6:30 AM Wednesday8 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ಕಾರವಾರ ಸಮುದ್ರದಲ್ಲಿ ಮಲ್ಪೆಯ ಬೋಟ್ ಗೆ ಬೆಂಕಿ ಅವಘಡ: ಎಲ್ಲ 7ಮಂದಿ ಮೀನುಗಾರರ ರಕ್ಷಣೆ

06/11/2021, 16:13

ಕಾರವಾರ(reporterkarnataka.com): ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಬೋಟೊಂದು ಆಕಸ್ಮಿಕ ಬೆಂಕಿ ಅವಘಡಕ್ಕೆ ತುತ್ತಾಗಿದ್ದು, ಅದರಲ್ಲಿದ್ದ ಎಲ್ಲ 7 ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ.

ಬೆಂಕಿ ಅನಾಹುತದಿಂದ ಬೋಟ್‌ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ದುರ್ಘಟನೆ ನಡೆಯುತ್ತಿದ್ದಂತೆಯೇ ರಕ್ಷಣೆಗೆ ಧಾವಿಸಿದ ಭಾರತೀಯ ಕರಾವಳಿ ಕಾವಲು ಪಡೆಯ ಸಿಬ್ಬಂದಿಗಳು ಬೋಟ್‌ನಲ್ಲಿದ್ದ ಏಳು ಮಂದಿ ಮೀನುಗಾರರನ್ನು ರಕ್ಷಿಸಿದ್ದಾರೆ.

ಉಡುಪಿಯ ಮಲ್ಪೆಯ ವರದಾ ವಿನಾಯಕ ಬೋಟ್ ಮೀನುಗಾರಿಕೆಗೆ ತೆರಳಿತ್ತು. ಕಾರವಾರ

ಲೈಟ್‌ ಹೌಸ್ ನಡುಗುಡ್ಡೆಯಿಂದ 10 ನಾಟಿಕಲ್‌ ಮೈಲು ದೂರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆಯಲ್ಲಿ ಇಂಜಿನ್‌ನಲ್ಲಿ ತಾಂತ್ರಿಕ ದೋಷ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಬೆಂಕಿ ಹೊತ್ತಿಕೊಂಡಿದೆ. ಕೂಡಲೇ ಸುದ್ದಿ ತಿಳಿದ ಕೋಸ್ಟ್‌ ಗಾರ್ಡ್‌ ಸಿಬ್ಬಂದಿ, ರಕ್ಷಣೆಗೆ ಧಾವಿಸಿದ್ದಾರೆ.

ಕೂಡಲೇ ಸ್ಥಳದಲ್ಲಿದ್ದ ಇತರ ಬೋಟುಗಳ ಸಹಾಯದೊಂದಿಗೆ ಬೋಟಿನಲ್ಲಿದ್ದ ಏಳು ಮಂದಿಯನ್ನು ರಕ್ಷಣೆ ಮಾಡಿದ್ದಾರೆ. ಬೋಟ್‌ನ ಬೆಂಕಿಯನ್ನು ಸಂಪೂರ್ಣ ನಂದಿಸಲಾಗಿದೆ. ಕಾರವಾರದ ಬೈತಖೋಲ್‌ ಬಂದರಿಗೆ ಬೋಟ್‌ನ್ನು ತರಲಾಗಿದೆ. ಮೇಲ್ನೋಟಕ್ಕೆ ಇಂಜಿನ್‌ನಲ್ಲಿನ ತಾಂತ್ರಿಕ ದೋಷವೇ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಈ ಕುರಿತು ಕೋಸ್ಟ್‌ ಗಾರ್ಡ್‌ ಅಧಿಕಾರಿಗಳು ತನಿಖೆಯನ್ನು ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು