4:10 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಕಾಪು: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕ್ರಿಕೆಟ್ ಪಟು ಆಸ್ಪತ್ರೆಯಲ್ಲಿ ಮೃತ್ಯು

18/11/2021, 23:15

ಪಡುಬಿದ್ರಿ(reporterkarnataka.com): ಬೆಳಪುವಿನ ಬದ್ರಿಯಾ ಮಸೀದಿ ಬಳಿ ಕಳೆದ ಶುಕ್ರವಾರ ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಇಂದು ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ.

ಮೃತ ಸವಾರನನ್ನು ಕ್ರಿಕೆಟ್ ಆಟಗಾರ ಬೆಳಪುವಿನ ಫರಾನ್ ಆಲಿ (21) ಎಂದು ಗುರುತಿಸಲಾಗಿದೆ. ಕಳೆದ ಶುಕ್ರವಾರ ತಡ ರಾತ್ರಿ ಪುಂಚಲಕಾಡಿನಿಂದ ಬೆಳಪುಗೆ ಬರುವ ವೇಳೆ ಬದ್ರಿಯಾ ಮಸೀದಿ ಬಳಿ  ಫರಾನ್ ಬೈಕ್ ಹೋರಿಗೆ ಢಿಕ್ಕಿಯಾಗಿತ್ತು. ಅಪಘಾತದ ತೀವ್ರತೆಗೆ ಫರಾನ್ ಆಲಿಯ ತಲೆಗೆ ಗಂಭೀರ ಗಾಯವಾಗಿತ್ತು. ಕೂಡಲೇ ಸ್ಥಳೀಯರು ಆತನನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ  ದಾಖಲು ಮಾಡಿದ್ದರು. ಆದರೆ ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಫರಾನ್ ಆಲಿ ದುಬೈಯಲ್ಲಿ ಉದ್ಯೋಗದಲ್ಲಿದ್ದು, ನಾಲ್ಕು ತಿಂಗಳ ಹಿಂದೆ ರಜೆಯಲ್ಲಿ ಮರಳಿದ್ದರು. ಬೆಳಪುವಿನ ಬೆಸ್ಟ್ ಬೆಳಪ ಕ್ರಿಕೆಟ್ ತಂಡದ ಸದಸ್ಯರಾಗಿದ್ದು, ಉತ್ತಮ ಆಟಗಾರನಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು