4:55 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

ಹರೇಕಳದಿಂದ ಹೊಸದಿಲ್ಲಿಗೆ: ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಲು ದೆಹಲಿ ವಿಮಾನವೇರಿದ ಅಕ್ಷರ ಸಂತ ಹರೇಕಳ ಹಾಜಬ್ಬ

07/11/2021, 19:20

ಮಂಗಳೂರು(reporterkarnataka.com): ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಲು ಅಕ್ಷರ ಸಂತ ಹರೇಕಳ ಹಾಜಬ್ಬ ಅವರು ಭಾನುವಾರ ದೆಹಲಿ ಪ್ರಯಾಣ ನಡೆಸಿದರು. ಮಂಗಳೂರು ವಿಮಾನ ನಿಲ್ದಾಣದಿಂದ ಅವರು ಸ್ಪೈಸ್ ಜೆಟ್ ವಿಮಾನದಲ್ಲಿ ದೇಶದ ರಾಜಧಾನಿಗೆ ತೆರಳಿದರು. 

ಎಂದಿನಂತೆ ಮೊಣ ಕಾಲಿನಿಂದ ಮೇಲೆ ಬಿಳಿ ಪಂಚೆ ಹಾಗೂ ಬಿಳಿ ಶರ್ಟ್ ಧರಿಸಿ ಕೈಯಲ್ಲೊಂದು ಕಪ್ಪು ಬ್ಯಾಗ್ ಹಿಡಿದುಕೊಂಡು ಅವರು ವಿಮಾನ ಏರಿದರು.

ಕಿತ್ತಲೆ ಮಾರಿ ಜೀವನ ಸಾಗಿಸುತ್ತಿದ್ದ ಹರೇಕಳ ಹಾಜಬ್ಬ ಅವರು ಶಿಕ್ಷಣ ಕ್ಷೇತ್ರದಲ್ಲಿ ಇಡೀ ದೇಶದಲ್ಲೇ ದೊಡ್ಡ ಹೆಸರು. ತಾನು ಅಕ್ಷರ ಕಲಿಯದಿದ್ದರೂ ತನ್ನೂರಿನ ಮಕ್ಕಳು ಅಕ್ಷರದಿಂದ ವಂಚಿತರಾಗಬಾರದೆಂದು ಭಗೀರಥ ಪ್ರಯತ್ನಪಟ್ಟು ತನ್ನೂರಿಗೆ ಸರಕಾರಿ ಶಾಲೆಯನ್ನು ತರಿಸಿದ್ದರು. ಅವರ ಪ್ರಯತ್ನದ ಫಲವಾಗಿ ಪ್ರಾಥಮಿಕ ಶಾಲೆ ಪ್ರೌಢಶಾಲೆಯಾಗಿ ರೂಪುಗೊಂಡಿದೆ.

ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ಪ್ರಶಸ್ತಿ ನಾಳೆ ಅವರಿಗೆ ರಾಷ್ಟಪತಿ ಪ್ರದಾನ ಮಾಡಿ ಗೌರವಿಸಲಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಿಂದ ದೆಹಲಿಯ ವಿಮಾನ ಏರಿದ ಅಕ್ಷರ ಸಂತನಿಗೆ ರಿಪೋರ್ಟರ್ ಕರ್ನಾಟಕದ ಶುಭ ಹಾರೈಕೆ.

ಇತ್ತೀಚಿನ ಸುದ್ದಿ

ಜಾಹೀರಾತು