ಇತ್ತೀಚಿನ ಸುದ್ದಿ
ಇಂಧನ ದರ ಕೊನೆಗೂ ಇಳಿಕೆ: ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕ ತಲಾ 5 ಹಾಗೂ10 ರೂ. ಕಡಿತ
04/11/2021, 13:19
ಹೊಸದಿಲ್ಲಿ(reporterkarnataka.com): ಸಾರ್ವಜನಿಕ ಭಾರಿ ಪ್ರತಿಭಟನೆಯ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಕೊನೆಗೂ ಇಂಧನ ದರ ಇಳಿಕೆ ಮಾಡಿದೆ. ಪೆಟ್ರೋಲ್ ಮೇಲಿನ ಅಬಕಾರಿ ಸುಂಕ 5 ರೂ. ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕ 10 ರೂ. ಕಡಿತಗೊಳಿಸಿದೆ.
ಗುರುವಾರ ಮಧ್ಯರಾತ್ರಿಯಿಂದಲೇ ಪೆಟ್ರೋಲ್ ಹಾಗೂ ಡೀಸೆಲ್ ನ ಪರಿಷ್ಕೃತ ದರ ಜಾರಿಗೆ ಬರಲಿದೆ. ಪೆಟ್ರೋಲ್ ಮೇಲಿನ ಅಬಕಾರಿ ಸುಂಕ 5 ರೂ. ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕ 10 ರೂ. ಕಡಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ.
ಇಂಧನ ದರ ಏರಿಕೆ ವಿರುದ್ಧ ಪ್ರಮುಖ ಪ್ರತಿಪಕ್ಷಗಳು ಹಾಗೂ ವಿವಿಧ ಸಂಘಟನೆಗಳು ಭಾರೀ ಪ್ರತಿಭಟನೆ ನಡೆಸಿದ್ದವು. ಇತ್ತೀಚೆಗೆ ನಡೆದ ಉಪ ಚುನಾವಣೆಯ ಮೇಲೂ ಇದು ಪ್ರಭಾವ ಬೀರಿತ್ತು