8:33 PM Friday3 - May 2024
ಬ್ರೇಕಿಂಗ್ ನ್ಯೂಸ್
ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:…

ಇತ್ತೀಚಿನ ಸುದ್ದಿ

ಸ್ವತಂತ್ರ ಬದುಕು ಕಟ್ಟಿಕೊಂಡ ಮಂದಿ ಊಳಿಗಮಾನ್ಯ ಪದ್ಧತಿ ಪ್ರತಿಪಾದಕರ ರಾಜಕೀಯ ದಾಳವಾಗುತ್ತಿದ್ದಾರೆ: ಬಿಪಿನ್ ಚಂದ್ರ ಪಾಲ್

08/11/2021, 19:11

ಕಾರ್ಕಳ(reporterkarnataka.com): ಕಳೆದ 70 ವರ್ಷಗಳ ಕಾಂಗ್ರೆಸ್ ಆಡಳಿತದಲ್ಲಿ ಊಳಿಗಮಾನ್ಯ ಪದ್ಧತಿಯ ಕರಾಳ ಮುಷ್ಠಿಯಿಂದ ಹೊರಬಂದು ಸ್ವತಂತ್ರ ಬದುಕು ಕಟ್ಟಿಕೊಂಡ ಮಂದಿ ತಮಗರಿವಿಲ್ಲದಂತೆ ಇಂದು ಅದೇ ಊಳಿಗಮಾನ್ಯ ಪದ್ಧತಿಯ ಪ್ರತಿಪಾದಕರ ರಾಜಕೀಯ ದಾಳದ ವಸ್ತುವಾಗಿ ಪರಿವರ್ತನೆಯಾಗುತ್ತಿದ್ದಾರೆ. ಇದರ ವಿರುದ್ಧ ಅಹಿಂಸಾತ್ಮಕ ಹೋರಾಟದ ಮೌನ ಕ್ರಾಂತಿ ಗ್ರಾಮೀಣ ಮಟ್ಟದಿಂದಲೇ ಆರಂಭವಾಗ ಬೇಕಾದುದು ಇಂದಿನ ಆಗತ್ಯವಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನಚಂದ್ರಪಾಲ್ ನಕ್ರೆ ಹೇಳಿದರು.

ಅವರು ನೀರೆ ಕಣಂಜಾರು ಗ್ರಾಮೀಣ ಕೃಷಿ ಘಟಕ ಅಧ್ಯಕ್ಷ ಅಂತೋಣಿ ಡಿ’ಸೋಜರವರ ಉಸ್ತುವಾರಿಯಲ್ಲಿ ನಡೆದ ಸ್ಥಳೀಯ ಕಾಂಗ್ರೆಸ್ ಗ್ರಾಮ ಸಮಿತಿ ಕಾರ್ಯಕರ್ತರ ವಿಶೇಷ ಸಮಾವೇಶದಲ್ಲಿ ಮಾತಾಡಿದರು.

ಡಿಸಿಸಿ ಉಪಾಧ್ಯಕ್ಷ ನೀರೆ ಕೃಷ್ಣ ಶೆಟ್ಟಿ ಮಾತನಾಡಿ,ಆಡಳಿತಾರೂಢ ಬಿಜೆಪಿಯ ವ್ಯರ್ಥ ಆಮಿಷಗಳಿಗೆ ಬಲಿಯಾಗದೆ ಈ ಕ್ಷೇತ್ರದಲ್ಲಿ ಮುಂದಿನ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಜನಪ್ರತಿನಿಧಿಗಳ ಮರು ಹುಟ್ಟಿನ ಹಬ್ಬವನ್ನು ಆಚರಿಸುವಂತಾಗಬೇಕು ಎಂದರು.

ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ  ಸದಾಶಿವ ದೇವಾಡಿಗ ಅಧ್ಯಕ್ಷತೆ ವಹಿಸಿ ಮಾತಾಡಿ ಪಕ್ಷ ಸಂಘಟನೆಗೆ ಕರೆ ನೀಡಿದರು. ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅನಿತಾ ಡಿಸೋಜ,  ವಾರ್ಡ್ ಸಮಿತಿ ಅಧ್ಯಕ್ಷ ಅಂಬ್ರೋಜ್ ಲೋಬೋ ಸಂದರ್ಭೋಚಿತವಾಗಿ ಮಾತಾಡಿದರು

ಕೆಪಿಸಿಸಿ ಕೃಷಿ ಸಮಿತಿಯ ರಾಜ್ಯ ಕಾರ್ಯದರ್ಶಿ ಉದಯ ವಿ. ಶೆಟ್ಟಿ, ಹಿರಿಯ ಕಾಂಗ್ರೆಸ್ ಮುಂದಾಳು ಎರ್ಲಪಾಡಿ ಪಂಚಾಯಿತಿ ಮಾಜಿ ಅಧ್ಯಕ್ಷ ಭೋಜ ಶೆಟ್ಟಿ, ಧರ್ಮರಾಜ ಕುಮಾರ್, ಎಪಿಎಂಸಿ ಸದಸ್ಯ ಜಯರಾಮ ಆಚಾರ್ಯ, ಸ್ಥಳೀಯ  ಗ್ರಾಮ ಸಮಿತಿ ಅಧ್ಯಕ್ಷ ಕಿಶೋರ್ ಮಡಿವಾಳ, ನೀರೆ ಗ್ರಾಮ ಪಂಚಾಯತ್ ಸದಸ್ಯೆ ಯಶೋಧ ಆಚಾರ್ಯ,ಬ್ಲಾಕ್ ಕೃಷಿ ಸಮಿತಿ ಉಪಾಧ್ಯಕ್ಷ ಆಂತೋನಿ ಮಚಾದೋ, ಕಾರ್ಕಳ ಕಾಂಗ್ರೆಸ್ ಐಟಿ ಸೆಲ್ ಅಧ್ಯಕ್ಷ ಸತೀಶ್ ದೇವಾಡಿಗ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

ಯುವ ನಾಯಕ ಪ್ರಕಾಶ್ ಮಾರ್ಟಿಸ್ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಬ್ಲಾಕ್ ಕಿಸಾನ್ ಘಟಕದ ಕಾರ್ಯದರ್ಶಿ  ಸುಜಾತ ಶೆಟ್ಟಿ ವಂದಿಸಿದರು.

              

  ‌‌ ‌‌‌‌‌‌‌‌‌‌‌    

  ‌‌

ಇತ್ತೀಚಿನ ಸುದ್ದಿ

ಜಾಹೀರಾತು