ಇತ್ತೀಚಿನ ಸುದ್ದಿ
ಕೋಲಾರದಲ್ಲಿ ದತ್ತಮಾಲಾಧಾರಿಗಳ ಬಸ್ ಮೇಲೆ ಕಲ್ಲು ತೂರಾಟ: ಮುತಾಲಿಕ್ ಅಕ್ರೋಶ
14/11/2021, 12:36
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಕೋಲಾರದಲ್ಲಿ ದತ್ತಮಾಲಾಧಾರಿಗಳ ಬಸ್ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದು, ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅಕ್ರೋಶ ವ್ಯಕ್ತಪಡಿಸಿದ್ದಾರೆ.
ಭಜನೆ ಮಾಡಿಕೊಂಡು ಬರುವಾಗ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಕಿಡಿಗೇಡಿಗಳನ್ನ ಕೂಡಲೇ ಬಂಧಿಸಬೇಕು. ಇನ್ಮೇಲೆ ದಾದಾಗಿರಿ, ತಾಲಿಬಾನ್ ಕರಣ ಇಲ್ಲಿ ನಡೆಯೋದಿಲ್ಲ ಎಂದು ಮುತಾಲಿಕ್ ಹೇಳಿದ್ದಾರೆ.
ಡಿಸಿ ಅವ್ರಿಗೆ ಹೇಳ್ತೀನಿ ಕೂಡಲೇ ಹದ್ದು ಬಸ್ತಿನಲ್ಲಿಡಬೇಕು. ಅಭಿಯಾನಕ್ಕೆ ಸೂಕ್ಷ್ಮ ಪ್ರದೇಶದಲ್ಲಿ ರಕ್ಷಣೆ ಯಾಕೆ ಕೊಡಲಿಲ್ಲ.ಮುಖ್ಯಮಂತ್ರಿ, ಗೃಹಸಚಿವರಿಗೆ ಹೇಳ್ತಾ ಇದ್ದೀನಿ ಕೂಡಲೇ ಅವ್ರನ್ನ ಬಂಧಿಸಬೇಕು
ಬಂಧಿಸದಿದ್ರೆ ನಾನೇ ನಾಳೆ ಕೋಲಾರಕ್ಕೆ ಹೋಗುವುದಕ್ಕೆ ನಿಶ್ಚಿತ ಮಾಡಿದ್ದೇನೆ ಎಂದು ಚಿಕ್ಕಮಗಳೂರಿನಲ್ಲಿ ಪ್ರಮೋದ್ ಮುತಾಲಿಕ್
ಕಿಡಿ ಜಾರಿದರು.