10:33 PM Thursday1 - January 2026
ಬ್ರೇಕಿಂಗ್ ನ್ಯೂಸ್
6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ಮೂಡಿಗೆರೆಯಲ್ಲಿ ಮಲೆನಾಡಿನ ಭೋಜನ ಸವಿದ ಖ್ಯಾತ ಹಾಸ್ಯ ನಟ ಟೆನಿಸ್ ಕೃಷ್ಣ 

15/11/2021, 10:37

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com

ಪ್ರಖ್ಯಾತ ಹಾಸ್ಯ ನಟ, ಕನ್ನಡದ ಹಲವು ಚಲನಚಿತ್ರಗಳಲ್ಲಿ ಅಭಿನಯಿಸಿರುವ ಟೆನಿಸ್ ಕೃಷ್ಣ ಜಿಲ್ಲೆಯ ಮೂಡಿಗೆರೆಗೆ ಭಾನುವಾರ ಭೇಟಿ ನೀಡಿದ್ದರು. 

ಧರ್ಮಸ್ಥಳಕ್ಕೆ ಭೇಟಿ ನೀಡಿದ್ದ ಅವರು ಮೂಡಿಗೆರೆ ಮಾರ್ಗವಾಗಿ ಹಿಂತಿರುಗಿ ಬರುವಾಗ ಕಾಫಿನಾಡಿನ ಬೆಟ್ಟಗುಡ್ಡಗಳ ಪ್ರಕೃತಿ ಸೌಂದರ್ಯವನ್ನು ವೀಕ್ಷಿಸುತ್ತಾ ಬಂದರು. ಮಧ್ಯಾಹ್ನ ಮೂಡಿಗೆರೆ ಪಟ್ಟಣಕ್ಕೆ ಆಗಮಿಸಿ ಶತಮಾನದಷ್ಟು ಹಳೆಯ ಮನೆಯಲ್ಲಿ ಪ್ರಾರಂಭಿಸಲಾಗಿರುವ ಖಲೀಲ್ಸ್ ಕಿಚನ್ಸ್ ಹೊಟೇಲಿಗೆ ಭೇಟಿ ನೀಡಿ ಭೋಜನ ಸವಿದರು. ಮಲೆನಾಡು-ಕರಾವಳಿ ಭಾಗದ ವಿಶೇಷ ಖಾದ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ತಲೆಗೆ ಶ್ವೇತವಸ್ತ್ರ ಕಟ್ಟಿಕೊಂಡಿದ್ದ ಟೆನಿಸ್ ಕೃಷ್ಣ ವಿಶೇಷವಾಗಿ ಎಲ್ಲರ ಗಮನ ಸೆಳೆದರು.  

ಟೆನಿಸ್ ಕೃಷ್ಣ ಹಿಂದೆ ಚಿತ್ರರಂಗದ ದೊಡ್ಡ ಸ್ಟಾರ್ ನಟರಾಗಿದ್ದ ಡಾ.ರಾಜ್ ಕುಮಾರ್, ವಿಷ್ಣುವರ್ಧನ್ ಸಹಿತ ಹಲವಾರು ನಟರ ಜೊತೆ ಹಾಸ್ಯ ನಟನಾಗಿ ಅಭಿನಯಿಸಿ ಕನ್ನಡಿಗರಿಗೆ ಚಿರಪರಿಚಿತರಾದವರು.

ಇತ್ತೀಚಿನ ಸುದ್ದಿ

ಜಾಹೀರಾತು