7:35 AM Monday6 - October 2025
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಸಂಬಂಧಿಕರ ಸಾವಿಗೆ ತೆರಳಿದ್ದ ಯುವಕ ಹಾರಂಗಿ ಮುಖ್ಯ ನಾಲೆಯಲ್ಲಿ ಈಜಲು ಹೋಗಿ… ಮೈಸೂರು ದಸರಾ ಜಂಬೂ ಸವಾರಿ: ಚಿತ್ರದುರ್ಗದ ಸ್ತಬ್ದಚಿತ್ರಕ್ಕೆ ಪ್ರಥಮ ಸ್ಥಾನ ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ

ಇತ್ತೀಚಿನ ಸುದ್ದಿ

ಪಾದುವಾ ಕಾಲೇಜಿನ ಎನ್ನೆಸ್ಸೆಸ್ ನಿಂದ ‘ಮಾನಸಿಕ ಆರೋಗ್ಯಕ್ಕಾಗಿ ಮನೋಲ್ಲಾಸದ ಚಟುವಟಿಕೆ’ ಕಾರ್ಯಕ್ರಮ

28/05/2021, 16:41

ಮಂಗಳೂರು(reporterkarnataka news): ಪಾದುವ ಕಾಲೇಜ್ ಆಫ್ ಕಾಮರ್ಸ್ ಆಂಡ್ ಮ್ಯಾನೇಜ್ಮೆಂಟ್ ನ  ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ವಿದ್ಯಾರ್ಥಿಗಳಿಗಾಗಿ ‘ಮಾನಸಿಕ ಆರೋಗ್ಯಕ್ಕಾಗಿ ಮನೋಲ್ಲಾಸದ ಚಟುವಟಿಕೆ’ ಎಂಬ ಕಾರ್ಯಗಾರವು ಆನ್ಲೈನ್ ಮೂಲಕ ಜರುಗಿತು.
ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಆಪ್ತ ಸಲಹೆಗಾರ ಅಂಕಿತ್ ಸುವರ್ಣ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ ಇಂದಿನ ಮಹಾಮಾರಿಯಂತಹ  ಸಂಕಷ್ಟದ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮನಸ್ಸು ವಿಚಲಿತವಾಗದಂತೆ ಅವರನ್ನು ಶೈಕ್ಷಣಿಕ ಚಟುವಟಿಕೆಗಳತ್ತ ಸೆಳೆಯುವ ನಿಟ್ಟಿನಲ್ಲಿ ಉಪನ್ಯಾಸ ನೀಡಿದರು.

ಕಾಲೇಜಿನ ಪ್ರಾಂಶುಪಾಲ ರೆ. ಫಾ. ಆಲ್ವಿನ್ ಸೆರಾವೊ ಅವರು ಪ್ರಾಸ್ತಾವಿಕ ಭಾಷಣ ಮಾಡಿ ಈ ಕಠಿಣ ಪರಿಸ್ಥಿತಿಯಲ್ಲಿ ಮಾನಸಿಕ ಆರೋಗ್ಯವನ್ನು ಕಾಪಾಡಲು ಕರೆಯಿಟ್ಟರು.

ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ ಮಾತನಾಡಿ ಆರೋಗ್ಯವಂತ ಮನಸ್ಸು ಪರಿಪೂರ್ಣ ಬೆಳವಣಿಗೆಯ ಮೂಲ ಮಂತ್ರ, ಇನ್ನೊಬ್ಬರ ಭಾವನೆಗಳಿಗೆ ಸ್ಪಂದನೆ,ಧನಾತ್ಮಕ ಚಿಂತನೆ,ಮಾನವೀಯ ಸಂಬಂಧಗಳನ್ನು ಬೆಳೆಸಿಕೊಳ್ಳುವುದರ ಮೂಲಕ ಕೋವಿಡ್ ನ ಆತಂಕದ ದಿನಗಳ ಒತ್ತಡದಿಂದ ಪಾರಾಗಬಹುದು. ಎಂದು ತಿಳಿಸಿದರು.




ಪದುವ ಕಾಲೇಜಿನ ರಾ. ಸೇ. ಯೋ. ಘಟಕದ ಯೋಜನಾಧಿಕಾರಿ ರೋಶನ್ ಸಾಂತುಮಯೋರ್ ಅಚ್ಚುಕಟ್ಟಾಗಿ ಕಾರ್ಯಕ್ರಮವನ್ನು ರೂಪಿಸಿದರು.
ಸಹ ಯೋಜನಾಧಿಕಾರಿ ರೇಷ್ಮಾ ಡಿಸೋಜ ಕಾರ್ಯಕ್ರಮ ನಿರೂಪಿಸಿದರು. ಸ್ವಯಂ ಸೇವಕ ಅಕ್ಷಯ್ ವಂದಿಸಿದರು.
ಕಾಲೇಜಿನ ಪ್ರಾಧ್ಯಾಪಕಿ ಜೆಸ್ಫ್ರಿಡಾ ಮಿನೆಜಸ್ ತಾಂತ್ರಿಕ ನೆರವು ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು