ಇತ್ತೀಚಿನ ಸುದ್ದಿ
ರಾಜ್ಯದಲ್ಲಿ LKG ಮತ್ತು UKG ಆರಂಭಕ್ಕೆ ಗ್ರೀನ್ ಸಿಗ್ನಲ್ : ನವೆಂಬರ್ 8ರಿಂದ ಭೌತಿಕ ತರಗತಿ ಆರಂಭ
05/11/2021, 11:38

ಮಂಗಳೂರು(Reporterkarnataka.com): ರಾಜ್ಯದಲ್ಲಿ ಈಗಾಗಲೇ 1ರಿಂದ 5ನೇ ತರಗತಿ ವರೆಗೆ ಶಾಲೆ ಆರಂಭವಾಗಿದ್ದು, ಇದೀಗ ಎಲ್‌ಕೆಜಿ ಹಾಗೂ ಯುಕೆಜಿ ಆರಂಭಕ್ಕೆ ರಾಜ್ಯ ಸರಕಾರ ಬಹುತೇಕ ಗ್ರೀನ್‌ಸಿಗ್ನಲ್ ನೀಡಿದೆ. ನವೆಂಬರ್ 8 ರಿಂದ ಎಲ್‌ಕೆಜಿ, ಯುಕೆಜಿ ಭೌತಿಕ ತರಗತಿ ಆರಂಭವಾಗಲಿದೆ.
ಈ ಕುರಿತು ಸರಕಾರ ಮಾರ್ಗಸೂಚಿಯನ್ನು ಕೂಡ ರಾಜ್ಯ ಸರಕಾರ ಬಿಡುಗಡೆ ಮಾಡಿದೆ. ಈ ಹಿಂದೆ ಶಾಲೆಗಳನ್ನು ಆರಂಭಿಸಲು ಹೊರಡಿಸಿದ್ದ ಮಾರ್ಗಸೂಚಿಯನ್ನೇ ಸ್ವಲ್ಪ ಮಟ್ಟಿಗೆ ಪರಿಷ್ಕರಣೆ ಮಾಡಲಾಗಿದೆ.
ಅಕ್ಟೋಬರ್ 25ರಿಂದ 1ರಿಂದ 5ನೇ ತರಗತಿ ರಾಜ್ಯದಲ್ಲಿ ಆರಂಭವಾಗಿತ್ತು. ಅ. 25ರಿಂದ ಅ. 30ರವರೆಗೆ ಅರ್ಧದಿನ ಮಾತ್ರ ತರಗತಿಗಳು ನಡೆದಿತ್ತು. ನವೆಂಬರ್ 2ರಿಂದ ಪೂರ್ಣಾವಧಿ ತರಗತಿಗಳು ಆರಂಭವಾಗಿದೆ.
ಶಾಲೆಯಲ್ಲಿ ಶಿಕ್ಷಕರು ಹಾಗೂ ಮಕ್ಕಳು ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಶಿಕ್ಷಕರು ಎರಡು ಡೋಸ್ ಲಸಿಕೆಯನ್ನು ಕಡ್ಡಾಯವಾಗಿ ಪಡೆದುಕೊಂಡಿರಬೇಕು, 50ವರ್ಷ ಮೇಲ್ಪಟ್ಟ ಶಿಕ್ಷಕರು ಫೇಸ್ ಶೀಲ್ಡ್ ಬಳಕೆ ಮಾಡಬೇಕು. ತರಗತಿ ಬ ನಿಯಮವನ್ನು ಜಾರಿಗೆ ತರಲಾಗಿದೆ.