12:05 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

ಕುಂದಾಪುರದ ಸ್ಟುಡಿಯೋದಿಂದ ಕಳ್ಳತನ: ಸಿಸಿ ಟಿವಿಯಲ್ಲಿ ಸೆರೆಯಾದ ಚೋರ

11/11/2021, 10:25

ಕುಂದಾಪುರ(reporterkarnataka.com): ಹೊಸ ಬಸ್ ನಿಲ್ದಾಣ ಸಮೀಪ ಮುಖ್ಯರಸ್ತೆಯಲ್ಲಿರುವ ಸೈಂಟ್ ಅಂತೋನಿ ಸ್ಟುಡಿಯೋದಲ್ಲಿ ನಿನ್ನೆ ತಡರಾತ್ರಿ ಕಳ್ಳತನ ನಡೆದಿದ್ದು, ಚೋರ ಸ್ಟುಡಿಯೋದ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದಾನೆ.

ರಾತ್ರಿ ಸುಮಾರು 12.30ರ  ಆಸುಪಾಸು ಸ್ಟುಡಿಯೋದ ಹಿಂಬದಿ ಮೇಲ್ಛಾವಣಿಯ ಹಂಚುಗಳನ್ನು ಸರಿಸಿ ಒಳ ಪ್ರವೇಶಿಸಿದ ಕಳ್ಳ ಡ್ರಾವರ್ ನಲ್ಲಿದ್ದ ಸುಮಾರು 2 ಸಾವಿರದಷ್ಟು ನಗದು ಹಾಗೂ ಒಂದೆರಡು ಪೆನ್ ಡ್ರೈವ್ ಗಳನ್ನು ಎಗರಿಸಿದ್ದಾನೆ. ಕೃತ್ಯಕ್ಕೆ ಬಳಸಿದ ಕಬ್ಬಿಣದ ರಾಡೊಂದನ್ನು ಮಾಡಿನ ಮೇಲೆ  ಬಿಟ್ಟು ಹೋಗಿದ್ದಾನೆ. ಸ್ಟುಡಿಯೋದಲ್ಲಿ ಆಳವಡಿಸಿರುವ ಸಿಸಿ ಫೂಟೇಜ್ ನಲ್ಲಿ ಕಳ್ಳನ ಸಂಪೂರ್ಣ ಚಲನವಲಗಳು ದಾಖಲಾಗಿದ್ದು ಮೇಲ್ನೋಟಕ್ಕೆ ಪಕ್ಕದಲ್ಲಿರುವ ವೈನ್ ಶಾಪ್ ಗೆ ಬರುವ ಉತ್ತರ ಕರ್ನಾಟಕ ಮೂಲದ ವ್ಯಕ್ತಿಯೆಂದು ಸಂಶಯಿಸಲಾಗಿದೆ. 

ಬೆಳಿಗ್ಗೆಯೇ ನಂತರವೇ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದ್ದು ಕುಂದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು