ ಫೈನಾನ್ಸ್, ಮೈಕ್ರೋ ಫೈನಾನ್ಸ್, ಹಣಕಾಸು ಸಂಸ್ಥೆಗಳು ಸಾಲ ಮರುಪಾವತಿಗೆ ಒತ್ತಡ ಹೇರುವಂತಿಲ್ಲ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಖಡಕ್ ಆದೇಶ ನೀಡಿದ್ದಾರೆ.
ಲಾಕ್ ಡೌನ್ ನಿಂದ ಜನಸಾಮಾನ್ಯರು ಕೆಲಸ ಇಲ್ಲದೆ ಮನೆಯಲ್ಲೇ ಉಳಿಯುವಂತಾಗಿದೆ. ಸಾಲದ ಕಂತು ಮರು ಪಾವತಿಸಲು ಕಷ್ಟ ಸಾಧ್ಯವಾಗಿದೆ. ಈ ಹಿನ್ನೆಲೆಯಲ್ಲಿ ಸಾಲ ನೀಡಿರುವ ಹಣಕಾಸು ಸಂಸ್ಥೆಗಳು, ಫೈನಾನ್ಸ್ ಗಳು, ಮೈಕ್ರೋ ಫೈನಾನ್ಸ್ ಗಳು ಸಾಲದ ಕಂತು ಪಾವತಿಸುವಂತೆ ಒತ್ತಾಯಿಸಬಾರದು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.
ಸಾಲ ನೀಡಿರುವ ಯಾವುದೇ ಸಂಸ್ಥೆಗಳು ಸಾರ್ವಜನಿಕರಿಗೆ ಸಾಲ ಮರು ಪಾವತಿಸುವಂತೆ ಒತ್ತಡ ಹೇರಿದ್ದಲ್ಲಿ ಅಂತಹ ಸಂದರ್ಭದಲ್ಲಿ ಆ ಸಂಸ್ಥೆಗಳ ವಿರುದ್ಧ ದೂರು ನೀಡಲು ನೋಡಲ್ ಅಧಿಕಾರಿಗಳನ್ನು ಜಿಲ್ಲಾಧಿಕಾರಿ ನೇಮಿಸಿದ್ದಾರೆ. ಮೈಕ್ರೋ ಫೈನಾನ್ಸ್ಗ್ ಗಳು ಹಾಗೂ ಸಹಕಾರಿ ಸಂಸ್ಥೆಗಳು ಸಾಲ ಪಾವತಿಸುವಂತೆ ಒತ್ತಡ ಹೇರಿದ್ದಲ್ಲಿ ಅಂತಹ ಸಂದರ್ಭದಲ್ಲಿ ದೂರು ನೀಡಲು ಸಹಕಾರಿ ಸಂಘಗಳ ಉಪ ನಿಬಂಧಕರಾದ ಪ್ರವೀಣ್.ಬಿ ನಾಯಕ್ (944863338) ಇವರಿಗೆ ದೂರು ನೀಡುವಂತೆ ತಿಳಿಸಲಾಗಿದೆ. ಇನ್ನುಳಿದಂತೆ ಇತರೆ ಸಂಸ್ಥೆಗಳಿಗೆ ಸಂಬಂಧಿಸಿದ ದೂರುಗಳಾದಲ್ಲಿ, ಲೀಡ್ ಡಿಸ್ಟ್ರಿಕ್ ಮ್ಯಾನೇಜರ್ ಪ್ರವೀಣ್ (9449860916) ಅವರ ಮೂಲಕ ದೂರು ನೀಡಬಹುದಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.