ಇತ್ತೀಚಿನ ಸುದ್ದಿ
ಬುದ್ದಿವಂತರ ಜಿಲ್ಲೆಯಲ್ಲಿ ಬೇಜವಾಬ್ದಾರಿಯ ಘಟನೆ: ಮಂಗಳೂರಿನಲ್ಲಿ ತಲೆ ಕೆಳಗಾಗಿ ಹಾರಿದ ರಾಷ್ಟ್ರಧ್ವಜ!!
01/11/2021, 11:49

ಮಂಗಳೂರು(reporterkarnataka.com): ನಗರದ ನೆಹರೂ ಮೈದಾನದಲ್ಲಿ ಸೋಮವಾರ ನಡೆದ ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ರಾಷ್ಟ್ರಧ್ವಜವನ್ನು ತಲೆ ಕೆಳಗಾಗಿ ಹಾರಿಸಿದ ಘಟನೆ ನಡೆದಿದೆ.
ಜಿಲ್ಲಾಮಟ್ಟದ ರಾಜ್ಯೋತ್ಸವ ಸಮಾರಂಭದಲ್ಲಿ ಬಂದರು ಹಾಗೂ ಮೀನುಗಾರಿಕೆ ಸಚಿವ ಎಸ್. ಅಂಗಾರ ಅವರು ರಾಷ್ಟ್ರ ಧ್ವಜಾರೋಹಣ ಮಾಡಿದರು. ಅಧಿಕಾರಿ ಹಾಗೂ ಸಿಬ್ಬಂದಿಗಳ ಬೇಜವಾಬ್ದಾರಿತನದಿಂದ ಧ್ವಜವನ್ನು ಉಲ್ಟಾ ಹಾಕಲಾಗಿತ್ತು. ಬಳಿಕ ಇದು ಸಾರ್ವಜನಿಕರ ಗಮನಕ್ಕೆ ಬಂದ ಬಳಿಕ ಅಧಿಕಾರಿಗಳು ಸರಿಪಡಿಸಿದರು.