5:49 AM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಮಹಾಮಳೆಗೆ ಚೆನ್ನೈ ತತ್ತರ: 6 ವರ್ಷದ ಬಳಿಕ ಭಾರಿ ವರ್ಷಧಾರೆ; ಕೆರೆಗಳಂತಾದ ರಸ್ತೆಗಳು; ಶಾಲಾ-ಕಾಲೇಜು ಬಂದ್

08/11/2021, 19:00

ಚೆನ್ನೈ(reporterkarnataka.com): ಬಂಗಾಳ ಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ ಉಂಟಾದ ಪರಿಣಾಮ ತಮಿಳುನಾಡಿನ ರಾಜಧಾನಿ ಚೆನ್ನೈ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತವಾಗಿವೆ. ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿದ ಜನರ ರಕ್ಷಣೆಗಾಗಿ ಎನ್‌ಡಿಆರ್‌ಎಫ್ ತಂಡವನ್ನು ನಿಯೋಜಿಸಲಾಗಿದೆ. ಶಾಲಾ – ಕಾಲೇಜುಗಳಿಗೆ 3 ದಿನ ರಜೆ ಘೋಷಿಸಲಾಗಿದೆ.

ದೀಪಾವಳಿ ಹಬ್ಬಕ್ಕೆ ಹೊರಗಡೆ ಹೋದವರು ಚೆನ್ನೈಗೆ ವಾಪಸ್ ಆಗುವುದನ್ನು ಒಂದು ದಿನ ಮುಂದೂಡುವಂತೆ ಸರಕಾರ ಮನವಿ ಮಾಡಿದೆ. ಭಾರಿ ಮಳೆಗೆ ಚೆನ್ನೈ ಮಹಾನಗರ ತತ್ತರಿಸಿ ಹೋಗಿದೆ. 

ಚೆನ್ನೈನಲ್ಲಿ ಕಳೆದ 14 ತಾಸುಗಳಿಂದ ಸುರಿದ ಭಾರಿ ಮಳೆಗೆ ಜನಜೀವನ ಬಹುತೇಕ ಅಸ್ತವ್ಯಸ್ತಗೊಂಡಿದೆ. ಚೆನ್ನೈ ಮಹಾನಗರದ ರಸ್ತೆಗಳು ಕೆರೆಗಳಂತಾಗಿವೆ. ವಾಹನ ಸವಾರರು, ನಿವಾಸಿಗಳು ಪರದಾಟ ನಡೆಸಿದ್ದಾರೆ. ಡ್ಯಾಂಗಳು ಭರ್ತಿಯಾಗಿದ್ದು, ಜಲಾಶಯಗಳಿಂದ ನೀರನ್ನು ಹೊರಬಿಡಲಾಗಿದೆ. 6 ವರ್ಷಗಳ ಬಳಿಕ ತಮಿಳುನಾಡಿನಲ್ಲಿ ಈ ಪ್ರಮಾಣದಲ್ಲಿ ಮಳೆಯಾಗಿದೆ.

ಹಲವೆಡೆ ನಗರಗಳು ಜಲಾವೃತಗೊಂಡಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಅಂದಿನ ಮಳೆಗಿಂತ ಈಗ ಅರ್ಧದಷ್ಟು ಮಳೆ ಸುರಿದಿದ್ದು, ಆದರೂ ನಗರ ಜಲಾವೃತವಾಗಿದ್ದು, ಜನತೆ ಪರದಾಡಿದ್ದಾರೆ. ನಗರಕ್ಕೆ ಸಂಬಂಧಿಸಿದ 3 ಜಲಾಶಯಗಳು ಭರ್ತಿ ಆಗಿದ್ದು, ನೀರು ಹೊರಬಿಡಲು ನಿರ್ಧರಿಸಲಾಗಿದೆ. ಇದೇ ವೇಳೆ ಚೆನ್ನೈ ಸನಿಹದ ಕಾಂಚೀಪುರಂ ಹಾಗೂ ತಿರುವಳ್ಳೂರು ಜಿಲ್ಲೆಗಳಲ್ಲಿ ಕೂಡ ಭಾರಿ ವರ್ಷಧಾರೆ ಸಂಭವಿಸಿದೆ.

ಭಾರತೀಯ ಹವಾಮಾನ ಇಲಾಖೆ ಸೋಮವಾರ ಸಹ ಮಳೆ ಮುಂದುವರೆಯಲಿದೆ ಎಂದು ಮುನ್ಸೂಚನೆ ನೀಡಿದೆ. ಚೆನ್ನೈ, ತಿರುವಳ್ಳೂರು, ಕಾಂಚಿಪುರಂ, ಚೆಂಗಲ್ಪಟ್ಟು ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಮಹಾಮಳೆಗೆ ಚೆನ್ನೈ ಮಹಾನಗರ ಸ್ತಬ್ಧವಾಗಿದ್ದು, ಏರ್ಪೋರ್ಟ್ ರನ್ ವೇ ಬಂದ್ ಮಾಡಿ, ಲೋಕಲ್ ಟ್ರೈನ್ ಗಳನ್ನು ನಿಲ್ಲಿಸಲಾಗಿದೆ.

“ಚಂಡಮಾರುತದ ಪರಿಚಲನೆಯು ಆಗ್ನೇಯ ಬಂಗಾಳ ಕೊಲ್ಲಿ ಮತ್ತು ಪಕ್ಕದ ಸಮಭಾಜಕ ಹಿಂದೂ ಮಹಾಸಾಗರದ ಮೇಲೆ ಸರಾಸರಿ ಸಮುದ್ರ ಮಟ್ಟದಿಂದ 4.5 ಕಿಮೀ ವರೆಗೆ ವಿಸ್ತರಿಸಿದೆ. ಇದರ ಪ್ರಭಾವದ ಅಡಿಯಲ್ಲಿ, ಆಗ್ನೇಯ ಬಂಗಾಳ ಕೊಲ್ಲಿ ಮತ್ತು ನೆರೆಹೊರೆಯಲ್ಲಿ 09 ನವೆಂಬರ್ 2021 ರ ಸುಮಾರಿಗೆ ಕಡಿಮೆ ಒತ್ತಡದ ಪ್ರದೇಶವು ರೂಪುಗೊಳ್ಳುವ ಸಾಧ್ಯತೆಯಿದೆ ಎಂದು ಐಎಮ್‌ಡಿ ಹೇಳಿದೆ. ಭಾರೀ ಮಳೆ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಎಂ. ಕೆ. ಸ್ಟಾಲಿನ್ ಪ್ರವಾಹ ಪೀಡಿತ ಪ್ರದೇಶಗಳ ಬಗ್ಗೆ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಜಲಾವೃತವಾಗಿರುವ 14 ಪ್ರದೇಶಗಳಿಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜನರ ಸ್ಥಳಾಂತರಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು