8:23 AM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಆಯುರ್ವೇದಕ್ಕೆ ಇದು ಅಮೃತ ಕಾಲ: ಖ್ಯಾತ ವೈದ್ಯ ಡಾ.ಶ್ರೀಪತಿ ಕಿನ್ನಿಕಂಬಳ ಅಭಿಮತ

02/11/2021, 18:52

ಮಂಗಳೂರು(reporterkarnataka.com): ನಮ್ಮ ಪೂರ್ವಜರು ಸಹಸ್ರಾರು ವರ್ಷಗಳ ಇತಿಹಾಸವುಳ್ಳ ಆಯುರ್ವೇದ ಜೀವನ ಪದ್ಧತಿಗೆ ಮಹತ್ತರ ಕೊಡುಗೆ ನೀಡುತ್ತಾ ಬಂದಿದ್ದಾರೆ. ಈಗ ಆಯುರ್ವೇದ ಪದ್ಧತಿಗೆ ಅಮೃತ ಕಾಲವಾಗಿದ್ದು, ದೇಶ ವಿದೇಶಗಳಲ್ಲಿ ಇದು ಅತ್ಯಂತ ಫಲಪ್ರದವೆಂಬ ವಿಶ್ವಾಸ ಮೂಡಿಬರುತ್ತಿದೆ ಎಂದು ಖ್ಯಾತ ಆಯುರ್ವೇದ ವೈದ್ಯ ಡಾ.ಶ್ರೀಪತಿ ಕಿನ್ನಿಕಂಬಳ ಹೇಳಿದರು.

ರಾಷ್ಟ್ರೀಯ ಆಯುರ್ವೇದ ದಿನಾಚರಣೆಯ ಪ್ರಯುಕ್ತ ನಗರದ ವೆನ್ಲಾಕ್ ಆಯುಷ್ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆಯಲ್ಲಿ ಹಮ್ಮಿಕೊಂಡ ವಿಶೇಷ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡಿದರು.

ಆಯುಷ್ ಇಲಾಖೆಯು ನಮ್ಮ ಜಿಲ್ಲೆಯಲ್ಲಿ ಉತ್ತಮ ಕಾರ್ಯಕ್ರಮಗಳ ಮೂಲಕ ಸೇವೆ ನೀಡುತ್ತಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕಿಶೋರ್ ಕುಮಾರ್ ಮಾತನಾಡಿ, ಆಯುಷ್ ಇಲಾಖೆಯು ಆರೋಗ್ಯ ಇಲಾಖೆಯ ಜೊತೆಗೆ ಉತ್ತಮ ಬಾಂಧವ್ಯ ಹೊಂದಿದೆ. ಜಿಲ್ಲೆಯ ಅಯುಷ್ ಒಂದೇ ತಂಡವಾಗಿ ಬಹಳ ಉತ್ತಮ ರೀತಿಯಲ್ಲಿ ಸೇವೆಗೈಯುತ್ತಿದೆ. ಕೋವಿಡ್ ಸಂಕಷ್ಟಗಳ ಸಂದರ್ಭದಲ್ಲಿ ಸುಮಾರು 48000 ಜನರ ಕರೆಗಳಿಗೆ ಸ್ಪಂದಿಸಿ ಅವರಿಗೆ ಸೂಕ್ತ ಚಿಕಿತ್ಸಾ ಸಲಹೆ ಹಾಗೂ ಆಯುಷ್ ಇಮ್ಯೂನಿಟಿ ಬೂಸ್ಟರ್ ವಿತರಣೆ ಮಾಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ಡಾ.ಅಂಬಿಕಾ ನಾಯಕ್ ಅವರು ಆಯುರ್ವೇದಾನುಸಾರ ಆಹಾರ ತಯಾರಿಕೆ ಹಾಗೂ ಸೇವನಾ ವಿಧಾನಗಳ ಬಗ್ಗೆ ಉಪನ್ಯಾಸ ನೀಡಿದರು. ಆಯುರ್ವೇದ ಆಹಾರದ ಬಗ್ಗೆ ವಿಶೇಷ ಪ್ರದರ್ಶನಕ್ಕೆ ಆರೋಗ್ಯ ಇಲಾಖಾಧಿಕಾರಿ ಡಾ.ರಾಜೇಶ್ ಚಾಲನೆ ನೀಡಿದರು. ಆಯುಷ್ ಇಲಾಖೆಯ ಕೋವಿಡ್ ಸೇನಾನಿಗಳನ್ನು ಸನ್ಮಾನಿಸಲಾಯಿತು. ಆಶಾ ಕಾರ್ಯಕರ್ತರಿಗೆ ರೋಗನಿರೋಧಕ ಔಷಧ ಮತ್ತು ಇಮ್ಯೂನಿಟಿ ಬೂಸ್ಟರ್ ಗಳನ್ನು ವಿತರಿಸಲಾಯಿತು.

ಡಾ.ಗೋಪಾಲಕೃಷ್ಣ ನಾಯಕ್, ಶಿಕ್ಷಣ ಇಲಾಖೆಯ ಆಶಾ ನಾಯಕ್, ಡಾ.ಆಶಾ ಜ್ಯೋತಿ ರೈ ಮಾಲಾಡಿ, ಡಾ.ಶ್ರೀದೇವಿ ಭಟ್ ಉಪಸ್ಥಿತರಿದ್ದರು. 

ಜಿಲ್ಲಾ ಆಯುಷ್ ಅಧಿಕಾರಿ ಡಾ.ಮುಹಮ್ಮದ್ ಇಕ್ಬಾಲ್ ಸ್ವಾಗತಿಸಿದರು. ಡಾ.ಶೋಭಾರಾಣಿ ಕಾರ್ಯಕ್ರಮ ನಿರ್ವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು