11:03 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಉಪನ್ಯಾಸಕಿ ಶ್ರೀ ಮುದ್ರಾಡಿ ಅವರ ಚೊಚ್ಚಲ ಕವನ ಸಂಕಲನ ‘ಇಲ್ಲಗಳ ನಡುವೆ’ ನವೆಂಬರ್ 1ರಂದು ಲೋಕಾರ್ಪಣೆ

29/10/2021, 16:40

ಕಾರ್ಕಳ(reporterkarnataka.com): ನಿಟ್ಟೆ ಡಾ. ಎನ್. ಎಸ್. ಎ.ಎಂ. ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ  ಶ್ರೀ ಮುದ್ರಾಡಿ ಅವರ ಚೊಚ್ಚಲ ಕವನ ಸಂಕಲನ ‘ಇಲ್ಲಗಳ ನಡುವೆ’ ನವೆಂಬರ್ 1ರಂದು ಬಿಡುಗಡೆಗೊಳ್ಳಲಿದೆ.

ಕೃತಿಯನ್ನು ನವೆಂಬರ್  1ರಂದು ಕರ್ನಾಟಕ ರಾಜ್ಯ ಫೆಡರೇಶನ್ ಆಫ್ ಕರ್ನಾಟಕ ಕ್ವಾರಿ ಸ್ಟೋನ್ ಕ್ರಷರ್ಸ್ ಓನರ್ಸ್ ಅಸೋಸಿಯೇಶನ್ ರಾಜ್ಯಾಧ್ಯಕ್ಷ ರವೀಂದ್ರ ಶೆಟ್ಟಿ ಬಜಗೋಳಿ ಅವರ ನಿವಾಸ ಎಸ್.ಪಿ. ಗಾರ್ಡನ್ ನಲ್ಲಿ ಪ್ರೇಮಾ ಸಾಧು ಶೆಟ್ಟಿ ಅವರು ಬಿಡುಗಡೆ ಮಾಡಲಿದ್ದಾರೆ. ಕಾರ್ಕಳದ ಹೊಸ ಸಂಜೆ ಪ್ರಕಾಶನದ ಹೆಮ್ಮೆಯ ಕೃತಿ ಇದಾಗಿದೆ.

ಕನ್ನಡ ಉಪನ್ಯಾಸಕಿಯಾದ ಶ್ರೀ ಮುದ್ರಾಡಿ ಅವರು ಪ್ರಸಿದ್ಧ ಸಾಹಿತಿ, ವಿಮರ್ಶಕ, ಅಷ್ಟಾವಧಾನಿ, ಹರಿದಾಸ ಹೀಗೆ ಬಹು ಕ್ಷೇತ್ರಗಳಲ್ಲಿ ಪಾಂಡಿತ್ಯ ಹೊಂದಿದ ಅಂಬಾತನಯ ಮುದ್ರಾಡಿ ಅವರ ಪುತ್ರಿ. ಶ್ರೀ ಮುದ್ರಾಡಿ ಅವರು ಮೂಲತಃ ಪತ್ರಕರ್ತೆ. ಅವರು ಮುಂಗಾರು ಪತ್ರಿಕೆಯಲ್ಲಿ ಉಪ ಸಂಪಾದಕಿಯಾಗಿ ಕಾರ್ಯನಿರ್ವಹಿಸಿದ್ದರು. ನಂತರ ಪತ್ರಿಕಾರಂಗದಿಂದ ಶಿಕ್ಷಣ ಕ್ಷೇತ್ರಕ್ಕೆ ಕಾಲಿಟ್ಟರು. ಶೈಕ್ಷಣಿಕ ಅಧ್ಯಯನಕ್ಕಾಗಿ ಸ್ಕಾಟ್ ಲ್ಯಾಂಡ್ ಗೆ ಕೂಡ ಹೋಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು