9:10 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ನಟ ಪುನೀತ್ ರಾಜ್ ಕುಮಾರ್ ನಿಧನ: ರಾಜ್ಯಾದ್ಯಂತ ನಾಳೆ(ಅ.30) ಖಾಸಗಿ ಶಾಲೆಗಳಿಗೆ ರಜೆ

29/10/2021, 23:33

ಬೆಂಗಳೂರು(reporterkarnataka.com): ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನ ಹಿನ್ನೆಲೆಯಲ್ಲಿ ನಾಳೆ ಅ.30ರಂದು ರಾಜ್ಯಾದ್ಯಂತ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಈ ಕುರಿತು ಖಾಸಗಿ ಶಾಲೆಗಳ ಒಕ್ಕೂಟ ರೂಪ್ಸಾ ಪ್ರಕಟಣೆ ಹೊರಡಿಸಿದ್ದು, ಪುನೀತ್ ರಾಜ್ ಕುಮಾರ್ ಅಕಾಲಿಕ ಮರಣ ಹಿನ್ನೆಲೆಯಲ್ಲಿ ಶೋಕಾಚರಣೆ ನಿಮಿತ್ತ ಖಾಸಗಿ ಶಾಲೆಗಳಿಗೆ ನಾಳೆ ರಜೆ ಘೋಷಿಸಲಾಗಿದೆ ಎಂದು ತಿಳಿಸಿದೆ. ಆದರೆ ಸರ್ಕಾರಿ ಶಾಲೆಗಳಿಗೆ ರಜೆ ಘೋಷಿಸುವ ಕುರಿತು ಇನ್ನೂ ಯಾವುದೇ ನಿರ್ಧಾರವಾಗಿಲ್ಲ.

ಇನ್ನು ನಾಳೆ ನಡೆಯಬೇಕಿದ್ದ ಎಂಬಿಎ ಪರೀಕ್ಷೆಗಳನ್ನು ಕೂಡ ಮುಂದೂಡಲಾಗಿದೆ. ನಟ ಪುನೀತ್ ರಾಜ್ ಕುಮಾರ್ ವಿಧಿವಶ ಹಿನ್ನೆಲೆಯಲ್ಲಿ ನಾಳೆ ನಡೆಯಬೇಕಿದ್ದ ಎಂಬಿಎ ಅಂತಿಮ ವರ್ಷದ ಪರೀಕ್ಷೆಗಳನ್ನು ಮಂಗಳವಾರಕ್ಕೆ ಮುಂಡೂಡಲಾಗಿದೆ ಎಂದು ಬೆಂಗಳೂರು ಸಿಟಿ ವಿವಿ ಕುಲಪತಿ ಲಿಂಗರಾಜು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು