12:42 PM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಮೇ 31ರಿಂದ ಒಂದು ವಾರ ಶಿವಮೊಗ್ಗ ಜಿಲ್ಲೆ ಸಂಪೂರ್ಣ ಲಾಕ್ ಡೌನ್: ಬ್ಯಾಂಕ್, ಸರಕಾರಿ ಕಚೇರಿ ಕೂಡ ಬಂದ್

30/05/2021, 04:35

ಶಿವಮೊಗ್ಗ(reporterkarnataka news) :  ಮೇ 31 ರಿಂದ ಜೂನ್ 7 ರವರೆಗೆ ಶಿವಮೊಗ್ಗ ಜಿಲ್ಲಾದ್ಯಂತ ಸಂಪೂರ್ಣ ಲಾಕ್ ಡೌನ್ ಮಾಡಲಾಗಿದ್ದು, ಈ ಅವಧಿಯಲ್ಲಿ ಹಾಲು ಮತ್ತು ಔಷಧಿ ಖರೀದಿಗೆ ಮಾತ್ರ ಅವಕಾಶ ನೀಡಲಾಗಿದೆ ಎಂದು  ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ತರಕಾರಿ ಖರೀದಿಗೆ ತಳ್ಳುಗಾಡಿಯಲ್ಲಿ ಮಾತ್ರ ಅವಕಾಶ ನೀಡಲಾಗಿದೆ. ದಿನಸಿ ಅಂಗಡಿಗಳಿಗೆ 6 ಗಂಟೆಯಿಂದ 8 ಗಂಟೆಯವರೆಗೆ ಮಾತ್ರ ತರೆಯಬಹುದು. ಲಾಕ್ ಡೌನ್ ಅವಧಿಯಲ್ಲಿ ಬ್ಯಾಂಕ್ ಸೇವೆಗಳು, ಸರಕಾರಿ ಕಚೇರಿ ಸಹ ಸ್ಥಗಿತಗೊಳ್ಳಲಿದೆ. ಅವಶ್ಯಕ ಸರಕಾರಿ ಕಚೇರಿಗಳು ಮಾತ್ರ ಕಾರ್ಯನಿರ್ವಹಿಸುತ್ತವೆ. ಲಾಕ್ ಡೌನ್ ಅವಧಿಯಲ್ಲಿ ಸಾರ್ವಜನಿಕರು ಸಹಕರಿಸುವಂತೆ ಸಚಿವ ಈಶ್ವರಪ್ಪ ಮನವಿ ಮಾಡಿದ್ದಾರೆ.

ಲಾಕ್ ಡೌನ್ ಇದ್ದರೂ ಅನಗತ್ಯವಾಗಿ ಕದ್ದುಮುಚ್ಚಿ ಓಡಾಟ ಜಾಸ್ತಿಯಾಗಿದೆ. ಅನಿವಾರ್ಯವಾಗಿ ಕಠಿಣ ಲಾಕ್ ಡೌನ್ ಕೈಗೊಳ್ಳುವಂತಾಗಿದೆ. ಲಾಕ್ ಡೌನ್ ವೇಳೆ ಅನಗತ್ಯವಾಗಿ ಓಡಾಡುವವರ ವಾಹನ ಸಹ ಸೀಜ್ ಮಾಡಲಾಗುತ್ತದೆ. ಜೊತೆಗೆ ವಾಹನ ಚಾಲಕ ಹಾಗೂ ಸವಾರನನ್ನು ಪೊಲೀಸರು ವಶಕ್ಕೆ ಪಡೆಯಲು ಸಚಿವರ ಸೂಚನೆ ನೀಡಲಾಗಿದೆ ಎಂದು ಈಶ್ವರಪ್ಪ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು