2:29 PM Thursday16 - January 2025
ಬ್ರೇಕಿಂಗ್ ನ್ಯೂಸ್
ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ 6 ಬಾರಿ ಚಾಕು ಇರಿತ: ಮುಂಜಾನೆ… ಗರೋಡಿ ಜಾತ್ರೆಗೂ ಊರವರಿಗೆ ನೀರಿಲ್ಲ!: 5 ದಿನಗಳಿಂದ ನೋ ವಾಟರ್!!; ಮೇಯರ್ ಅವರೇ… ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಸಚಿವ ಜಮೀರ್‌ ಭಾವಚಿತ್ರಕ್ಕೆ ಸಗಣಿ ಬಳಿದು ಬಿಜೆಪಿ… ಕೆಚ್ಚಲು ಕೊಯ್ದ ಪ್ರಕರಣ: ದನದ ಮಾಲೀಕನ ತಾಯಿಗೆ 3 ಹಸು ಕೊಡಿಸಿದ ಸಚಿವ… 5 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ: ಆರೋಪಿಯ ತಕ್ಷಣ ಬಂಧಿಸಲು ಆಗ್ರಹಿಸಿ ಎಐಎಂಎಸ್ಎಸ್… ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ… ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ ಶಬರಿಮಲೆ: ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ಭಕ್ತರಿಗೆ ಮಕರ ಜ್ಯೋತಿ ದರ್ಶನ: ಪುನೀತರಾದ… ನಂಜನಗೂಡು: ಶಿವಶರಣ ಶ್ರೀ ಸಿದ್ದರಾಮೇಶ್ವರ ರ ಜಯಂತಿ ಆಚರಣೆ ಜಿಹಾದಿ ಮನಸ್ಥಿತಿಯನ್ನು ಪೋಷಿಸಿ ಬೆಳೆಸುತ್ತಿರುವ ಸಿದ್ದರಾಮಯ್ಯ ಸರಕಾರ: ಸಂಸದ ಕ್ಯಾ ಬ್ರಿಜೇಶ್ ಚೌಟ…

ಇತ್ತೀಚಿನ ಸುದ್ದಿ

ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಡುಪಿ ಜಿಲ್ಲಾಡಳಿತಕ್ಕೆ 3 ಆಕ್ಸಿಜನ್ ಕಾನ್ಸನ್ಟ್ರೇಟರ್ ಹಸ್ತಾಂತರ

29/05/2021, 16:01

ಮಂಗಳೂರು(reporterkarnataka news):

ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ.) ವತಿಯಿಂದ 1,84,800 ರೂ. ವೆಚ್ಚದ 3 ಆಕ್ಸಿಜನ್ ಕಾನ್ಸನ್ಟ್ರೇಟರ್ ಗಳನ್ನು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರ ಮೂಲಕ ಜಿಲ್ಲಾಡಳಿತಕ್ಕೆ ಶನಿವಾರ ಹಸ್ತಾಂತರಿಸಲಾಯಿತು.

ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ಸಮಾಜಮುಖಿ ಕಾರ್ಯಗಳ ಬಗ್ಗೆ ಜಿಲ್ಲಾಧಿಕಾರಿ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಟ್ರಸ್ಟ್ ಅಧ್ಯಕ್ಷ ಅರ್ಜುನ್ ಭಂಡಾರ್ಕರ್, ಛಾಯಾಗ್ರಾಹಕ ಮಂಜು ನಿರೇಶ್ವಾಲ್ಯ, ರಮೇಶ್ ಶೆಣೈ ಉಪಸ್ಥಿತರಿದ್ದರು.

ಬಂಟವಾಳ ಪುರಸಭೆ ವ್ಯಾಪ್ತಿಯಲ್ಲಿ ಕಾರ್ಯಾಚರಿಸುತ್ತಿರುವ ಎಲ್ಲಾ  ಠಾಣೆಯ ಪೊಲೀಸ್ ಸಿಬ್ಬಂದಿಗಳಿಗೆ ಲಾಕಡೌನ್ ಪರಿಣಾಮ ಹೊಟೇಲುಗಳು ಕಾರ್ಯಾಚರಿಸದೇ ಇರುವುದರಿಂದ ಸಂಜೆ ಹೊತ್ತು ಸುಮಾರು 100  ಮಂದಿಗೆ ದಿನನಿತ್ಯ ಆಹಾರದ ವ್ಯವಸ್ಥೆ ಆಗಬೇಕಾಗಿತ್ತು. ವಿಶ್ರಾಂತಿಯೇ ಇಲ್ಲದೆ ದುಡಿಯುತ್ತಿರುವ ಪೊಲೀಸರಿಗೆ ಒಂದು ಹೊತ್ತಿನ ಆಹಾರ  ತನ್ನ ಮನೆಯಲ್ಲೇ ಪರಿಶುದ್ಧವಾಗಿ ತಯಾರಿಸಿ ನೀಡಲಾಗಿದೆ . ಮಹಾಮಾರಿ ಮಾನವನನ್ನೇ ಕೊಲ್ಲುತ್ತಿದ್ದರೆ,  ಸಮಾಜದ ರಕ್ಷಣೆಗೆ ನಿಂತ ಪೊಲೀಸ್ ಸಿಬ್ಬಂದಿಗಳಿಗೆ ಒಂದು ಹೊತ್ತಿನ ಆಹಾರ ತಯಾರಿಸಿ ತಮ್ಮ ಪಾಲಿನ ಕರ್ತವ್ಯ ಪಾಲಿಸುತ್ತಿದ್ದಾರೆ. ಬಂಟ್ವಾಳ ಪರಿಸರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ. 29 ಮಂದಿ ಆಶಾ ಕಾರ್ಯಕರ್ತೆಯರಿಗೆ ದಿನನಿತ್ಯ ಬಳಕೆಯ ಆಹಾರ ಸಾಮಗ್ರಿಗಳ ಕಿಟ್ ವಿತರಿಸಲಾಯಿತು . 

ಈ ಸಂದರ್ಭದಲ್ಲಿ  ಮಾತನಾಡಿದ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಅರ್ಜುನ್ ಭಂಡಾರ್ಕರ್, ಈಗಾಗಲೇ ಟ್ರಸ್ಟ್ ವತಿಯಿಂದ 6 ಆಕ್ಸಿಜನ್ ಕಾನ್ಸನ್ಟ್ರೇಟರ್ ಗಳನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರ ಮೂಲಕ ಜಿಲ್ಲಾಡಳಿತಕ್ಕೆ ಹಸ್ತಾಂತರಿಸಲಾಗಿದೆ. ಮುಂದಿನ ದಿನಗಳಲ್ಲಿ ಬಂಟ್ವಾಳ ತಾಲೂಕಿಗೂ ಆಕ್ಸಿಜನ್ ಕಾನ್ಸನ್ಟ್ರೇಟರ್ ನೀಡುವ ಯೋಜನೆ ಹಾಕಿಕೊಂಡಿದ್ದೇವೆ. ಕಳೆದ ಹತ್ತು ತಿಂಗಳಲ್ಲಿ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ಮೂಲಕ ಸುಮಾರು 1.3 ಕೋಟಿ ರೂಪಾಯಿ ವೆಚ್ಚದಲ್ಲಿ ಅನಾರೋಗ್ಯ ಪೀಡಿತರ ಚಿಕಿತ್ಸೆ, ಉಚಿತವಾಗಿ ಮನೆಗಳನ್ನು ನಿರ್ಮಿಸಲು ಸೇರಿದಂತೆ ವಿವಿಧ ಸಾಮಾಜಿಕ ಕಾರ್ಯಗಳಿಗೆ ನೀಡಲಾಗಿದೆ ಎಂದು ಅರ್ಜುನ್ ಭಂಡಾರ್ಕರ್ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು