4:03 PM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟ್ : ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಮೃತಪಟ್ಟ ಯುವಕನ ಗುರುತು ಪತ್ತೆ

07/11/2021, 12:49

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಾರ್ಮಾಡಿ ಘಾಟ್ ನ ಸೋಮನಕಾಡು ಸಮೀಪ ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಮೃತಪಟ್ಟ ಯುವಕನ ಗುರುತು ಪತ್ತೆ ಹಚ್ಚಲಾಗಿದೆ. ಸಾವನ್ನಪ್ಪಿದ ದುರ್ದೈವಿಯನ್ನು ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಚಿಕ್ಕಮಾಲೂರಿನ ಜೀವನ್ (21) ಎಂದು ಗುರುತಿಸಲಾಗಿದೆ.

ಶನಿವಾರ 11 ಜನ ಯುವಕರನ ತಂಡ 6 ಬೈಕಿನಲ್ಲಿ ಧರ್ಮಸ್ಥಳ ಕಡೆಗೆ ಹೊರಟಿದ್ದು, ಭಾನುವಾರ ಬೆಳಿಗ್ಗಿನ ಜಾವ ಚಾರ್ಮಾಡಿ ಘಾಟ್ ನ ಸೋಮನಕಾಡು ಸಮೀಪ ರಸ್ತೆ ಬದಿಯಲ್ಲಿದ್ದ ಮರವೊಂದು ಬಿದ್ದು ಜೀವನ್ ಮೃತಪಟ್ಟಿದ್ದಾರೆ‌. ರವಿ ಎಂಬುವವರು ಬೈಕ್ ಚಲಾಯಿಸುತ್ತಿದ್ದು ಜೀವನ್ ಹಿಂಬದಿಯಲ್ಲಿ ಕುಳಿತ್ತಿದ್ದರು. ರವಿ ಅವರು ಹೆಲ್ಮೆಟ್ ಧರಿಸಿದ್ದು ಹಿಂಬದಿಯಲ್ಲಿ ಕುಳಿತಿದ್ದ ಜೀವನ್ ಅವರ ಮೇಲೆ ಏಕಾಏಕಿ ಮರ ಬಿದ್ದ ಪರಿಣಾಮ ತಲೆಗೆ ಗಂಭೀರವಾಗಿ ಗಾಯವಾಗಿದ್ದು ಕೂಡಲೇ ಮಂಗಳೂರು ಕಡೆಯಿಂದ ಚಿಕ್ಕಮಗಳೂರು ಕಡೆಗೆ ಸಾಗುತ್ತಿದ್ದ ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮದ್ಯೆ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಬಣಕಲ್ ಪೋಲಿಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ‌.

ಇತ್ತೀಚಿನ ಸುದ್ದಿ

ಜಾಹೀರಾತು