5:25 AM Thursday28 - November 2024
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ, ಗರ್ಭಿಣಿಯರ ಸಾವು: ತನಿಖೆಗೆ ಅಗ್ರಹಿಸಿ ಜನವಾದಿ ಮಹಿಳಾ ಸಂಘಟನೆ… ಲಂಡನ್ ವಾಲ್ವ್ಸ್ 2024 ರಲ್ಲಿ ಮಿಂಚಿದ ಭಾರತ: ಹೃದಯ ಕವಾಟ ಆವಿಷ್ಕಾರ ‘ಮೈವಾಲ್… ಹುಣಸಗಿ: ವಿದ್ಯಾರ್ಥಿಗಳಿಂದ ಕೆಎಸ್ಸಾರ್ಟಿಸಿ ಬಸ್ ತಡೆದು ಪ್ರತಿಭಟನೆ; ಸಾರ್ವಜನಿಕರ ಸಾಥ್ ಅಡಿಕೆ ಬೆಳೆಗಾರರ ಸಮಸ್ಯೆ: ಕರಾವಳಿ ಸಂಸದರಿಂದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್… ಡಿ.8ರಂದು ಉರ್ವ ಪೊಂಪೈ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಹಬ್ಬ: ಬಿಷಪ್ ಡಾ. ಪೀಟರ್… ಕರ್ತವ್ಯಲೋಪ: ಚಿಕ್ಕಮಗಳೂರು ನಗರ ಠಾಣೆ ಇನ್ಸ್ ಪೆಕ್ಟರ್ ರೇಣುಕಾ ಪ್ರಸಾದ್ ಅಮಾನತು ರಾಜ್ಯ ಸರಕಾರದ ಜನಪರ ಕೆಲಸಕ್ಕೆ ಮತದಾರರ ಜೈ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್… ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ…

ಇತ್ತೀಚಿನ ಸುದ್ದಿ

ಸದ್ಯ ಬಸ್ ಪ್ರಯಾಣ ದರ ಇಳಿಕೆ ಇಲ್ಲ, ಡಿಸೇಲ್ ದರ 75 ರೂ. ಗೆ ಇಳಿದರೆ ಮಾತ್ರ ದರ ಇಳಿಕೆ: ಕುಯಿಲಾಡಿ ಸುರೇಶ್ ನಾಯಕ್ 

16/11/2021, 10:28

ಉಡುಪಿ( reporterkarnataka.com): ಡಿಸೇಲ್ ದರ 75 ರೂ. ಗೆ ಇಳಿದರೆ ಬಸ್ ಪ್ರಯಾಣ ದರವನ್ನು ಇಳಿಕೆ ಮಾಡುತ್ತೇವೆ. ಆದರೆ ಸದ್ಯ ಬಸ್ ಪ್ರಮಾಣ ದರ ಇಳಿಕೆ ಮಾಡಲು ಸಾಧ್ಯವಿಲ್ಲ ಎಂದು ಉಡುಪಿ ಜಿಲ್ಲಾ ಸಿಟಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ

ಈಗಿರುವ ಬಸ್ ಪ್ರಯಾಣ ದರ ಡಿಸೇಲ್ ಗೆ ₹ 85 ಆದಾಗ ಹೆಚ್ಚು ಮಾಡಿರುವ ದರ. ಆದಾದ ಮೇಲೆ ಬಸ್ ದರ ಹೆಚ್ಚು ಮಾಡಿಲ್ಲ. ಡಿಸೇಲ್ ದರ ₹103ಕ್ಕೆ ಏರಿಕೆಯಾದಗಲೂ ಜಾಸ್ತಿ ಮಾಡಿಲ್ಲ ಎಂದು ತಿಳಿಸಿದ್ದಾರೆ.

ಡಿಸೇಲ್ ದರ ₹75ರಿಂದ 70ಕ್ಕೆ ಇಳಿದರೆ ಸಾರಿಗೆ ವ್ಯವಸ್ಥೆ ಉಳಿಯುತ್ತದೆ. ಕೊರೊನಾ ಬಂದ ನಂತರ ಜನರು ಕಾರು, ಬೈಕ್ ಗಳಲ್ಲಿ‌ ಹೆಚ್ಚು ಓಡಾಡಲು ಆರಂಭಿಸಿದ್ದಾರೆ. ಬಸ್ ನಲ್ಲಿ ಪ್ರಯಾಣಿಸುವ ಜನರ ಸಂಖ್ಯೆ ಕಡಿಮೆಯಾಗಿದೆ. ಇದು ಸಾರಿಗೆ ವ್ಯವಹಾರಕ್ಕೆ ದೊಡ್ಡ ಹೊಡೆತ ನೀಡಿದೆ.

ಸದ್ಯ ಕೊರೊನಾ ಪ್ರಭಾವ ಕಡಿಮೆಯಾಗಿರುವುದರಿಂದ ಜನರು ಬಸ್ ಸಂಚರಿಸಲು ಶುರು ಮಾಡಿದ್ದಾರೆ. ಆದರೆ ಈಗಿನ ಡಿಸೇಲ್ ದರದಲ್ಲಿ ಸಾರಿಗೆ ವ್ಯವಹಾರ ನಡೆಸುವುದು ತುಂಬಾ ಕಷ್ಟವಾಗಿದೆ. ಹೀಗಾಗಿ ಡಿಸೇಲ್ ದರ ₹75 ಗೆ ಇಳಿದರೆ ಬಸ್ ಪ್ರಯಾಣ ದರವನ್ನು ಇಳಿಕೆ ಮಾಡುತ್ತೇವೆ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು