12:20 PM Thursday19 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ಹಾಲಿನ ವಾಹನ- ಸ್ಕೂಟರ್ ಮುಖಾಮುಖಿ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು; ದೀಪಾವಳಿಗೆ ಖರೀದಿಸಿದ ಹೊಸ ಸ್ಕೂಟರ್

11/11/2021, 12:13

ಹಿರಿಯಡಕ(reporterkarnataka.com): ಹಾಲಿನ ವಾಹನ ಹಾಗೂ ಸ್ಕೂಟರ್ ಮುಖಾಮುಖಿಯಾಗಿ ಡಿಕ್ಕಿಯಾದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಹಿರಿಯಡಕ ಗುಡ್ಡೆಯಂಗಡಿಯ ಅಂಗನವಾಡಿ ಬಳಿ ಇಂದು ಬೆಳಿಗ್ಗೆ ನಡೆದಿದೆ.


ಮೃತ ಸವಾರನನ್ನು ಬೈಲೂರು ಚಿಕ್ಕಲ್ ಬೆಟ್ಟು ನಿವಾಸಿ ವಿಘ್ನೇಶ್ ಪೂಜಾರಿ ಎಂದು ಗುರುತಿಸಲಾಗಿದೆ. ವಿಘ್ನೇಶ್ ಮಣಿಪಾಲದ ಪ್ರೆಸ್ ಒಂದರಲ್ಲಿ ಕೆಲಸ ಮಾಡುತ್ತಿದ್ದು, ರಾತ್ರಿ ಪಾಳಿಯ ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದರು. ಈ ವೇಳೆ ಬಜಗೋಳಿಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಹಾಲಿನ ವಾಹನಕ್ಕೆ ಸ್ಕೂಟರ್ ಮುಖಾಮುಖಿ ಡಿಕ್ಕಿಯಾಗಿದೆ ಎನ್ನಲಾಗಿದೆ. ಇದರಿಂದ ಗಂಭೀರ ಗಾಯಗೊಂಡ ವಿಘ್ನೇಶ್ ಸ್ಥಳದಲ್ಲೇ ಉಸಿರು ಚೆಲ್ಲಿದ್ದಾರೆ ಎಂದು ತಿಳಿದು ಬಂದಿದೆ. 

ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಸ್ಕೂಟರ್ ಸಂಪೂರ್ಣ ನಜ್ಜುಗುಜ್ಜಾಗಿದೆ. ವಿಘ್ನೇಶ್ ದೀಪಾವಳಿಗೆ ನೂತನವಾಗಿ ದ್ವಿಚಕ್ರವಾಹನ ಖರೀದಿಸಿದ್ದನು ಎನ್ನಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ. ಹಿರಿಯಡ್ಕ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು