8:36 AM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಕೊರೊನಾದಿಂದ ತತ್ತರಿಸಿರುವ ದೇಶದ ಆರ್ಥಿಕ ಪುನಶ್ಚೇತನಕ್ಕೆ ಕರೆನ್ಸಿ ಮುದ್ರಣ ಅಗತ್ಯ ಎಂದ ಬ್ಯಾಂಕರ್ ಉದಯ್ ಕೋಟಕ್

28/05/2021, 15:16

ನವದೆಹಲಿ(reporterkarnataka news)  ಕೋವಿಡ್ ಸಾಂಕ್ರಾಮಿಕದಿಂದಾಗಿ ನಲುಗಿರುವ ದೇಶದ ಆರ್ಥಿಕತೆಗೆ  ಪುನಶ್ಚೇತನ ನೀಡುವ ಉದ್ದೇಶದಿಂದ ಭಾರತ ಕರೆನ್ಸಿ ನೋಟುಗಳನ್ನು ಮುದ್ರಿಸುವ ಅಗತ್ಯವಿದೆ. ಆರ್‍ಬಿಐನ ಬೆಂಬಲದೊಂದಿಗೆ ವಿತ್ತೀಯ ವಿಸ್ತರಣೆ ಅಥವಾ ಹಣ ಮುದ್ರಿಸುವ ಅಗತ್ಯವಿದೆ. ಈಗ ಆ ಕ್ರಮ ಕೈಗೊಳ್ಳದಿದ್ದರೆ ಮತ್ತಿನ್ಯಾವಾಗ ಮಾಡುವುದು ?ಎಂದು ದೇಶದ ಪ್ರತಿಷ್ಠಿತ ಬ್ಯಾಂಕರ್ ಆಗಿರುವ ಉದಯ್ ಕೋಟಕ್ ಪ್ರಶ್ನಿಸಿದ್ದಾರೆ.

ಖಾಸಗಿ ಸುದ್ದಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು,ನನ್ನ ಅಭಿಪ್ರಾಯದಂತೆ ಸರಕಾರದ ಬ್ಯಾಲೆನ್ಸ್ ಶೀಟ್ ವಿಸ್ತರಿಸುವ ಸಮಯ ಇದಾಗಿದೆ ಎಂದರು.

ಬಡವರಿಗೆ ನೇರ ನಗದು ವರ್ಗಾವಣೆಗೆ  ಸರಕಾರ ಜಿಡಿಪಿಯ ಶೇ1ರಷ್ಟು  ಅಥವಾ ರೂ 1 ಲಕ್ಷ ಕೋಟಿಯಿಂದ ರೂ 2 ಲಕ್ಷ ಕೋಟಿ ತನಕ ಹಣ ವ್ಯಯಿಸಬೇಕು. ಇದು  ಸಮಾಜದ ಕೆಳಸ್ತರದಲ್ಲಿರುವ ಜನರಿಗೆ ಬಲ ನೀಡಲಿದೆ. ಬಡವರಲ್ಲಿ ಅತ್ಯಂತ ಬಡವರಿಗೆ ವೈದ್ಯಕೀಯ ಸವಲತ್ತುಗಳನ್ನು ಒದಗಿಸಬೇಕು ಎಂದು ಉದಯ್ ಕೋಟಕ್  ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು