4:10 PM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಐಎಸ್ ಸಿ ಮಂಗಳೂರು ವತಿಯಿಂದ ಪ್ರಸಾದ್ ಆರ್ಟ್ ಗ್ಯಾಲರಿಯಲ್ಲಿ ಮಕ್ಕಳ ದಿನಾಚರಣೆ: ಚಿಣ್ಣರಿಗೆ ವಿವಿಧ ಸ್ಪರ್ಧೆ

14/11/2021, 09:03

ಮಂಗಳೂರು(reporterkarnataka.com):
ಇಂಡಿಯನ್ ಸೀನಿಯರ್ ಚೇಂಬರ್ ಇಂಟರ್ ನ್ಯಾಶನಲ್ ಮಂಗಳೂರು ಹಾಗೂ ಮಂಗಳೂರಿನ ಪ್ರಸಾದ್ ಆರ್ಟ್ ಗ್ಯಾಲರಿಯ ಜಂಟಿ ಆಶ್ರಯದಲ್ಲಿ ನಗರದ ಬಲ್ಲಾಳ್ ಬಾಗ್ ನಲ್ಲಿರುವ ಪ್ರಸಾದ್ ಆರ್ಟ್ ಗ್ಯಾಲರಿಯಲ್ಲಿ ಮಕ್ಕಳ ದಿನಾಚರಣೆಯ ಪ್ರಯುಕ್ತ ವಿವಿಧ ಸ್ಪರ್ಧೆ ನಡೆಯಿತು.

ಸಂಗೀತ, ಡ್ಯಾನ್ಸ್, ಕಥೆ ಹೇಳುವ ಸ್ಪರ್ಧೆ, ಮೆಮೊರಿ ಗೇಮ್ಸ್, ಯೋಗ ಮುಂತಾದ ಸ್ಪರ್ಧೆಗಳನ್ನು ಮಕ್ಕಳಿಗೆ ಏರ್ಪಡಿಸಲಾಯಿತು. 


ಪ್ರಸಾದ್ ಆರ್ಟ್ ಗ್ಯಾಲರಿಯ ನಿರ್ದೇಶಕ ಕೋಟಿ ಪ್ರಸಾದ್ ಆಳ್ವ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಯಾಗಿ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಇದರ ಅಧ್ಯಕ್ಷ ಹರಿಪ್ರಸಾದ್ ರೈ, ಅತಿಥಿಗಳಾಗಿ ಮಂಗಳೂರು ಮೀನುಗಾರಿಕಾ ಕಾಲೇಜಿನ ನಿವೃತ್ತ ಡೀನ್ ಪ್ರೊಫೆಸರ್ ಡಾ.  ಶಿವಪ್ರಕಾಶ್ ಹಾಗೂ  ಪ್ರಸಾದ್ ಆರ್ಟ್ ಗ್ಯಾಲರಿಯ ಗಣೇಶ್ ಸೋಮಯಾಜಿ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಪ್ರಸಿದ್ಧ ಕಲಾವಿದ ಗಣೇಶ್ ಸೋಮಯಾಜಿ ಮಾತನಾಡಿ, ಇಂತಹ ಪ್ರದರ್ಶನವು ಮಕ್ಕಳ ಜೀವನದ ಟರ್ನಿಂಗ್ ಪಾಯಿಂಟ್ ಹಾಗೂ ಅವರಿಗೆ ಮುಂದಕ್ಕೆ ಬರಲು ಅವಕಾಶ ನೀಡುತ್ತದೆ ಎಂದರು.

ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಇದರ ಅಧ್ಯಕ್ಷ ಹರಿಪ್ರಸಾದ್ ರೈ ಅವರು ಮಾತನಾಡಿ, ಮಕ್ಕಳಲ್ಲಿರುವ ಸೂಕ್ತ ಪ್ರತಿಭೆಯನ್ನು ಹೊರ ತರಲು ಇಂತಹ ಸ್ಪರ್ಧೆಗಳು ಸಹಕಾರಿ. ಹೆಚ್ಚು ಹೆಚ್ಚು ಮಕ್ಕಳು ಮುಂದಿನ ದಿನಗಳಲ್ಲಿ ಇಂತಹ ಸ್ಪರ್ಧೆಗಳಲ್ಲಿ ಭಾಗವಹಿಸುವಂತಾಗಲಿ ಎಂದು ಆಶಿಸಿದರು. 

ಲಯನ್ಸ್ ವತಿಯಿಂದ ಶಾಂತಿಗಾಗಿ ನಡೆದ ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಬಹುಮಾನ ಪಡೆದ ನಿಕಿತಾ ಹಾಗೂ ಪ್ರೋತ್ಸಾಹಕರ ಬಹುಮಾನ ಪಡೆದ ನಿಶಿತಾ ಸಹೋದರಿಯರಿಗೆ ಸ್ಮರಣಿಕೆ ನೀಡಲಾಯಿತು. ಅತಿಥಿಯಾಗಿ ಮೀನುಗಾರಿಕಾ ಕಾಲೇಜಿನ ನಿವೃತ್ತ ಡೀನ್ ಪ್ರೊಫೆಸರ್ ಡಾ. ಶಿವಪ್ರಕಾಶ್ ಅವರು ಮಾತನಾಡಿ, ಯಾವುದೇ ಕಲೆಯಾಗಲಿ, ಆ ಕಲೆಯನ್ನು ಉಳಿಸಿ ಬೆಳೆಸುವುದು ನಮ್ಮ ಕರ್ತವ್ಯ. ಕಲೆಯಲ್ಲಿ ನೈಜ್ಯತೆ ಇರಬೇಕೆಂದು ಉದಾಹರಣೆ ಸಹಿತ ವಿವರಿಸಿದರು ಹಾಗೂ ಸ್ಥಳದಲ್ಲೇ ವಿದ್ಯಾರ್ಥಿನಿಯ ಭಾವಚಿತ್ರವನ್ನು ಬಿಡಿಸಿ ಗಮನ ಸೆಳೆದರು. 

ಮಕ್ಕಳ ದಿನಾಚರಣೆ ಪ್ರಯುಕ್ತ ನಡೆದ ವಿವಿಧ ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ ಹಾಗೂ ಭಾಗವಹಿಸಿದ ಎಲ್ಲ ಮಕ್ಕಳಿಗೆ ಸಮಾಧಾನಕರ ಬಹುಮಾನ ವಿತರಿಸಲಾಯಿತು. 


ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್ ನ ಫ್ಲೇವಿ ಗ್ಲಾಡಿಸ್  ಡಿಮೆಲ್ಲೋ, ಪೂರ್ಣಿಮಾ ರತನ್, ರಂಜಿತ್, ಲತಾ ಕಲ್ಲಡ್ಕ ಮುಂತಾದವರು ಉಪಸ್ಥಿತರಿದ್ದರು.

ಪ್ರಸಾದ್ ಆರ್ಟ್ ಗ್ಯಾಲರಿಯ ಮೇಘನಾ ಹಾಗೂ ಗಣೇಶ್ ಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು. ಸಂದೀಪ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು