7:22 AM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಮಸ್ಕಿ ಸಿರಿವಾರ ಪಟ್ಟಣದಲ್ಲಿ ಬಿಜೆಪಿ ಜನ ಸ್ವರಾಜ್ ಸಮಾವೇಶ: ಕೇಂದ್ರ- ರಾಜ್ಯ ಸಚಿವರು ಭಾಗಿ

17/11/2021, 20:40

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಜನ ಸ್ವರಾಜ್ ಸಮಾವೇಶವು ರಾಜ್ಯದಲ್ಲಿ 4 ತಂಡಗಳಾಗಿ ನಡೆಯಲಿದ್ದು, 1ನೇ ತಂಡದಲ್ಲಿ ಸಮಾವೇಶಕ್ಕೆ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವರಾದ ಭಗವಂತ್ ಖೂಬಾ ಜಿ ರಾಜ್ಯ ಸಚಿವರಾದ ,ಅರಗ ಜ್ಞಾನೇಂದ್ರ,ವಿ. ಸೋಮಣ್ಣ , ಮುರುಗೇಶ್ ನಿರಾಣಿ  ಮತ್ತು ಶಾಸಕರುಗಳಾದ ರಾಜೇಗೌಡ, ಎನ್. ಮಹೇಶ್ ರಾಜ್ಯ ಬಿಜೆಪಿ ಉಪಾಧ್ಯಕ್ಷ ಗಳಾದ ಮಾಲೀಕಯ್ಯ ಗುತ್ತೇದಾರ್ ಪ್ರತಾಪ್ ಸಿಂಹ ಈ ಜಿಲ್ಲೆಯ ಸಂಸದರು, ಶಾಸಕರು ಮಾಜಿ ಶಾಸಕರು ಸಮಾವೇಶಕ್ಕೆ ಆಗಮಿಸಲಿದ್ದಾರೆ ಎಂದು ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಹೇಳಿದರು.

ಮಸ್ಕಿ ಬಿಜೆಪಿ ಕಾರ್ಯಾಲಯದಲ್ಲಿ ಜನ ಸ್ವರಾಜ್ ರಾಜ್ಯ ಸಮಾವೇಶ ಯಾತ್ರೆಯ ಕುರಿತಾಗಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಶುಭಾಶಯಗಳನ್ನು ವಿಧಾನ ಪರಿಷತ್ ಚುನಾವಣೆಯ ಜನ ಸುರಾಜ್ ಸಮಾವೇಶದ ಕುರುತಾಗಿ  ನಾಯಕರಾದ ಪ್ರತಾಪಗೌಡ ಪಾಟೀಲ್ ಮಾಜಿ ಶಾಸಕರು ಪತ್ರಕರ್ತರು ಜೊತೆ ಸಮಾವೇಶವು ಸಿರಿವಾರ ಪಟ್ಟಣದಲ್ಲಿ ನಡೆಯಲಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ಶಿವಪುತ್ರಪ್ಪ ಅರಳಹಳ್ಳಿ ಹಾಗೂ ಜಿಲ್ಲಾ ಬಿಜೆಪಿ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಪ್ರಾಣೇಶ ದೇಶಪಾಂಡೆ, ಜಿಲ್ಲಾ ಉಪಾಧ್ಯಕ್ಷರಾದ ಅಪ್ಪಾಜಿ ಗೌಡ ಪಾಟೀಲ್ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಶರಣಬಸವ ಸೊಪ್ಪಿಮಠ ಮಲ್ಲಿಕಾರ್ಜುನ ಯಾದವ್ ಮತ್ತು ಸಂಗಮೇಶ ಹತ್ತಿಗುಡ್ಡ ಪತ್ರಿಕಾಗೋಷ್ಠಿಯಲ್ಲಿ  ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು