3:54 AM Thursday3 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಹವಾಮಾನ ವೈಪರೀತ್ಯ: ಮಲ್ಪೆಯ 2 ಬೋಟ್ ಮುಳುಗಡೆ; ಕೋಟ್ಯಾಂತರ ರೂ. ನಷ್ಟ; 7 ಮಂದಿ ಮೀನುಗಾರರ ರಕ್ಷಣೆ 

18/11/2021, 10:46

ಉಡುಪಿ(reporterkarnataka.com): ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಚಂಡಮಾರುತದ ಹಿನ್ನೆಲೆಯಲ್ಲಿ ಅರಬ್ಬಿ ಸಮುದ್ರದಲ್ಲೂ  ಗಾಳಿಯ ಒತ್ತಡದಿಂದ ಹಾಗು ಅಲೆಗಳ ಬೋರ್ಗರೆತ ಹೆಚ್ಚುತ್ತಿದ್ದು, ಅಲೆಗಳ ಹೊಡೆತಕ್ಕೆ ಮೀನುಗಾರಿಕೆಗೆ ತೆರಳಿದ್ದ ಮಲ್ಪೆಯ ಎರಡು ಬೋಟುಗಳು ಮುಳುಗಡೆಯಾಗಿದೆ. ಗೋವಾ, ಪಣಜಿಯಲ್ಲಿ ಸಮುದ್ರ ವ್ಯಾಪ್ತಿಯಲ್ಲಿ ಬೋಟ್ ಮುಳುಗಡೆಯಾಗಿದ್ದು ಅದರಲ್ಲಿದ್ದ 7 ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ 

ಮಾತಾ ಜಟಗೇಶ್ವರ, ಪಲ್ಲಕ್ ಹೆಸರಿನ ಬೋಟ್ ಗಳು ಮಲ್ಪೆಯಿಂದ ಗೋವಾದತ್ತ ಮೀನುಗಾರಿಕೆಗೆ ತೆರಳಿದ್ದ ಸಂದರ್ಭದಲ್ಲಿ  ಅಲೆಗಳ ಅಬ್ಬರ ಜಾಸ್ತಿಯಾಗಿತ್ತು. ಈ ವೇಳೆ ಇಂಜಿನ್ ಸಹ ಕೈ ಕೊಟ್ಟಿದೆ. ಇದರಿಂದಾಗಿ ಮುಳುಗಡೆಯಾಗಿ ಕೋಟ್ಯಾಂತರ ರೂಪಾಯಿ ನಷ್ಟವಾಗಿದೆ . ಕಡಲ ಪ್ರಿಯ ಹೆಸರಿನ ಬೋಟ್ ಸಹ ಮುಳುಗಡೆ ಹಂತದಲ್ಲಿದ್ದು ಇದನ್ನೂ ಸಹ ರಕ್ಷಣೆ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು