8:10 PM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ವಿಜಯಪುರ: ಅಂತರ್‌ ಜಿಲ್ಲಾ ಬೈಕ್ ಕಳ್ಳರ ಬಂಧನ;  21.60 ಲಕ್ಷ ಮೌಲ್ಯದ 36 ದ್ವಿಚಕ್ರ ವಾಹನ ವಶ

09/11/2021, 15:08

ವಿಜಯಪುರ(reporterkarnataka.com): ಅವಳಿ ಜಿಲ್ಲೆಗಳಾದ ವಿಜಯಪುರ-ಬಾಗಲಕೋಟೆಗಳಲ್ಲಿ ಬೈಕ್ ಕಳ್ಳತನಕ್ಕೆ ಸಂಬಂಧಿಸಿದಂತೆ 3 ಮಂದಿ ಆರೋಪಿಗಳನ್ನು

ಬಂಧಿಸಲಾಗಿದ್ದು, 21.60 ಲಕ್ಷ ಮೌಲ್ಯದ 36 ಬೈಕ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.
ಆನಂದಕುಮಾರ ಅವರು ನಗರದ ಗಾಂಧಿ ಚೌಕ್ ಪೊಲೀಸ್ ಠಾಣೆಯಲ್ಲಿ
ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.

ಬೈಕ್ ಕಳ್ಳತನದ ಆರೋಪಿಗಳಾದ ತೌಸೀಫ್ ಮಹಿಬೂಬ್ಕ ಲಾದಗಿ, ಸಮೀರ್ ಉಸ್ಮಾನಸಾಬ ಬಳಗಾನೂರ,ಸುನೀಲ ಮಲ್ಲನಗೌಡ ಬಿರಾದಾರ
ಬಂಧಿತರು ಎಂದರು. ಈ ಆರೋಪಿಗಳುವಿಜಯಪುರ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಅಲ್ಲದೇ ನೆರೆಯ ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲೂ ಬೈಕ್ ಕಳ್ಳತನ ಮಾಡಿದ್ದಾರೆ.

ಇತ್ತಿಚೆಗೆ ವಿಜಯಪುರದಲ್ಲಿ ಬೈಕ್ ಕಳ್ಳತನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವಿಶೇಷ ತಂಡ ರಚಿಸಲಾಗಿತ್ತು ಎಂದರು.

ಈ ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾದ ತಂಡಕ್ಕೆ ನಗದು
ಬಹುಮಾನ ಘೋಷಿಸಿದರು.

ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ ಅರಸಿದ್ದಿ, ಡಿವೈಎಸ್ಪಿ ಲಕ್ಷ್ಮೀನಾರಾಯಣ, ಸಿಪಿಐ ರವೀಂದ್ರ ನಾಯ್ಕೋಡಿ,ಪಿಎಸ್‌ಐ ಆರೀಫ್ ಮುಶಾಪುರೆ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು