8:29 PM Sunday24 - November 2024
ಬ್ರೇಕಿಂಗ್ ನ್ಯೂಸ್
ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ… ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣಗೆ ಜಯ: ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಖಭಂಗ ​ ಮಹಾರಾಷ್ಟ್ರ: ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ? ಆರೆಸ್ಸೆಸ್ ಮುಖ್ಯಸ್ಥ ಡಾ. ಭಾಗವತ್ ಡಿ. 7ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ… ಬೆಂಗಳೂರು ಮತ್ತು ಚೆನ್ನೈಗೆ ಆಸ್ಟ್ರೇಲಿಯನ್ ಡಿಜಿಟೆಕ್ ಟ್ರೇಡ್ ಮಿಷನ್ ಭೇಟಿ ವೈಜ್ಞಾನಿಕತೆ, ವೈಚಾರಿಕತೆ ಇಲ್ಲದ ಶಿಕ್ಷಣದಿಂದ ಮಾನವೀಯ ಮೌಲ್ಯ ಬೆಳೆಸಿಕೊಳ್ಳಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ ನೀರು ಹರಿಸುವ ನಿರ್ಣಯದಿಂದ ನಮ್ಮ ಭಾಗದ ರೈತರಿಗೆ ಅನ್ಯಾಯ: ಮಾಜಿ ಸಚಿವ ನರಸಿಂಹ… ಫೆಸ್ಟಿವಲ್ ಆಫ್ ಆಸ್ಟ್ರೇಲಿಯಾ: ಶಿಕ್ಷಣದ ಶ್ರೇಷ್ಠತೆ ಮತ್ತು ಪ್ರಿಮಿಯಂ ಎಫ್ & ಬಿ…

ಇತ್ತೀಚಿನ ಸುದ್ದಿ

ದಾವಣಗೆರೆ ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಕೆಂಗೋ ಹನುಮಂತಪ್ಪ ನಿಧನ: ಹಲವು ಗಣ್ಯರ ಸಂತಾಪ

30/05/2021, 03:35

ವಿಜಯಪುರ(reporterkarnataka news);ದಾವಣಗೆರೆ ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಹಾಗೂ ಬಯಲು ಸೀಮೆಯ ಪ್ರದೇಶ ಅಭಿವೃದ್ಧಿ ಮಂಡಳಿಯ ಮಾಜಿ ಅಧ್ಯಕ್ಷ ಕೆಂಗೋ ಹನುಮಂತಪ್ಪ ಅವರು ನಿಧನರಾದರು.

ದಾವಣಗೆರೆ ಜಿಲ್ಲೆಯ ಚಿಕ್ಕಬೂದಿಹಾಳದವರಾದ ಹನುಮಂತಪ್ಪ ಅವರು ಕುರುಬರ ಸಂಘದ ಅಧ್ಯಕ್ಷರಾಗಿ ಸಮಾಜದ ಏಳಿಗೆಗೆ ಅಪಾರ ಕೊಡುಗೆ ನೀಡಿದ್ದಾರೆ.

ಬಯಲು ಸೀಮೆ ಪ್ರದೇಶ ಮಂಡಳಿಯ ಅಧ್ಯಕ್ಷರಾಗಿದ್ದಾಗ

ತಮ್ಮ ವೀವೆಚನಾ ಕೋಟದಡಿಯಲ್ಲಿ ಬರುವ ಅನುದಾನದಲ್ಲಿ ಅನೇಕ ಅಭಿವೃದ್ಧಿ ಕಾರ್ಯ ನಡೆಸಿದ್ದಾರೆ.

ಶಿರನಾಳ ಗ್ರಾಮದ ಸಂ ನಂ 179 ರಲ್ಲಿ  ಹರಿವೂ ಹಳ್ಳಕ್ಕೆ ಅಡ್ಡಲಾಗಿ ಒಂದು ನಾಲ ಬದುಕೆ  2 ಲಕ್ಷ ರೂ. ಅನುದಾನ ಹಂಚಿಕೆ 

ಮಾಡಿದ್ದಾರೆ.  ಇದರಿಂದ ಇಲ್ಲಿರುವ ಕೋಳವೆ ಬಾವಿಯಲ್ಲಿ ಅಂತರ್ಜಲ ವೃದ್ದಿಯಾಯಿತು. 

ಇವರು ಎರಡು ಬಾರಿ ದಾವಣಗೆರೆ ಜಿಲ್ಲೆಯಲ್ಲಿ ಕಾಂಗ್ರೆಸ್ ನಿಂದ ಎಂ ಎಲ್ ಎ ಹಾಗೂ ಎಂಪಿ ಟಿಕೆಟ್ ಗೆ ಪ್ರಯತ್ನಿಸಿದ್ದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಶ್ಯಾಮನೂರು ಶಿವಶಂಕರಪ್ಪ ಅವರ ಆಪ್ತರಾಗಿದ್ದರು.

ಸದಾ ಹಸನ್ಮುಖಿಯಾದ ಅವರ ನಿಧನದಿಂದ ದೊಡ್ಡ ಮುಖಂಡನ ಕಳೆದುಕೊಂಡಂತಾಗಿದೆ. ದಾವಣಗೆರೆ ಜಿಲ್ಲಾ ಕುರುಬರ ಸಂಘ

ಹಾಗೂ ರಾಜ್ಯ ಕುರುಬರ ಸಂಘಕ್ಕೆ ಭಾರೀ ನಷ್ಟ ಉಂಟಾಗಿದೆ. ಇವರು ದಾವಣಗೆರೆ, ಬಳ್ಳಾರಿ ಮತ್ತು ಹಾವೆರಿ ಜಿಲ್ಲೆಯಲ್ಲಿ ಪ್ರಸಿದ್ಧರಾಗಿದ್ದರು.

ಹನುಮಂತಪ್ಪ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕ ಮಂದಿ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು